ಮೈಸೂರು: ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ತಲಕಾಡು ಗ್ರಾಮದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತಿಯ ಶವ ಪತ್ತೆಯಾಗಿದೆ.
ಮಹೇಶ್(40) ಮೃತಪಟ್ಟವರು ಎಂದು ಗುರುತಿಸಲಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದ್ದು ಪತ್ನಿಯೇ ಕೊಲೆ ಮಾಡಿರುವುದಾಗಿ ಆರೋಪ ಕೇಳಿ ಬಂದಿದೆ.
ಪತ್ನಿ ಪುಷ್ಪಲತಾ ವಿರುದ್ಧ ಮಹೇಶ್ ಸಂಬಂಧಿಕರು ಆರೋಪ ಮಾಡಿದ್ದಾರೆ. ದಂಪತಿಯ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎಂದು ಹೇಳಲಾಗಿದೆ. ಮಹೇಶ್ ಪತ್ನಿ ಪುಷ್ಪಲತಾ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ತಲಕಾಡು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








