Close Menu
    What's Hot

    ಟಿಟಿಡಿ ಉಪ ಇಒ ಲೋಕನಾಥಮ್ ನಿವಾಸಗಳ ಮೇಲೆ ಎಸಿಬಿ ದಾಳಿ; ₹5 ಕೋಟಿ ಅಕ್ರಮ ಆಸ್ತಿ ಪತ್ತೆ

    September 4, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ; ₹14.95 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ಕಳವು

    September 4, 2026

    ಮಂಗಳೂರು: ಬ್ಲಿಂಕ್‌ಇಟ್‌ ಗೋಡೌನ್‌ಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ಕೊಳೆತ ಮೊಟ್ಟೆ ಪತ್ತೆ, ಗೋದಾಮುಗೆ ಸೀಲ್‌ ಮಾಡಿ ನೋಟಿಸ್

    September 4, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಶಾಗ್ಯ ಶೂಟೌಟ್‌ಗೆ ತಮಿಳುನಾಡು ಸಿಎಂ ವಿಜಯ್ ಕಿಡಿ; ‘ಹತ್ಯಾಕಾಂಡ’ ಆರೋಪ, ಉನ್ನತ ಮಟ್ಟದ ತನಿಖೆಗೆ ಆಗ್ರಹ
    ಅಪರಾಧ

    ಶಾಗ್ಯ ಶೂಟೌಟ್‌ಗೆ ತಮಿಳುನಾಡು ಸಿಎಂ ವಿಜಯ್ ಕಿಡಿ; ‘ಹತ್ಯಾಕಾಂಡ’ ಆರೋಪ, ಉನ್ನತ ಮಟ್ಟದ ತನಿಖೆಗೆ ಆಗ್ರಹ

    adminBy adminAugust 17, 2026No Comments1 Min Read

    ಚೆನ್ನೈ: ಚಾಮರಾಜನಗರ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ಚಕಮಕಿಯಲ್ಲಿ ತಮಿಳು ಮೂಲದ ಮೂವರು ಮೃತಪಟ್ಟ ಘಟನೆಯನ್ನು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ತೀವ್ರವಾಗಿ ಖಂಡಿಸಿದ್ದಾರೆ. ಈ ಘಟನೆಯನ್ನು “ಹತ್ಯಾಕಾಂಡ” ಎಂದು ಕರೆದಿರುವ ಅವರು, ಪ್ರಕರಣದ ಕುರಿತು ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದ್ದಾರೆ.

    “ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ನಿವಾಸಿಗಳಾದ ಆಂಥೋನಿ ಸಾಮಿ, ಜಾನ್ ರೋಸ್ ಪೀಟರ್ ಹಾಗೂ ಕುಮಾರ್ ಅವರನ್ನು ಆಗಸ್ಟ್ 15ರ ಮುಂಜಾನೆ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ಗುಂಡಿಕ್ಕಿ ಕೊಂದು ಹಾಕಿರುವುದು ತೀವ್ರ ಹೃದಯವಿದ್ರಾವಕ. ಈ ದೌರ್ಜನ್ಯವನ್ನು ನಾನು ಬಲವಾಗಿ ಖಂಡಿಸುತ್ತೇನೆ” ಎಂದು ಹೇಳಿದ್ದಾರೆ.

    “ಕರ್ನಾಟಕ ಅರಣ್ಯ ಇಲಾಖೆ ನೀಡುತ್ತಿರುವ ವಿವರಣೆಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಘಟನೆಯ ನೈಜತೆ ಹೊರಬರಲು ಉನ್ನತ ಮಟ್ಟದ ತನಿಖಾ ಸಮಿತಿ ರಚಿಸಬೇಕು ಹಾಗೂ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು” ಎಂದು ಒತ್ತಾಯಿಸಿದ್ದಾರೆ. ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು ಮತ್ತು ಇಂತಹ ಘಟನೆಗಳು ಭವಿಷ್ಯದಲ್ಲಿ ಮರುಕಳಿಸದಂತೆ ಕರ್ನಾಟಕ ಸರ್ಕಾರ ಎಚ್ಚರವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

    ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ

    ಮತ್ತೊಂದೆಡೆ, ಚಾಮರಾಜನಗರ ಜಿಲ್ಲೆಯ ಶಾಗ್ಯ ಗ್ರಾಮದ ಬಳಿ ನಡೆದ ಈ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ಪ್ರತಿಕ್ರಿಯಿಸಿದ್ದು, ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

