Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮರಣದಂಡನೆ ಜಾರಿ ವಿಧಾನ ಬದಲಾವಣೆಗೆ ಸುಪ್ರೀಂ ಕೋರ್ಟ್ ನಕಾರ; ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ
    ಅಪರಾಧ

    ಮರಣದಂಡನೆ ಜಾರಿ ವಿಧಾನ ಬದಲಾವಣೆಗೆ ಸುಪ್ರೀಂ ಕೋರ್ಟ್ ನಕಾರ; ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ

    adminBy adminAugust 18, 2026No Comments1 Min Read

    ನವದೆಹಲಿ: ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಇರುವ ‘ಗಲ್ಲಿಗೇರಿಸುವ’ ಪದ್ಧತಿಯನ್ನೇ ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ.

    ಮರಣದಂಡನೆಯನ್ನು ಕಡಿಮೆ ನೋವಿನಿಂದ ಕೂಡಿದ ಇತರ ವಿಧಾನಗಳಾದ ಮಾರಣಾಂತಿಕ ಇಂಜೆಕ್ಷನ್ ಅಥವಾ ಗುಂಡಿಕ್ಕುವ ವಿಧಾನ ಮೂಲಕ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

    ಮರಣದಂಡನೆಯನ್ನು ಗಲ್ಲಿಗೇರಿಸುವ ಬದಲಾಗಿ ಕಡಿಮೆ ನೋವಿನ ವಿಧಾನಗಳನ್ನು ಬಳಸಬೇಕು ಮತ್ತು ಇದು ಘನತೆಯಿಂದ ಕೂಡಿರಬೇಕು ಎಂದು ಕೋರಿ ವಕೀಲ ರಿಷಿ ಮಲ್ಹೋತ್ರಾ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಗಲ್ಲಿಗೇರಿಸುವಿಕೆಯು ಕ್ರೂರ ಮತ್ತು ನೋವಿನಿಂದ ಕೂಡಿರುತ್ತದೆ. ವ್ಯಕ್ತಿಯ ಘನತೆಗೆ ಕುಂದು ಬರುವಂತಿರುತ್ತದೆ ಎಂಬುದು ಅವರ ವಾದ. ಆದರೆ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ಈ ಅರ್ಜಿಯನ್ನು ತಳ್ಳಿಹಾಕಿದೆ.

    ಅರ್ಜಿದಾರರ ವಾದದ ಪ್ರಕಾರ, ಗಲ್ಲಿಗೇರಿಸುವ ವ್ಯಕ್ತಿ ದೀರ್ಘಕಾಲ ಬಾಧೆ ಪಡಬೇಕಾಗುತ್ತದೆ. ಆತ ಸತ್ತಿದ್ದಾನೆಂದು ಖಚಿತಪಡಿಸಲು 40 ನಿಮಿಷ ಬೇಕಾಗುತ್ತದೆ. ಆದರೆ, ಗ್ಯಾಸ್ ಚೇಂಬರ್, ಲೆಥಲ್ ಇಂಜೆಕ್ಷನ್, ಶೂಟ್ ವಿಧಾನಗಳಲ್ಲಿ 5 ನಿಮಿಷದಲ್ಲಿ ವ್ಯಕ್ತಿಯ ಸಾವನ್ನು ಖಚಿತಪಡಿಸಬಹುದು.

    ಸದ್ಯಕ್ಕೆ ದೇಶದಲ್ಲಿ ಮರಣದಂಡನೆಗಾಗಿ ಗಲ್ಲಿಗೇರಿಸುವ ಪದ್ಧತಿಯು ಸಂವಿಧಾನಬದ್ಧವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇದೇ ವೇಳೆ, ಇದು ಅಂತಿಮ ತೀರ್ಪಲ್ಲ ಎಂದೂ ಕೋರ್ಟ್ ಸ್ಪಷ್ಟಪಡಿಸಿದೆ.




    #crime #national
    Previous Article‘ಮೊಬೈಲ್ ಬಳಸಬೇಡ, ತಡವಾಗಿ ಬರಬೇಡ’ ಎಂದ ಅಜ್ಜ; ದ್ವೇಷದಿಂದ 13ರ ಬಾಲಕಿ ಸೇರಿ ನಾಲ್ವರರಿಂದ ಕೊಲೆ
    Next Article ಬೆಳ್ತಂಗಡಿ: ಬಸ್ ನಿಲ್ದಾಣದ ಬಳಿ ಶವ ಪತ್ತೆ; ಪೊಲೀಸರಿಂದ ಪರಿಶೀಲನೆ

    Related Posts

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.