Close Menu
    What's Hot

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿ; ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಂದ ಪತ್ನಿ
    ಅಪರಾಧ

    ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿ; ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಂದ ಪತ್ನಿ

    adminBy adminAugust 19, 2026No Comments1 Min Read

    ದಾವಣಗೆರೆ: ಅಕ್ರಮ ಸಂಬಂಧಕ್ಕೆಪತಿ ಅಡ್ಡಿಯಾಗಿದ್ದಾನೆ ಎಂದು ಆರೋಪಿಸಿ ಪತ್ನಿಯೇ ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆ ಮಾಡಿ ಬಳಿಕ ಮೃತದೇಹವನ್ನು ತುಂಗಭದ್ರಾ ನದಿಗೆ  ಎಸೆದಿರುವ ಘಟನೆ ದಾವಣಗೆರೆ ತಾಲೂಕಿನ ಪಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಪಾಮೇನಹಳ್ಳಿ ಗ್ರಾಮದ ರಘು (36) ಕೊಲೆಯಾದ ವ್ಯಕ್ತಿ. ಆತನ ಪತ್ನಿ ಶೃತಿ ಹಾಗೂ ಆಕೆಯ ಪ್ರಿಯಕರ ಉಬೇದುಲ್ಲಾ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದು, ಮೃತದೇಹ ಸಾಗಿಸಲು ಸಹಕರಿಸಿದ ಆರೋಪದಲ್ಲಿ ಉಬೇದುಲ್ಲಾ ಸ್ನೇಹಿತ ಸುರೇಶ್‌ನನ್ನೂ ಪೊಲೀಸರು ಬಂಧಿಸಿದ್ದಾರೆ.

    ರಘು ಮತ್ತು ಶೃತಿ ಸುಮಾರು 12 ವರ್ಷಗಳ ಹಿಂದೆ ವಿವಾಹವಾಗಿದ್ದರು. ರಘುವಿಗೆ ಕುಡಿತದ ಚಟವಿದ್ದ ಹಿನ್ನೆಲೆಯಲ್ಲಿ ದಂಪತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಇದೇ ವೇಳೆ ಕಳೆದ ಎರಡು-ಮೂರು ವರ್ಷಗಳಿಂದ ಶೃತಿ ಹಾಗೂ ಉಬೇದುಲ್ಲಾ ನಡುವೆ ಆತ್ಮೀಯ ಸಂಬಂಧ ಬೆಳೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

    ಪತಿಯೊಂದಿಗಿನ ಸಂಸಾರಕ್ಕೆ ಈ ಸಂಬಂಧ ಅಡ್ಡಿಯಾಗುತ್ತಿದೆ ಎಂದು ಭಾವಿಸಿದ್ದ ಶೃತಿ, ಪ್ರಿಯಕರ ಉಬೇದುಲ್ಲಾ ಜೊತೆ ಸೇರಿ ರಘುವನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ ಎನ್ನಲಾಗಿದೆ. ಬಳಿಕ ಉಬೇದುಲ್ಲಾ ಹಾಗೂ ಆತನ ಸ್ನೇಹಿತ ಸುರೇಶ್ ಸೇರಿಕೊಂಡು ಮೃತದೇಹವನ್ನು ತುಂಗಭದ್ರಾ ನದಿಗೆ ಎಸೆದಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.

    ರಘು ನಾಪತ್ತೆಯಾಗಿರುವ ಕುರಿತು ಕುಟುಂಬಸ್ಥರು ದೂರು ನೀಡಿದ ಬಳಿಕ ಪೊಲೀಸರು ತನಿಖೆ ಆರಂಭಿಸಿದ್ದರು. ಈ ವೇಳೆ ಶೃತಿಯ ಸಹೋದರಿಯನ್ನು ವಿಚಾರಣೆ ನಡೆಸಿದಾಗ ಪೊಲೀಸರಿಗೆ ಕೆಲವು ಅನುಮಾನಗಳು ಮೂಡಿದ್ದವು. ಬಳಿಕ ಶೃತಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಕೊಲೆ ಪ್ರಕರಣದ ವಿವರಗಳು ಬಯಲಾಗಿವೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಶೃತಿ, ಉಬೇದುಲ್ಲಾ ಹಾಗೂ ಸುರೇಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ತುಂಗಭದ್ರಾ ನದಿಯಲ್ಲಿ ರಘುವಿನ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ. ಹದಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    #crime #karnataka
    Previous Articleತಮಿಳುನಾಡು ಶಾಸಕರಿಗೆ ವಿಜಯ್ ಸರ್ಕಾರದ ಬಂಪರ್ ಕೊಡುಗೆ; ತಿಂಗಳಿಗೆ ₹75 ಸಾವಿರ ಭತ್ಯೆ
    Next Article ವಿಚಿತ್ರ ಆರೋಗ್ಯ ಸಮಸ್ಯೆ: ಕೆರೆಯಲ್ಲೇ ಗಂಟೆಗಟ್ಟಲೆ ಕಳೆಯುತ್ತಿದ್ದ ಬಾಲಕ ಇಕ್ಬಾಲ್‌ಗೆ ನೆರವಾದ ಅನಂತ್ ಅಂಬಾನಿ

    Related Posts

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026

    ಉಡುಪಿ: ಪಡಿತರ ಅಕ್ಕಿ ವಿಚಾರದಲ್ಲಿ ಅವಾಚ್ಯ ನಿಂದನೆ, ಕೊಲೆ ಬೆದರಿಕೆ; ಮೂವರು ಆರೋಪಿಗಳ ಬಂಧನ

    September 3, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.