ಮಂಗಳೂರು: ‘ಟಾಕ್ಸಿಕ್’ ಚಿತ್ರದ ಬಿಡುಗಡೆ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿರುವ ನಟ ಯಶ್, ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ದರ್ಶನ ಪಡೆದ ಬಳಿಕ ಉಜಿರೆಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ದೇವಸ್ಥಾನಕ್ಕೆ ಆಗಮಿಸಿದ ಯಶ್ ಅವರನ್ನು ದೇವಳದ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಬಳಿಕ ಶ್ರೀ ಸದಾಶಿವರುದ್ರ ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಇದೇ ವೇಳೆ ದೇವಸ್ಥಾನದ ನಾಗಬನಕ್ಕೂ ಭೇಟಿ ನೀಡಿದ ಯಶ್, ಅಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಕ್ಷೇತ್ರದ ಮಣ್ಣಿನ ಹರಕೆ ಬನಕ್ಕೂ ತೆರಳಿ ಪ್ರಾರ್ಥನೆ ಸಲ್ಲಿಸಿರುವುದು ಗಮನ ಸೆಳೆದಿದೆ.

ಇಷ್ಟಾರ್ಥ ಈಡೇರಿದ ಬಳಿಕ ಮಣ್ಣಿನ ಮೂರ್ತಿಗಳನ್ನು ಹರಕೆಯಾಗಿ ಸಮರ್ಪಿಸುವ ವಿಶೇಷ ಆಚರಣೆ ಈ ದೇವಸ್ಥಾನದಲ್ಲಿದೆ. ಈ ಹಿನ್ನೆಲೆಯಲ್ಲಿ ಯಶ್ ಅವರು ಮಣ್ಣಿನ ಹರಕೆ ಬನಕ್ಕೆ ಭೇಟಿ ನೀಡಿರುವುದು ಭಕ್ತರು ಹಾಗೂ ಅಭಿಮಾನಿಗಳ ಗಮನ ಸೆಳೆದಿದೆ.








