Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಚಾಮರಾಜನಗರ ಎನ್‌ಕೌಂಟರ್ ಪ್ರಕರಣಕ್ಕೆ ಹೊಸ ತಿರುವು; ‘ಹೊಸ ಚಪ್ಪಲಿ’ ಹುಟ್ಟಿಸಿದ ಶಂಕೆ
    ಅಪರಾಧ

    ಚಾಮರಾಜನಗರ ಎನ್‌ಕೌಂಟರ್ ಪ್ರಕರಣಕ್ಕೆ ಹೊಸ ತಿರುವು; ‘ಹೊಸ ಚಪ್ಪಲಿ’ ಹುಟ್ಟಿಸಿದ ಶಂಕೆ

    adminBy adminAugust 18, 2026No Comments1 Min Read

    ಚಾಮರಾಜನಗರ: ಹನೂರು ತಾಲೂಕಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡೇಟಿಗೆ ಮೂವರು ಬಲಿಯಾದ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಕುಟುಂಬಸ್ಥರ ಪ್ರತಿಭಟನೆ ಬಳಿಕ ಇದೀಗ ಮೃತ ಪೀಟರ್, ಆಂಥೋನಿ ಹಾಗೂ ಕುಮಾರ್ ಅವರ ಅಂತ್ಯಕ್ರಿಯೆ ಕುಟುಂಬಸ್ಥರ ಕಣ್ಣೀರು ಮತ್ತು ಆಕ್ರಂದನದ ನಡುವೆ ನೆರವೇರಿದೆ.

    ಸರ್ಕಾರ ಮತ್ತು ಶಾಸಕರು ನೀಡಿದ ತಲಾ 15 ಲಕ್ಷ ರೂ. ಪರಿಹಾರದ ಭರವಸೆಯಿಂದಾಗಿ ಪ್ರತಿಭಟನೆ ಶಮನಗೊಂಡಿತ್ತಾದರೂ, ಈ ಎನ್‌ಕೌಂಟರ್ ಪ್ರಕರಣಕ್ಕೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಅರಣ್ಯ ಇಲಾಖೆ ಸಾಕ್ಷ್ಯಗಳ ಮೇಲೆ ಅನುಮಾನ ಹುಟ್ಟಿಸಿದೆ.

    ಸದನದಲ್ಲೂ ಗದ್ದಲಕ್ಕೆ ಕಾರಣವಾಗಿದ್ದ ಕೇಸ್

    ಈ ಪ್ರಕರಣ ವಿಧಾನಸಭೆ ಹಾಗೂ ವಿಧಾನಪರಿಷತ್ ಎರಡರಲ್ಲೂ ತೀವ್ರ ಗದ್ದಲಕ್ಕೆ ಕಾರಣವಾಗಿತ್ತು. ವಿಪಕ್ಷ ನಾಯಕ ಆರ್. ಅಶೋಕ್ ಮತ್ತು ತಮಿಳುನಾಡು ಸಿಎಂ ವಿಜಯ್ ಇದು ನಕಲಿ ಎನ್‌ಕೌಂಟರ್ ಎಂದು ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಅರಣ್ಯ ಸಚಿವ ರಾಮಲಿಂಗಾರೆಡ್ಡಿ, ಸಿಬ್ಬಂದಿ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ ಎಂದು ಸಮರ್ಥಿಸಿಕೊಂಡು, ಘಟನಾ ಸ್ಥಳದಲ್ಲಿ ಸಿಕ್ಕಿದ್ದ 34 ಕೆ.ಜಿ ಜಿಂಕೆ ಮಾಂಸ ಹಾಗೂ ಬಂದೂಕುಗಳ ಫೋಟೋಗಳನ್ನು ಸಾಕ್ಷಿಯಾಗಿ ಪ್ರದರ್ಶಿಸಿದ್ದರು.

    ಫೋಟೋಗಳ ಬಗ್ಗೆ ತೀವ್ರ ಅನುಮಾನ, ಲ್ಯಾಬ್‌ಗೆ ಸಾಕ್ಷ್ಯ ರವಾನೆ!

    ಆದರೆ, ಅರಣ್ಯಾಧಿಕಾರಿಗಳು ಬಿಡುಗಡೆ ಮಾಡಿದ ಫೋಟೋಗಳೇ ಇದೀಗ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ನೀಡಿವೆ. ಜಿಂಕೆ ಮಾಂಸ, ಬಂದೂಕು, ಚಾಕು ಹಾಗೂ ಅಡುಗೆ ಸಾಮಾನಿನ ಜೊತೆಗಿದ್ದ ಹೊಸ ಚಪ್ಪಲಿಯ ಮೇಲಿನ ಸ್ಟಿಕ್ಕರ್ ಕೂಡ ತೆಗೆಯದಿರುವುದು ಸಾರ್ವಜನಿಕರಲ್ಲಿ ಮತ್ತು ತನಿಖಾಧಿಕಾರಿಗಳಲ್ಲಿ ತೀವ್ರ ಅನುಮಾನ ಮೂಡಿಸಿದೆ. ಅಧಿಕಾರಿಗಳು ನಕಲಿ ಸಾಕ್ಷಿ ಸೃಷ್ಟಿಸಲು ಹೊಸ ಚಪ್ಪಲಿ ತಂದಿಟ್ಟಿದ್ದಾರೆಯೇ ಎಂಬ ಆಕ್ಷೇಪ ವ್ಯಕ್ತವಾಗಿದೆ.

    ಈ ಅನುಮಾನಗಳ ಬೆನ್ನಲ್ಲೇ ತನಿಖೆ ಚುರುಕುಗೊಂಡಿದ್ದು, ಕೊಳ್ಳೇಗಾಲ ಡಿವೈಎಸ್​ಪಿ ಮೋಹನ್ ಅವರ ನೇತೃತ್ವದಲ್ಲಿ ಎಫ್ಎಸ್ಎಲ್ ಹಾಗೂ ಬ್ಯಾಲೆಸ್ಟಿಕ್ ತಜ್ಞರನ್ನೊಳಗೊಂಡ 15 ಮಂದಿಯ ವಿಶೇಷ ತಂಡ ಕಾವೇರಿ ವನ್ಯಜೀವಿಧಾಮದ ಶಾಗ್ಯ ಬೀಟ್ ಅರಣ್ಯಕ್ಕೆ ಭೇಟಿ ನೀಡಿದೆ. ಘಟನಾ ಸ್ಥಳದಲ್ಲಿ ಬಿದ್ದಿದ್ದ ಗುಂಡಿನ ಚೂರುಗಳು, ಪೆಲೆಟ್ಸ್ ಮತ್ತು ರಕ್ತದ ಕಲೆಯ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ರವಾನಿಸಲಾಗಿದೆ.

     




    #crime #karnataka
    Previous Articleಮಾಜಿ ಪ್ರೇಯಸಿಯ ರೇ*ಪ್ ಮಾಡಿ ಕೊಲ್ಲುವ ಪ್ಲಾನ್ ಗೆ ChatGPT ಜೊತೆ ಚರ್ಚೆ; ಪೊಲೀಸರಿಗೆ ಈ ಬಗ್ಗೆ ತಿಳಿದಿದ್ದು ಹೇಗೆ ಗೊತ್ತಾ?
    Next Article ಉಡುಪಿ :ಆನ್‌ಲೈನ್ ಡೆಲಿವರಿ ಹಬ್ ಫ್ರಾಂಚೈಸಿ ಆಸೆ; ₹4.20 ಲಕ್ಷ ಕಳೆದುಕೊಂಡ ವ್ಯಕ್ತಿ

    Related Posts

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.