Close Menu
    What's Hot

    ಕಾಕ್‌ಪಿಟ್‌ನಲ್ಲಿ ಪೈಲಟ್‌ಗೆ ಇರಿತ; ದುಬೈ–ಇಸ್ರೇಲ್ ವಿಮಾನ ದುರಂತ ತಪ್ಪಿಸಿ 180 ಜನರ ಜೀವ ಉಳಿಸಿದ ‘ಹೀರೋ’ ಕ್ಯಾಪ್ಟನ್ ಸ್ಮಿತ್ ಮಚ್ಚಾರ್‌ಗೆ ಪ್ರಯಾಣಿಕರಲ್ಲಿದ್ದ ದಂತವೈದ್ಯನಿಂದ ತಕ್ಷಣದ ಚಿಕಿತ್ಸೆ

    October 1, 2026

    ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ; ಸಂಸ್ಥೆ ಹಾಗೂ ಘಟಕದ ಮುಖ್ಯಸ್ಥರ ನಿರ್ಲಕ್ಷ್ಯ ಆರೋಪಿಸಿ ಎಫ್ಐಆರ್

    October 1, 2026

    ಸೌಜನ್ಯಾ ಪ್ರಕರಣ ಮರುತನಿಖೆ: SITಯಿಂದ ಹಿಂದೆ ಸರಿಯಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ಮನವಿ

    October 1, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಬೇಟೆಗಾರರು-ಅರಣ್ಯ ಸಿಬ್ಬಂದಿ ನಡುವೆ ಗುಂಡಿನ ಕಾಳಗ; ಮೂವರು ಸಾವು, ಶಾಗ್ಯದಲ್ಲಿ ಉದ್ವಿಗ್ನ
    ಅಪರಾಧ

    ಬೇಟೆಗಾರರು-ಅರಣ್ಯ ಸಿಬ್ಬಂದಿ ನಡುವೆ ಗುಂಡಿನ ಕಾಳಗ; ಮೂವರು ಸಾವು, ಶಾಗ್ಯದಲ್ಲಿ ಉದ್ವಿಗ್ನ

    adminBy adminAugust 15, 2026Updated:August 15, 2026No Comments1 Min Read

    ಚಾಮರಾಜನಗರ: ಕಾವೇರಿ ವನ್ಯಧಾಮದ ಶಾಗ್ಯ ಅರಣ್ಯ ಪ್ರದೇಶದಲ್ಲಿ ಮುಂಜಾನೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಬೇಟೆಗಾರರು ಮೃತಪಟ್ಟಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ವನ್ಯಜೀವಿಗಳ ಬೇಟೆಗೆ ಕಾಡಿಗೆ ನುಗ್ಗಿದ್ದ ಬೇಟೆಗಾರರು ಹಾಗೂ ಅರಣ್ಯ ಸಿಬ್ಬಂದಿ ನಡುವೆ ಗುಂಡಿನ ಕಾಳಗ ನಡೆದಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

    ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಖಚಿತ ಮಾಹಿತಿ ಆಧರಿಸಿ ಅರಣ್ಯ ಸಿಬ್ಬಂದಿ ಕಾರ್ಯಾಚರಣೆಗೆ ತೆರಳಿದ್ದ ವೇಳೆ, ಬೇಟೆಗಾರರು ಏಕಾಏಕಿ ಸಿಬ್ಬಂದಿ ಮೇಲೆ ಗುಂಡು ಹಾರಿಸಲು ಮುಂದಾಗಿದ್ದಾರೆ. ಈ ವೇಳೆ ಅರಣ್ಯ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದು, ಗುಂಡಿನ ಚಕಮಕಿಯಲ್ಲಿ ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ.

    ಮೃತರನ್ನು ಅಂತೋಣಿಸ್ವಾಮಿ, ಪೀಟರ್ ಹಾಗೂ ಕುಮಾರ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಒಬ್ಬ ಅರಣ್ಯ ಸಿಬ್ಬಂದಿಗೂ ಗಾಯವಾಗಿದ್ದು, ಅವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ಮತ್ತೊಬ್ಬ ಬೇಟೆಗಾರ ಪರಾರಿಯಾಗಿರುವ ಮಾಹಿತಿ ಲಭ್ಯವಾಗಿದೆ.

    ಕಾರ್ಯಾಚರಣೆಯಲ್ಲಿ ಒಂದು ನಾಡಬಂದೂಕು ಹಾಗೂ ಜಿಂಕೆಯ ಮೃತದೇಹ ವಶಪಡಿಸಿಕೊಳ್ಳಲಾಗಿದೆ. ಮೃತದೇಹಗಳನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಕುಟುಂಬಸ್ಥರು ಆಗಮಿಸಿದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲು ಸಿದ್ಧತೆ ಮಾಡಲಾಗಿದೆ.

