Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಏರ್‌ಪೋರ್ಟ್‌ಗೆ ತೆರಳಿ ಮೊಬೈಲ್ ಸ್ವಿಚ್‌ ಆಫ್; ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ
    ಕರ್ನಾಟಕ

    ಏರ್‌ಪೋರ್ಟ್‌ಗೆ ತೆರಳಿ ಮೊಬೈಲ್ ಸ್ವಿಚ್‌ ಆಫ್; ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ

    adminBy adminAugust 22, 2026No Comments2 Mins Read

    ಬೆಂಗಳೂರು: ಕರ್ನಾಟಕದ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ ಇದೀಗ ಕುತೂಹಲ ಮೂಡಿಸಿದೆ. ಬೆಂಗಳೂರಿನ  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದ ಅವರು ಗುರುವಾರ ಬೆಳಗ್ಗೆ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಂಡಿದ್ದು, ಬಳಿಕ ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಜ್ಞಾನೇಂದ್ರ ಕುಮಾರ್ ದೆಹಲಿಗೆ ತೆರಳಲು ವಿಮಾನದ ಟಿಕೆಟ್‌ ಬುಕ್ ಮಾಡಿದ್ದರು ಎನ್ನಲಾಗಿದೆ. ದೆಹಲಿಗೆ ತೆರಳುವುದಾಗಿ ತಿಳಿಸಿ ವಿಮಾನ ನಿಲ್ದಾಣಕ್ಕೆ ಹೋಗಿದ್ದರೂ, ಅಲ್ಲಿಂದ ಅವರು ವಿಮಾನ ಏರಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ವಿಮಾನ ನಿಲ್ದಾಣದವರೆಗೆ ಅವರ ಚಲನವಲನವನ್ನು ಪೊಲೀಸರು ಟ್ರ್ಯಾಕ್‌ ಮಾಡಿದ್ದು, ಬಳಿಕ ಮೊಬೈಲ್‌ ಸಂಪರ್ಕ ಕಡಿತಗೊಂಡಿದೆ ಎಂದು ತಿಳಿದುಬಂದಿದೆ.

    ಅವರ ಮೊಬೈಲ್‌ ಫೋನ್‌ ಸ್ವಿಚ್‌ ಆಫ್‌ ಆಗಿರುವ ಹಿನ್ನೆಲೆಯಲ್ಲಿ ದೆಹಲಿ ಕಡೆಗೆ ತೆರಳಿರುವ ಸಾಧ್ಯತೆಯನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಆದರೆ, ಅವರ ಕುಟುಂಬದವರ ಸಂಪರ್ಕಕ್ಕೂ ಅಧಿಕಾರಿ ಸಿಗದಿರುವುದು ಪ್ರಕರಣದ ಗಂಭೀರತೆಯನ್ನು ಹೆಚ್ಚಿಸಿದೆ.

    ಜ್ಞಾನೇಂದ್ರ ಕುಮಾರ್ ಅವರಿಗೆ ಈ ಹಿಂದೆ ಆರೋಗ್ಯ ಸಮಸ್ಯೆ ಇತ್ತು ಎಂಬ ಮಾಹಿತಿಯೂ ಲಭ್ಯವಾಗಿದೆ. ಸದ್ಯ ಅವರು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (MSME) ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ಸೇವೆ ಸಲ್ಲಿಸಿದ್ದರು

    ಹಿರಿಯ ಅಧಿಕಾರಿಗಳ ಮಾಹಿತಿ ಮೇರೆಗೆ ಪೊಲೀಸರಿಂದ ಶೋಧ

    ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿರುವ ಬಗ್ಗೆ ಹಿರಿಯ ಐಎಎಸ್‌ ಅಧಿಕಾರಿಯೊಬ್ಬರು ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್ ಅವರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅಧಿಕಾರಿಯ ಚಲನವಲನದ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.

    ವಿಮಾನ ನಿಲ್ದಾಣದದಿಂದ ಅವರು ಎಲ್ಲಿಗೆ ತೆರಳಿದ್ದಾರೆ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ. ವಿಮಾನ ನಿಲ್ದಾಣದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳು ಸೇರಿದಂತೆ ಲಭ್ಯವಿರುವ ಮಾಹಿತಿಯನ್ನು ಪರಿಶೀಲಿಸಲಾಗುತ್ತಿದೆ.

    KPSC ಪರೀಕ್ಷಾ ಅಕ್ರಮದ ಬೆನ್ನಲ್ಲೇ ನಾಪತ್ತೆ

    ಜ್ಞಾನೇಂದ್ರ ಕುಮಾರ್ ಅವರ ನಾಪತ್ತೆ ಪ್ರಕರಣವು ಇತ್ತೀಚೆಗೆ ಬೆಳಕಿಗೆ ಬಂದಿರುವ KPSC ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಮತ್ತಷ್ಟು ಮಹತ್ವ ಪಡೆದುಕೊಂಡಿದೆ. ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದ ಅಕ್ರಮದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದರು.

    ಈ ಪ್ರಕರಣದಲ್ಲಿ ಜ್ಞಾನೇಂದ್ರ ಕುಮಾರ್ ಅವರು ಹಿಂದೆ KPSCಯಲ್ಲಿ ಕಾರ್ಯನಿರ್ವಹಿಸಿದ್ದ ಅವಧಿಯಲ್ಲಿನ ಪಾತ್ರ ಸೇರಿದಂತೆ ಹಲವು ಅಂಶಗಳನ್ನು ತನಿಖಾ ಸಂಸ್ಥೆಗಳು ಪರಿಶೀಲಿಸುತ್ತಿವೆ ಎಂಬ ಮಾಹಿತಿ ಇದೆ. ED ದಾಳಿ ನಡೆದ ಮರುದಿನವೇ ಅವರು ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ




    #karnataka
    Previous Articleಪೊಲೀಸ್ ಠಾಣೆಗಳ CCTV ಬಗ್ಗೆ ಹೈಕೋರ್ಟ್ ಖಡಕ್ ಸೂಚನೆ; ಒಂದು ನಿಮಿಷವೂ ಆಫ್ ಆಗಬಾರದು
    Next Article ಆಸ್ಟನ್ ಮಾರ್ಟಿನ್ ಅಪಘಾತ ಪ್ರಕರಣ; ಸಂಸದನ ಪುತ್ರ ಸಂಜುಷ್‌ನ ಮದ್ಯ, ಡ್ರಗ್ಸ್ ಟೆಸ್ಟ್ ನೆಗೆಟಿವ್

    Related Posts

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026

    ATM ಕಳ್ಳತನಕ್ಕೆ ಹೊಸ ತಂತ್ರ: ಮಷಿನ್‌ ಸಮೇತ ಎಸ್ಕೇಪ್‌ ಆದ ಕಳ್ಳರು

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.