Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಮಾವನ ಸಾವಿನ ಸುದ್ದಿ ನಡುವೆಯೂ ಕರ್ತವ್ಯಕ್ಕೆ ಹಾಜರಿ: ಪ್ರತಿಭಟನೆ ಮುಗಿಯುವವರೆಗೂ ಸ್ಥಳದಲ್ಲೇ ಉಳಿದ ಪೊಲೀಸ್ ಕಮಿಷನರ್
    ಕರ್ನಾಟಕ

    ಮಾವನ ಸಾವಿನ ಸುದ್ದಿ ನಡುವೆಯೂ ಕರ್ತವ್ಯಕ್ಕೆ ಹಾಜರಿ: ಪ್ರತಿಭಟನೆ ಮುಗಿಯುವವರೆಗೂ ಸ್ಥಳದಲ್ಲೇ ಉಳಿದ ಪೊಲೀಸ್ ಕಮಿಷನರ್

    adminBy adminAugust 22, 2026No Comments2 Mins Read

    ಹುಬ್ಬಳ್ಳಿ: ಖಾಕಿ ಎಂದರೆ ಕೇವಲ ಅಧಿಕಾರವಲ್ಲ, ಅದೊಂದು ಜವಾಬ್ದಾರಿ ಎಂಬುದನ್ನು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಮನೆಯಲ್ಲಿ ಸಾವಿನ ಸೂತಕವಿದ್ದರೂ, ವೈಯಕ್ತಿಕ ದುಃಖವನ್ನು ಬದಿಗಿಟ್ಟು ಸಾರ್ವಜನಿಕ ಶಾಂತಿ ಕಾಪಾಡಲು ಅವರು ರಸ್ತೆಗೆ ಇಳಿದಿರುವ ಘಟನೆ ಈಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

    ನಡೆದದ್ದೇನು?

    ಹುಬ್ಬಳ್ಳಿ-ಧಾರವಾಡದ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರ ಮಾವ ವಿರನಾಗಪ್ಪ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆಯೇ ಯಾವುದೇ ವ್ಯಕ್ತಿಯಾದರೂ ಆಸ್ಪತ್ರೆಗೆ ಓಡುವುದು ಸಹಜ. ಆದರೆ ಶಶಿಕುಮಾರ್ ಅವರು ಮಾಡಿದ್ದೇ ಬೇರೆ.

    ಇಂದು ಹಳೆ ಹುಬ್ಬಳ್ಳಿಯ ಭವಾನಿ ಶಂಕರ ದೇವಸ್ಥಾನದ ವಿಚಾರವಾಗಿ ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದವು. ನಗರದ ಕಾನೂನು ಸುವ್ಯವಸ್ಥೆ ಹದಗೆಡಬಾರದು ಎಂಬ ಕಾರಣಕ್ಕೆ ಕಮಿಷನರ್ ಶಶಿಕುಮಾರ್ ಅವರು ಸ್ವತಃ ಸ್ಥಳದಲ್ಲಿ ಹಾಜರಿದ್ದು ಬಂದೋಬಸ್ತ್ ಉಸ್ತುವಾರಿ ವಹಿಸಿದ್ದರು. ಮಾವನ ಸಾವಿನ ಸುದ್ದಿ ಕಿವಿಗೆ ಬಿದ್ದರೂ, ಪ್ರತಿಭಟನೆ ಮುಕ್ತಾಯವಾಗಿ ಪರಿಸ್ಥಿತಿ ಹತೋಟಿಗೆ ಬರುವವರೆಗೂ ಅವರು ಆಸ್ಪತ್ರೆಗೆ ತೆರಳದೆ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದರು.