    ಮೂವರು ಬೇಟೆಗಾರರ ಸಾವಿನ ಬೆನ್ನಲ್ಲೇ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೇಟೆಗಾರರನ್ನು ಮೊದಲು ಸೆರೆಹಿಡಿದು ಬಳಿಕ ಹತ್ತಿರದಿಂದ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ಅರಣ್ಯ ಇಲಾಖೆ ನಿರಾಕರಿಸಿದ್ದು, ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲೇ ಸಾವು ಸಂಭವಿಸಿದೆ ಎಂದು ಹೇಳಿದೆ.

    ಶಾಗ್ಯ ಅರಣ್ಯ ಪ್ರದೇಶದಲ್ಲಿ ಉದ್ವಿಗ್ನ

    ಆಕ್ರೋಶಗೊಂಡ ಸ್ಥಳೀಯರು ಶಾಗ್ಯದಲ್ಲಿರುವ ಉಪವಲಯ ಅರಣ್ಯಾಧಿಕಾರಿಗಳ ಕಚೇರಿಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಕಚೇರಿಯ ಪೀಠೋಪಕರಣಗಳಿಗೆ ಹಾನಿ ಮಾಡಿದ್ದು, ಬೈಕ್ ಸೇರಿದಂತೆ ಕೈಗೆ ಸಿಕ್ಕ ವಸ್ತುಗಳನ್ನ ಚೆಲ್ಲಾಪಿಲ್ಲಿ ಮಾಡಿದ್ದಾರೆ. ಘಟನೆಯಿಂದ ಶಾಗ್ಯ ಅರಣ್ಯ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.




    #crime #karnataka
    Previous Articleಪುತ್ತೂರಿನಲ್ಲಿ ಭೀಕರ ಅಪಘಾತ; KSRTC ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು
    Next Article ಪುತ್ತೂರಿನಲ್ಲಿ ಅಕ್ರಮ ಮರ ಸಾಗಾಟ ಜಾಲ ಪತ್ತೆ; ಲಾರಿ ಸಹಿತ ₹5 ಲಕ್ಷ ಮೌಲ್ಯದ ಮರ ವಶ, ಆರೋಪಿಯ ಬಂಧನ

    Related Posts

    ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ; ಸಂಸ್ಥೆ ಹಾಗೂ ಘಟಕದ ಮುಖ್ಯಸ್ಥರ ನಿರ್ಲಕ್ಷ್ಯ ಆರೋಪಿಸಿ ಎಫ್ಐಆರ್

    October 1, 2026

    ಸೌಜನ್ಯಾ ಪ್ರಕರಣ ಮರುತನಿಖೆ: SITಯಿಂದ ಹಿಂದೆ ಸರಿಯಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ಮನವಿ

    October 1, 2026

    ಸುಳ್ಯದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    October 1, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕಾಕ್‌ಪಿಟ್‌ನಲ್ಲಿ ಪೈಲಟ್‌ಗೆ ಇರಿತ; ದುಬೈ–ಇಸ್ರೇಲ್ ವಿಮಾನ ದುರಂತ ತಪ್ಪಿಸಿ 180 ಜನರ ಜೀವ ಉಳಿಸಿದ ‘ಹೀರೋ’ ಕ್ಯಾಪ್ಟನ್ ಸ್ಮಿತ್ ಮಚ್ಚಾರ್‌ಗೆ ಪ್ರಯಾಣಿಕರಲ್ಲಿದ್ದ ದಂತವೈದ್ಯನಿಂದ ತಕ್ಷಣದ ಚಿಕಿತ್ಸೆ

    October 1, 2026

    ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ; ಸಂಸ್ಥೆ ಹಾಗೂ ಘಟಕದ ಮುಖ್ಯಸ್ಥರ ನಿರ್ಲಕ್ಷ್ಯ ಆರೋಪಿಸಿ ಎಫ್ಐಆರ್

    October 1, 2026

    ಸೌಜನ್ಯಾ ಪ್ರಕರಣ ಮರುತನಿಖೆ: SITಯಿಂದ ಹಿಂದೆ ಸರಿಯಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ಮನವಿ

    October 1, 2026

    ಸುಳ್ಯದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    October 1, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸೌಜನ್ಯಾ ಪ್ರಕರಣ ಮರುತನಿಖೆ: SITಯಿಂದ ಹಿಂದೆ ಸರಿಯಲು ಎಎಸ್‌ಪಿ ವೆಂಕಟೇಶ್ ಪ್ರಸನ್ನ ಮನವಿ

    October 1, 2026

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.