    “ಘಟನೆಯ ಬಗ್ಗೆ ಮುಂಜಾನೆ 5 ಗಂಟೆಗೆ ಮಾಹಿತಿ ಸಿಕ್ಕಿದೆ. ಹಲವು ಪ್ರತ್ಯಕ್ಷದರ್ಶಿಗಳನ್ನು ವಿಚಾರಣೆ ನಡೆಸಲಾಗಿದ್ದು, ಬಂದೂಕುಗಳು ಸೇರಿದಂತೆ ಪ್ರಮುಖ ಸಾಕ್ಷ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. ತನಿಖೆ ಮುಗಿದ ನಂತರವೇ ಪೂರ್ಣ ಸತ್ಯಾಂಶ ತಿಳಿಯಲಿದೆ” ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. ಹನೂರು ತಾಲೂಕಿನ ಮಾರಿಯ ಮಂಗಲ ಬೀಟ್ ಪ್ರದೇಶದಲ್ಲಿ ಶಂಕಿತ ಬೇಟೆಗಾರರು ಅರಣ್ಯ ಸಿಬ್ಬಂದಿಯತ್ತ ಗನ್ ಗುರಿಮಾಡಿದಾಗ, ಆತ್ಮರಕ್ಷಣೆಗಾಗಿ ಸಿಬ್ಬಂದಿ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಮೃತಪಟ್ಟವರನ್ನು ತೋಮಿಯರ್ ಪಾಳ್ಯದ ನಿವಾಸಿಗಳು ಎಂದು ಗುರುತಿಸಲಾಗಿದೆ. ಸದ್ಯ ಮೃತದೇಹಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಸ್ಥಳೀಯವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.




    #karnataka #national
    Previous Article82 ವರ್ಷದ ಅಜ್ಜಿಯ ಕೈಯಿಂದ ಚಿನ್ನದ ಬಳೆ ಎಗರಿಸಿದ ಮೊಮ್ಮಗ; ಪುಂಜಾಲಕಟ್ಟೆ ಪೊಲೀಸರಿಂದ ಬಂಧನ
    Next Article ಪರೀಕ್ಷೆಗೆ ತೆರಳುವ ಮುನ್ನ ಕೊಳದಲ್ಲಿ ಸ್ನಾನಕ್ಕೆ ಹೋದ ವಿದ್ಯಾರ್ಥಿ ನೀರುಪಾಲು; ಪ್ಲಸ್ ಒನ್ ವಿದ್ಯಾರ್ಥಿ ಶಾಹಿಲ್ ಸಾವು

    Related Posts

    ಟಿಟಿಡಿ ಉಪ ಇಒ ಲೋಕನಾಥಮ್ ನಿವಾಸಗಳ ಮೇಲೆ ಎಸಿಬಿ ದಾಳಿ; ₹5 ಕೋಟಿ ಅಕ್ರಮ ಆಸ್ತಿ ಪತ್ತೆ

    September 4, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ; ₹14.95 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ಕಳವು

    September 4, 2026

    ಮಂಗಳೂರು: ಬ್ಲಿಂಕ್‌ಇಟ್‌ ಗೋಡೌನ್‌ಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ಕೊಳೆತ ಮೊಟ್ಟೆ ಪತ್ತೆ, ಗೋದಾಮುಗೆ ಸೀಲ್‌ ಮಾಡಿ ನೋಟಿಸ್

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಟಿಟಿಡಿ ಉಪ ಇಒ ಲೋಕನಾಥಮ್ ನಿವಾಸಗಳ ಮೇಲೆ ಎಸಿಬಿ ದಾಳಿ; ₹5 ಕೋಟಿ ಅಕ್ರಮ ಆಸ್ತಿ ಪತ್ತೆ

    September 4, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ; ₹14.95 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ಕಳವು

    September 4, 2026

    ಮಂಗಳೂರು: ಬ್ಲಿಂಕ್‌ಇಟ್‌ ಗೋಡೌನ್‌ಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ಕೊಳೆತ ಮೊಟ್ಟೆ ಪತ್ತೆ, ಗೋದಾಮುಗೆ ಸೀಲ್‌ ಮಾಡಿ ನೋಟಿಸ್

    September 4, 2026

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.