Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಚಿಕ್ಕಮಗಳೂರು ಟಿಪ್ಪು ಕಟೌಟ್ ವಿವಾದ; ಪಾಕ್ ಪರ ಹಾಡಿನ ವಿಡಿಯೋ ಪೋಸ್ಟ್ ಆರೋಪ, ಪ್ರಮುಖ ಆರೋಪಿ ಅರೆಸ್ಟ್
    ಅಪರಾಧ

    ಚಿಕ್ಕಮಗಳೂರು ಟಿಪ್ಪು ಕಟೌಟ್ ವಿವಾದ; ಪಾಕ್ ಪರ ಹಾಡಿನ ವಿಡಿಯೋ ಪೋಸ್ಟ್ ಆರೋಪ, ಪ್ರಮುಖ ಆರೋಪಿ ಅರೆಸ್ಟ್

    adminBy adminAugust 25, 2026No Comments2 Mins Read

    ಚಿಕ್ಕಮಗಳೂರು: ಜಿಲ್ಲೆಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕಿಸ್ತಾನ್ ಪರ ಹಾಡು ಹಾಕಿ ಸಾಮಾಜಿಕ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರಿನ ಟಿಪ್ಪು ನಗರದ ನಿವಾಸಿ, 23 ವರ್ಷದ ಅಫ್ರಿದ್ ಬಂಧಿತ ಪ್ರಮುಖ ಆರೋಪಿಯಾಗಿದ್ದಾನೆ.

    14 ದಿನಗಳ ನ್ಯಾಯಾಂಗ ಬಂಧನ

    ಬಂಧಿತ ಆರೋಪಿ ಅಫ್ರಿದ್ ಖಾಸಗಿ ಕಾರು ಶೋರೂಮ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಈತ ‘ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್’ ಎಂಬ ಇನ್‌ಸ್ಟಾಗ್ರಾಮ್ ಖಾತೆಯನ್ನು ನಿರ್ವಹಿಸುತ್ತಿದ್ದು, ಅದೇ ಖಾತೆಯ ಮೂಲಕ ವಿವಾದಾತ್ಮಕ ವಿಡಿಯೋವನ್ನು ಹಂಚಿಕೊಂಡಿದ್ದ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಫ್ರಿದ್ ಹಾಗೂ ಮತ್ತೊಬ್ಬ ಆರೋಪಿ ರೋಷನ್‌ನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯ ಇಬ್ಬರಿಗೂ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

    ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ. ಕೇವಲ ವಿಡಿಯೋ ಕ್ರಿಯೇಟ್ ಮಾಡಿದವರು ಮಾತ್ರವಲ್ಲದೆ, ಈ ದೇಶದ್ರೋಹಿ ವಿಡಿಯೋವನ್ನು ಶೇರ್ ಮಾಡಿದವರು ಮತ್ತು ವಾಟ್ಸಾಪ್, ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೇಟಸ್ ಹಾಕಿಕೊಂಡವರ ಮೇಲೆಯೂ ತನಿಖೆ ನಡೆಸಲಾಗುತ್ತಿದೆ.

    ಘಟನೆಯ ಹಿನ್ನೆಲೆ ಹಾಗೂ ರಾಜಕೀಯ ಕಾವು!

    ಚಿಕ್ಕಮಗಳೂರಿನ ಟಿಪ್ಪು ನಗರದಲ್ಲಿ ಇತ್ತೀಚೆಗೆ 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಒಂದನ್ನು ನಿರ್ಮಿಸಲಾಗಿತ್ತು. ಆದರೆ, ಕೆಲವು ಕಿಡಿಗೇಡಿಗಳು ಈ ಕಟೌಟ್ ಬ್ಯಾಕ್‌ಗ್ರೌಂಡ್‌ನಲ್ಲಿ ಪಾಕಿಸ್ತಾನದ ‘ಮುಜಾಹಿದ್’ ಬೆಂಬಲಿತ ಹಾಗೂ ದೇಶವಿರೋಧಿ ಧಾಟಿಯ ಹಾಡನ್ನು ಹಾಕಿ ವಿಡಿಯೋ ಎಡಿಟ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ್ದರು. ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

    ಈ ಘಟನೆ ಹೊರಬೀಳುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲೂ ಭಾರಿ ಕಲಾಪ ಸೃಷ್ಟಿಯಾಗಿದೆ. ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣವೇ ಇಂತಹ ದೇಶದ್ರೋಹಿ ಕೃತ್ಯಗಳಿಗೆ ಕಾರಣ ಎಂದು ಬಿಜೆಪಿ ತನ್ನ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಶಾಂತಿ ಕದಡಲು ಯತ್ನಿಸುತ್ತಿರುವ ಮತಾಂಧ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳದೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ವಾಗ್ದಾಳಿ ನಡೆಸಿದೆ. ಸದ್ಯ ಪೊಲೀಸರು ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಭದ್ರತೆ ವಹಿಸಿದ್ದು, ಜಾಲತಾಣಗಳ ಮೇಲೆ ತೀವ್ರ ನಿಗಾ ಇರಿಸಿದ್ದಾರೆ.

     




    #crime #karnataka
    Previous Articleಬ್ರಹ್ಮಾವರ: ಪ್ರತಿಭಾವಂತ ಸಾಕ್ಸೋಫೋನ್ ವಾದಕಿ ನಮೃತಾ ದೇವಾಡಿಗ ಆತ್ಮಹತ್ಯೆ
    Next Article ಹನೂರು ಎನ್‌ಕೌಂಟರ್‌ಗೆ ಬಿಗ್ ಟ್ವಿಸ್ಟ್; ಮೃತರ ಒಳಉಡುಪಿನಲ್ಲಿ ಗನ್‌ಪೌಡರ್‌ ಪ್ರೈಮರ್ ಪತ್ತೆ

    Related Posts

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.