Close Menu
    What's Hot

    ಮೈಸೂರಿನಲ್ಲಿ ಮತ್ತೊಂದು ಗೋಲ್ಡ್ ಸ್ಕ್ಯಾಮ್: 80ಕ್ಕೂ ಹೆಚ್ಚು ಜನರಿಗೆ ಮೋಸ, ಜ್ಯುವೆಲರಿ ಮಾಲೀಕ ಪೊಲೀಸ್ ವಶಕ್ಕೆ

    September 3, 2026

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ AK-47 ಬಳಕೆ; ಸಿವಾನ್ ಎಸ್‌ಪಿ ವರ್ಗಾವಣೆ
    ಅಪರಾಧ

    ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ AK-47 ಬಳಕೆ; ಸಿವಾನ್ ಎಸ್‌ಪಿ ವರ್ಗಾವಣೆ

    adminBy adminAugust 18, 2026No Comments1 Min Read

    ಪಾಟ್ನಾ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ಬಿಹಾರದ ಸಿವಾನ್ ಜಿಲ್ಲೆಯಲ್ಲಿ (Siwan, Bihar) ಜುಲೈ ತಿಂಗಳಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ (Students Protest on NEET) ವೇಳೆ ಪೊಲೀಸರು ಎಕೆ-47 ರೈಫಲ್ ಬಳಸಿದ ವಿವಾದದ ಹಿನ್ನೆಲೆಯಲ್ಲಿ, ಸಿವಾನ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (SP) ಪುರನ್ ಕುಮಾರ್ ಝಾ ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗಿದೆ. ಅವರನ್ನು ವರ್ಗಾವಣೆ ಮಾಡಲಾಗಿದೆ. ಸದ್ಯಕ್ಕೆ ಅವರಿಗೆ ಯಾವುದೇ ಹೊಸ ಹುದ್ದೆಯನ್ನು ನೀಡಿಲ್ಲ. ಎಕೆ-47 ರೈಫಲ್ ಬಳಸಿದ್ದ ಕಾನ್ಸ್​ಟೆಬಲ್ ಅಭಿಷೇಕ್ ಕುಮಾರ್ ಅವರನ್ನು ಈ ಹಿಂದೆಯೇ ಅಮಾನತುಗೊಳಿಸಲಾಗಿದೆ. ಈಗ ಉನ್ನತಾಧಿಕಾರಿಯ ಸರದಿಯಾಗಿದೆ.

    ಜುಲೈ 25 ರಂದು ಸಿವಾನ್‌ನ ಜೆಪಿ ಚೌಕ್ ಬಳಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ಸಂದರ್ಭದಲ್ಲಿ ಈ ಘಟನೆ ನಡೆದಿತ್ತು. ಪ್ರತಿಭಟನಾಕಾರರ ಗುಂಪಿನ ನಡುವೆ ಸಿಲುಕಿದ್ದ ಕಾನ್‌ಸ್ಟೆಬಲ್ ಅಭಿಷೇಕ್ ಕುಮಾರ್, ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಎಕೆ-47 ನಿಂದ ಗಾಳಿಯಲ್ಲಿ ನಾಲ್ಕು ಸುತ್ತು ಗುಂಡು ಹಾರಿಸಿದ್ದರು ಎನ್ನಲಾಗಿದೆ. ಈ ಘಟನೆಯು ಭಾರೀ ವಿವಾದಕ್ಕೆ ಕಾರಣವಾಗಿತ್ತು.

    ಸರ್ಕಾರದ ಸ್ಪಷ್ಟನೆ: ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಬಿಹಾರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಿಳಿಸಿದೆ. ಕಾನ್‌ಸ್ಟೆಬಲ್ ಅವರು ಪ್ರತಿಭಟನಾಕಾರರ ಗುಂಪಿನ ನಡುವೆ ಸಿಲುಕಿದ್ದಾಗ, ಪರಿಸ್ಥಿತಿಯನ್ನು ನಿಭಾಯಿಸಲು ಅನಿವಾರ್ಯವಾಗಿ ಗಾಳಿಯಲ್ಲಿ ಗುಂಡು ಹಾರಿಸಬೇಕಾಯಿತು ಎಂದು ಸರ್ಕಾರ ಸಮರ್ಥಿಸಿಕೊಂಡಿದೆ.

