Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ; ಆರೋಪಿಗಳಿಗೆ ಬೈಕ್ ಒದಗಿಸಿದ್ದಾತನ ಬಂಧನ, ಹಲವು ವಸ್ತುಗಳು ವಶಕ್ಕೆ
    ಅಪರಾಧ

    ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ; ಆರೋಪಿಗಳಿಗೆ ಬೈಕ್ ಒದಗಿಸಿದ್ದಾತನ ಬಂಧನ, ಹಲವು ವಸ್ತುಗಳು ವಶಕ್ಕೆ

    adminBy adminAugust 22, 2026No Comments2 Mins Read

    ಕಾಪು ತಾಲೂಕು ಮುದರಂಗಡಿಯ ಸೇಂಟ್ ಕ್ಷೇವಿಯರ್ ಚರ್ಚ್‌ ಕಾಂಪ್ಲೆಕ್ಸ್‌ನಲ್ಲಿ ನಡೆದ ಪ್ರಿನ್ಸ್ ಎಂಟರ್ಪ್ರೈಸಸ್ ಮಾಲೀಕ ಡೇವಿಡ್ ಡಿಸೋಜಾ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬೈಂದೂರಿನ ಯಡ್ತರೆ ನಿವಾಸಿ ಲೋಕೇಶ್ ತೇಜ ಕೊಠಾರಿ (42) ಬಂಧಿತ ಆರೋಪಿ. ಆಗಸ್ಟ್ 21ರಂದು ವಿಶೇಷ ಕರ್ತವ್ಯದಲ್ಲಿದ್ದ ಕಾರ್ಕಳ–ಪಡುಬಿದ್ರೆ ಪೊಲೀಸರು ಬೈಂದೂರು ತಾಲೂಕಿನ ಯಡ್ತರೆ ಗ್ರಾಮದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು, ಪ್ರಕರಣದ ತನಿಖಾಧಿಕಾರಿಗಳ ಮುಂದೆ ಹಾಜರುಪಡಿಸಿದ್ದಾರೆ.

    ಪೊಲೀಸರ ಪ್ರಕಾರ, ಲೋಕೇಶ್ ತೇಜ ಕೊಠಾರಿ ಈ ಹಿಂದೆ ಬಾಂಬೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಪ್ರಕರಣದ ಮತ್ತೋರ್ವ ಆರೋಪಿ ಕಿಶೋರ್ ರಾಮ ಪೂಜಾರಿ ಅವರ ಪರಿಚಯವಾಗಿದ್ದು, ಇಬ್ಬರೂ ಸ್ನೇಹಿತರಾಗಿದ್ದರು. ಕೊಲೆ ಕೃತ್ಯಕ್ಕೆ ಸಂಬಂಧಿಸಿದಂತೆ ನೇರವಾಗಿ ಭಾಗಿಯಾಗಿದ್ದ ಅನ್ಮೋಲ್ ರಸ್ತೋಗಿ ಹಾಗೂ ರಾಜು ಅವರಿಗೆ ಮೋಟಾರ್ ಸೈಕಲ್‌ಗಳನ್ನು ಒದಗಿಸುವ ಮೂಲಕ ಇತರ ಆರೋಪಿಗಳೊಂದಿಗೆ ಸೇರಿ ಅಪರಾಧಿಕ ಒಳಸಂಚಿನಲ್ಲಿ ಭಾಗಿಯಾಗಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಆತನಿಂದ ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ ಮೊಬೈಲ್ ಫೋನ್‌ಗಳನ್ನು ಹಾಗೂ ಮೋಟಾರ್ ಸೈಕಲ್‌ನ ಎಂಜಿನ್ ನಂಬರ್ ಮತ್ತು ಚಾಸಿಸ್ ನಂಬರ್‌ಗಳನ್ನು ಉಜ್ಜಲು ಬಳಸಿದ ಮಿಷಿನ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ. ಈ ಪ್ರಕರಣದಲ್ಲಿ ಈಗಾಗಲೇ ನೇರವಾಗಿ ಭಾಗಿಯಾಗಿದ್ದ ಆರೋಪಿಗಳಾದ ಅನ್ಮೋಲ್ ರಸ್ತೋಗಿ ಮತ್ತು ಜಿಯಾಹುಲ್ ವಾಜುಲ್ ಶೇಖ್ @ ದೀಪಕ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

    ಅದೇ ರೀತಿ, ಕೊಲೆ ಕೃತ್ಯಕ್ಕೆ ಇತರ ಆರೋಪಿಗಳೊಂದಿಗೆ ಸೇರಿ ಅಪರಾಧಿಕ ಒಳಸಂಚು ನಡೆಸಿ ಹಣಕಾಸಿನ ನೆರವು ನೀಡಿದ ಆರೋಪದ ಮೇಲೆ ಮೊಹಮ್ಮದ್ ಇರ್ಷಾದ್, ಚಿರಾಗ್ ಪೂಜಾರಿ, ಸದಾನಂದ ದೇವಾಡಿಗ ಮತ್ತು ಕಿಶೋರ್ ರಾಮ ಪೂಜಾರಿ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಕರಣದ ಮೊದಲ ಆರೋಪಿ ರಾಜು ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಸರ್ಕಾರಿ ನೌಕರರ ಮೇಲೆ ಕೊಲೆ ಯತ್ನಕ್ಕೆ ಸಂಬಂಧಿಸಿದ ಪ್ರಕರಣವಿದ್ದು, ಆ ಪ್ರಕರಣದಲ್ಲಿ ಆತನನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುದರಂಗಡಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

     




    #crime #dakshinakannada
    Previous Articleಬೆಳ್ತಂಗಡಿ: ಮನೆಗೆ ನುಗ್ಗಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪ; ಶಾಲೆಗೆ ಕರೆದೊಯ್ಯುತ್ತಿದ್ದ ಆಟೋ ಚಾಲಕ ಜಮಾಲುದ್ದೀನ್ ಬಂಧನ
    Next Article ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ ಆರೋಪ; ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅಮಾನತು

    Related Posts

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.