Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಕುಟುಂಬದ ಮಾನಕ್ಕೆ ಧಕ್ಕೆ ತಂದ ಆರೋಪ; ತಂದೆಯ ಸೂಚನೆಯಂತೆ ಪ್ರಿಯಕರನಿಂದ ಯುವತಿ ಕತ್ತು ಹಿಸುಕಿ ಹತ್ಯೆ
    ಅಪರಾಧ

    ಕುಟುಂಬದ ಮಾನಕ್ಕೆ ಧಕ್ಕೆ ತಂದ ಆರೋಪ; ತಂದೆಯ ಸೂಚನೆಯಂತೆ ಪ್ರಿಯಕರನಿಂದ ಯುವತಿ ಕತ್ತು ಹಿಸುಕಿ ಹತ್ಯೆ

    adminBy adminAugust 25, 2026Updated:August 25, 2026No Comments1 Min Read

    ಕುಟುಂಬದ ಮಾನಕ್ಕೆ ಧಕ್ಕೆ ತಂದಿದ್ದಾಳೆ ಎಂಬ ಆರೋಪದ ಹಿನ್ನೆಲೆಯಲ್ಲಿ, ತಂದೆಯ ಸೂಚನೆಯ ಮೇರೆಗೆ ಟೆಕ್ಕಿ ಪ್ರಿಯಕರನೇ ಯುವತಿಯನ್ನು ಕತ್ತು ಹಿಸುಕಿ ಕೊಂದಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ಯುವತಿಯನ್ನು  ಗೋದಾವರಿಖನಿಯ ನಿವಾಸಿ 33 ವರ್ಷದ ಅಂಕತಿ ಮಾನಸಾ ಎಂದು ಗುರುತಿಸಲಾಗಿದೆ.

    ಆಗಸ್ಟ್ 20ರಂದು ನಿರ್ಜನ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಕಾರಿನಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಕಾರಿನ ಡಿಕ್ಕಿ ತೆರೆದಾಗ ಕೊಳೆತ ಸ್ಥಿತಿಯಲ್ಲಿದ್ದ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಾರಂಗಲ್‌ನ ಮಹಾತ್ಮ ಗಾಂಧಿ ಮೆಮೋರಿಯಲ್ಆಸ್ಪತ್ರೆಗೆ ಕಳುಹಿಸಲಾಗಿದೆ.

    ಪ್ರಾಥಮಿಕ ತನಿಖೆಯ ಪ್ರಕಾರ, ಮಾನಸಾ ತನ್ನ ಬಾಲ್ಯದ ಸ್ನೇಹಿತನಾದ ವಿನೋದ್ ಜೊತೆ ಸಂಬಂಧ ಹೊಂದಿದ್ದಳು. ಆಕೆಗೆ ಈ ಹಿಂದೆ ಎರಡು ಮದುವೆಗಳಾಗಿದ್ದು, ಎರಡೂ ವಿಚ್ಛೇದನದಲ್ಲಿ ಅಂತ್ಯಗೊಂಡಿದ್ದವು.

    ಆಗಸ್ಟ್ 17ರಂದು ಮಾನಸಾ ಕರೀಂನಗರದಲ್ಲಿರುವ ವಿನೋದ್‌ನ ಬಾಡಿಗೆ ಕೊಠಡಿಗೆ ತೆರಳಿದ್ದಳು. ಅಲ್ಲಿ ವಿನೋದ್‌ನನ್ನು ಮದುವೆಯಾಗುವಂತೆ ಕೇಳಿಕೊಂಡಿದ್ದಾಳೆ ಎನ್ನಲಾಗಿದ್ದು, ಈ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಬಳಿಕ ವಿನೋದ್ ಮಾನಸಾಳ ತಂದೆ ರಾಜೇಶಂ ಅವರಿಗೆ ಕರೆ ಮಾಡಿ ನಡೆದ ವಿಚಾರವನ್ನು ತಿಳಿಸಿದ್ದಾನೆ.

    ಮಗಳ ವರ್ತನೆಯಿಂದ ಕುಟುಂಬದ ಮಾನಕ್ಕೆ ಧಕ್ಕೆ ಉಂಟಾಗಿದೆ ಎಂದು ಕೋಪಗೊಂಡ ರಾಜೇಶಂ, ವಿನೋದ್‌ಗೆ ಆಕೆಯೊಂದಿಗೆ ಜಗಳವಾಡಿ ಕೊಲೆ ಮಾಡುವಂತೆ ಸೂಚಿಸಿದ್ದಾನೆ ಎಂದು ಪೊಲೀಸರು ಆರೋಪಿಸಿದ್ದಾರೆ.

    ಪೊಲೀಸರ ಪ್ರಕಾರ, ನಂತರ ವಿನೋದ್ ಮಾನಸಾಳನ್ನು ಕತ್ತು ಹಿಸುಕಿ ಕೊಂದಿದ್ದಾನೆ. ಮೃತದೇಹವನ್ನು ಬಟ್ಟೆಯಲ್ಲಿ ಸುತ್ತಿ ಕಾರಿನ ಡಿಕ್ಕಿಯಲ್ಲಿ ಇರಿಸಿ, ಎಲ್ಕತುರ್ತಿಗೆ ತೆರಳಿ ನಿರ್ಜನ ಪ್ರದೇಶದಲ್ಲಿ ಕಾರನ್ನು ನಿಲ್ಲಿಸಿದ್ದಾನೆ. ಮೃತದೇಹವನ್ನು ಅಲ್ಲೇ ಬಿಸಾಡಲು ಆತ ಯೋಜಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ವಿಚಾರಣೆ ವೇಳೆ ವಿನೋದ್ ಮೊದಲು ಮಾನಸಾ ತನ್ನ ಕೊಠಡಿಯಲ್ಲಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾಳೆ ಹಾಗೂ ಭಯದಿಂದ ಮೃತದೇಹವನ್ನು ಹೊರಗೆ ಸಾಗಿಸಿದ್ದಾಗಿ ಹೇಳಿದ್ದನು. ಆದರೆ ಹೆಚ್ಚಿನ ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ತನ್ನ ಮೇಲೆ ಮಾನಸಾಳ ತಂದೆ ಕೊಲೆಗೆ ಒತ್ತಡ ಹೇರಿದ್ದನೆಂದು ತಿಳಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

    ಆರೋಪಿಯನ್ನು ಬಂಧಿಸಿ ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.




    #crime #national
    Previous Articleಪುತ್ತೂರು: ವಾಹನ ಗ್ಲಾಸ್‌ಗೆ ಸ್ಟಿಕ್ಕರ್, ನಂಬರ್ ಪ್ಲೇಟ್ ಮರೆಮಾಚಿ ಓಡಾಟ; ಸಂಚಾರ ಪೊಲೀಸರಿಂದ ದಂಡ
    Next Article ಮೂಢನಂಬಿಕೆಗೆ ತಾಯಿಯೇ ಬಲಿ; 80 ವರ್ಷದ ವೃದ್ಧೆಯನ್ನು ಬಾವಿಗೆ ಎಸೆದು ಕೊಂದ ಇಬ್ಬರು ಪುತ್ರರು ಅರೆಸ್ಟ್

    Related Posts

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.