    ಆದರೆ, ಅಂದಿನ ಘಟನೆಯ ದಿನದಂದು ಪೊಲೀಸ್ ಕ್ರಮದಿಂದ ಮೂವರು ಪ್ರತಿಭಟನಾಕಾರರಿಗೆ ಗಾಯಗಳಾಗಿದ್ದವು. ಆದರೆ, ಎಕೆ-47 ರೈಫಲ್​ನಿಂದ ಹಾರಿಸಲಾದ ಗುಂಡಿಗೂ ಆ ಗಾಯ ಘಟನೆಗೂ ಸಂಬಂಧ ಇಲ್ಲ ಎಂದೂ ಸರ್ಕಾರ ಸ್ಪಷ್ಟಪಡಿಸಿದೆ.

    ಗುಂಡು ಹಾರಿಸಿದ ಕಾನ್‌ಸ್ಟೆಬಲ್ ಅಭಿಷೇಕ್ ಕುಮಾರ್ ಅವರನ್ನು ಈಗಾಗಲೇ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಇದೀಗ ಸಿವಾನ್ ಜಿಲ್ಲೆಯ ಉಸ್ತುವಾರಿ ಹೊಂದಿದ್ದ ಎಸ್‌ಪಿ ಪುರನ್ ಕುಮಾರ್ ಝಾ ಅವರನ್ನೂ ಸ್ಥಾನದಿಂದ ತೆರವುಗೊಳಿಸಲಾಗಿದೆ




    #crime #national
    Previous Articleಹನೂರು ಶೂಟೌಟ್: ಗುಂಡಿನ ದಾಳಿಯಲ್ಲಿ ಬಚಾವಾಗಿದ್ದ ಮಹಿಮದಾಸ್ ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್
    Next Article ರೇಣುಕಾಸ್ವಾಮಿ ಕೊಲೆ ಕೇಸ್: ‘ಎಲ್ಲಾ ಸತ್ಯ ಹೇಳದಿದ್ದರೆ ಆರೋಪಿಯಾಗುತ್ತೀರಿ’ ಪ್ರದೋಷ್‌ಗೆ ಕೋರ್ಟ್ ಎಚ್ಚರಿಕೆ

    Related Posts

    ಮೈಸೂರಿನಲ್ಲಿ ಮತ್ತೊಂದು ಗೋಲ್ಡ್ ಸ್ಕ್ಯಾಮ್: 80ಕ್ಕೂ ಹೆಚ್ಚು ಜನರಿಗೆ ಮೋಸ, ಜ್ಯುವೆಲರಿ ಮಾಲೀಕ ಪೊಲೀಸ್ ವಶಕ್ಕೆ

    September 3, 2026

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮೈಸೂರಿನಲ್ಲಿ ಮತ್ತೊಂದು ಗೋಲ್ಡ್ ಸ್ಕ್ಯಾಮ್: 80ಕ್ಕೂ ಹೆಚ್ಚು ಜನರಿಗೆ ಮೋಸ, ಜ್ಯುವೆಲರಿ ಮಾಲೀಕ ಪೊಲೀಸ್ ವಶಕ್ಕೆ

    September 3, 2026

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮೈಸೂರಿನಲ್ಲಿ ಮತ್ತೊಂದು ಗೋಲ್ಡ್ ಸ್ಕ್ಯಾಮ್: 80ಕ್ಕೂ ಹೆಚ್ಚು ಜನರಿಗೆ ಮೋಸ, ಜ್ಯುವೆಲರಿ ಮಾಲೀಕ ಪೊಲೀಸ್ ವಶಕ್ಕೆ

    September 3, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.