Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಭಿಕ್ಷೆ ಬೇಡಿ ಜೀವನ, ಮನೆಯಲ್ಲಿ ಲಕ್ಷ ಲಕ್ಷ ಹಣ; 70 ವರ್ಷದ ವೃದ್ಧೆಯ ಸಾವಿನ ಬಳಿಕ ಬಯಲಾಯ್ತು ಅಚ್ಚರಿ ಘಟನೆ
    ಕರ್ನಾಟಕ

    ಭಿಕ್ಷೆ ಬೇಡಿ ಜೀವನ, ಮನೆಯಲ್ಲಿ ಲಕ್ಷ ಲಕ್ಷ ಹಣ; 70 ವರ್ಷದ ವೃದ್ಧೆಯ ಸಾವಿನ ಬಳಿಕ ಬಯಲಾಯ್ತು ಅಚ್ಚರಿ ಘಟನೆ

    adminBy adminAugust 24, 2026No Comments1 Min Read

    ಮಂಡ್ಯ : ಮಂಡ್ಯ ನಗರದ ಗುತ್ತಲು ಬಡಾವಣೆಯಲ್ಲಿ ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದು, ಅವರ ಮನೆಯಲ್ಲಿ ಮೂಟೆಗಟ್ಟಲೆ ನಗದು ಹಣ ಪತ್ತೆಯಾಗಿರುವ ವಿಸ್ಮಯಕಾರಿ ಘಟನೆ ನಡೆದಿದೆ.

    ಮೃತ ವೃದ್ಧೆಯನ್ನು ನೂರ್ (70) ಎಂದು ಗುರುತಿಸಲಾಗಿದೆ. ಕುಟುಂಬಸ್ಥರ ಆಸರೆ ಇಲ್ಲದೆ ಕಳೆದ ಹಲವು ವರ್ಷಗಳಿಂದ ಮಂಡ್ಯ ನಗರದ ವಿವಿಧೆಡೆ ಭಿಕ್ಷಾಟನೆ ಮಾಡಿಕೊಂಡು ಗುತ್ತಲು ಬಡಾವಣೆಯ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು. ಶನಿವಾರ ವಯೋಸಹಜ ಕಾಯಿಲೆಯಿಂದ ಅವರು ಮೃತಪಟ್ಟಿದ್ದು, ಸ್ಥಳೀಯರು ಹಾಗೂ ಸಂಬಂಧಿಕರು ಸೇರಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

    ಅಂತ್ಯಸಂಸ್ಕಾರದ ಬಳಿಕ ಸ್ಥಳೀಯರು ಮತ್ತು ಸಂಬಂಧಿಕರು ನೂರ್ ಅವರ ಮನೆಗೆ ತೆರಳಿ ಪರಿಶೀಲಿಸಿದಾಗ ಅಚ್ಚರಿ ಕಾದಿತ್ತು! ಮನೆಯ ಮೂಲೆ ಮೂಲೆಯಲ್ಲಿ ಪ್ಲಾಸ್ಟಿಕ್ ಕವರ್‌ಗಳಲ್ಲಿ ಸುತ್ತಿಟ್ಟಿದ್ದ ಕರೆನ್ಸಿ ನೋಟುಗಳ ಕಂತೆಗಳು ಹಾಗೂ ಚೀಲಗಳಲ್ಲಿ ತುಂಬಿಟ್ಟಿದ್ದ ನಾಣ್ಯಗಳ ರಾಶಿ ಪತ್ತೆಯಾಗಿದೆ. ಬೆಳಗ್ಗೆಯಿಂದ ಸಂಜೆಯವರೆಗೆ ಸತತವಾಗಿ ಎಣಿಕೆ ನಡೆಸಿದಾಗ ಒಟ್ಟು ಮೊತ್ತ ಬರೋಬ್ಬರಿ 8 ಲಕ್ಷ ರೂಪಾಯಿಗೂ ಅಧಿಕವಾಗಿರುವುದು ತಿಳಿದುಬಂದಿದೆ.

    ಮಂಡ್ಯ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯಲ್ಲಿ, ಸ್ಥಳೀಯ ಮುಖಂಡರು ಮಾತುಕತೆ ನಡೆಸಿ, ಪತ್ತೆಯಾದ ಸಂಪೂರ್ಣ ಹಣವನ್ನು ಮೃತ ವೃದ್ಧೆಯ ವಾರಸುದಾರರು ಹಾಗೂ ಸಂಬಂಧಿಕರಿಗೆ ಸೂಕ್ತವಾಗಿ ಹಸ್ತಾಂತರಿಸಿದ್ದಾರೆ. ವೃದ್ಧೆಯ ಬಳಿಯಿದ್ದ ನಗದಿನ ರಾಶಿ ಕಂಡು ಇಡೀ ಊರಿನ ಜನರೇ ಶಾಕ್ ಆಗಿದ್ದಾರೆ.




    #karnataka
    Previous Articleಬೆಳ್ತಂಗಡಿ: ಕೊಲ್ಲುವ ಉದ್ದೇಶದಿಂದ ಟಾಟಾ ಸುಮೊ ಡಿಕ್ಕಿ; ದ್ವಿಚಕ್ರ ವಾಹನ ಸವಾರನ ಮೇಲೆ ದಾಳಿ,ಆರೋಪಿ ಅರೆಸ್ಟ್
    Next Article ಉದ್ಯಮಿ ಡೇವಿಡ್ ಹತ್ಯೆ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಬಂಧನ ವೇಳೆ ಗುಂಡಿನ ದಾಳಿ

    Related Posts

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026

    ATM ಕಳ್ಳತನಕ್ಕೆ ಹೊಸ ತಂತ್ರ: ಮಷಿನ್‌ ಸಮೇತ ಎಸ್ಕೇಪ್‌ ಆದ ಕಳ್ಳರು

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.