    ಅನಾರೋಗ್ಯದ ನಡುವೆಯೂ ಸೇವೆ

    ಕೇವಲ ಕುಟುಂಬದ ದುಃಖ ಮಾತ್ರವಲ್ಲ, ಕಳೆದ ಎರಡು ದಿನಗಳಿಂದ ಶಶಿಕುಮಾರ್ ಅವರ ಆರೋಗ್ಯವೂ ಅಷ್ಟಕಷ್ಟೇ ಇತ್ತು. ಕೈಗೆ ಸಿರಿಂಜ್ (IV Drip) ಹಾಕಿಸಿಕೊಂಡಿದ್ದ ಸ್ಥಿತಿಯಲ್ಲೇ ಅವರು ಕಚೇರಿ ಕೆಲಸ ಹಾಗೂ ಬಂದೋಬಸ್ತ್ ಕೆಲಸಗಳಲ್ಲಿ ಭಾಗಿಯಾಗಿದ್ದರು. ಇಂದು ವೈಯಕ್ತಿಕ ನಷ್ಟದ ನಡುವೆಯೂ ಅವರು ತೋರಿದ ‘ಕರ್ತವ್ಯ ಪ್ರಜ್ಞೆ’ ಪೊಲೀಸ್ ಇಲಾಖೆಯ ಹೆಮ್ಮೆಯನ್ನು ಹೆಚ್ಚಿಸಿದೆ.

    ಯಾರು ಈ ಎನ್. ಶಶಿಕುಮಾರ್?

    ಎನ್. ಶಶಿಕುಮಾರ್ ಅವರು ಕರ್ನಾಟಕದ ದಕ್ಷ ಐಪಿಎಸ್ ಅಧಿಕಾರಿಗಳಲ್ಲಿ ಒಬ್ಬರು. 2007ನೇ ಬ್ಯಾಚ್ ಐಪಿಎಸ್ ಅಧಿಕಾರಿ. ಇವರು ಮೂಲತಹ ಕರ್ನಾಟಕದ ಚಿತ್ರದುರ್ಗ ಜಿಲ್ಲೆಯವರು. ಬಿಎಸ್ಸಿ (ಕೃಷಿ) ಪದವೀಧರರು. ಮಂಗಳೂರು ಪೊಲೀಸ್ ಕಮಿಷನರ್ ಆಗಿ, ಬೆಂಗಳೂರು ಉತ್ತರ ವಿಭಾಗದ ಡಿಸಿಪಿಯಾಗಿ, ಹಾವೇರಿ ಹಾಗೂ ಚಿಕ್ಕಮಗಳೂರು ಎಸ್ಪಿಯಾಗಿ ಇವರು ಕಾರ್ಯನಿರ್ವಹಿಸಿದ್ದಾರೆ. ಜುಲೈ 2024 ರಿಂದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಸಾರ್ವಜನಿಕರೊಂದಿಗೆ ಸೌಮ್ಯವಾಗಿ ವರ್ತಿಸುವ, ಆದರೆ ಅಪರಾಧಿಗಳ ಪಾಲಿಗೆ ಸಿಂಹಸ್ವಪ್ನವಾಗಿರುವ ಶಶಿಕುಮಾರ್ ಅವರು ಇಂದು ತೋರಿದ ಈ ಕರ್ತವ್ಯ ನಿಷ್ಠೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆಗೆ ಒಳಗಾಗಿದೆ. ಕುಟುಂಬಕ್ಕಿಂತ ಕರ್ತವ್ಯವೇ ದೊಡ್ಡದು ಎಂದು ತೋರಿಸಿಕೊಟ್ಟ ಈ ಅಧಿಕಾರಿಗೆ ಸಾರ್ವಜನಿಕರು ಹ್ಯಾಟ್ಸ್‌ ಆಫ್ ಹೇಳುತ್ತಿದ್ದಾರೆ.




    #karnataka
    Previous Articleಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳ ಇನ್ಸ್ಟಾಗ್ರಾಂ ಸಂಪರ್ಕ; 28 ವರ್ಷದ ಯುವಕ ಅರೆಸ್ಟ್
    Next Article ನಕಲಿ ಔಷಧಿ, ಅಸುರಕ್ಷಿತ ಆಹಾರಕ್ಕೆ ಕಡಿವಾಣ; ಜಿಲ್ಲೆ-ತಾಲೂಕು ಮಟ್ಟದಲ್ಲಿ ‘ವಾಚ್ ಟೀಮ್’ ರಚನೆಗೆ ಸರ್ಕಾರ ಚಿಂತನೆ

    Related Posts

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026

    ATM ಕಳ್ಳತನಕ್ಕೆ ಹೊಸ ತಂತ್ರ: ಮಷಿನ್‌ ಸಮೇತ ಎಸ್ಕೇಪ್‌ ಆದ ಕಳ್ಳರು

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.