Close Menu
    What's Hot

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮಹಿಳೆ ಮೇಲಿನ ಆ್ಯಸಿಡ್ ದಾಳಿ ಪ್ರಕರಣಕ್ಕೆ ತೆರೆ: ಅಪರಾಧ ಸಾಬೀತು, ಅಪರಾಧಿಗೆ ಶಿಕ್ಷೆ
    ಅಪರಾಧ

    ಮಹಿಳೆ ಮೇಲಿನ ಆ್ಯಸಿಡ್ ದಾಳಿ ಪ್ರಕರಣಕ್ಕೆ ತೆರೆ: ಅಪರಾಧ ಸಾಬೀತು, ಅಪರಾಧಿಗೆ ಶಿಕ್ಷೆ

    adminBy adminAugust 26, 2026No Comments1 Min Read

    ಕಡಬ: ಮಹಿಳೆಯ ಮೇಲೆ ಆ್ಯಸಿಡ್ ದಾಳಿ ನಡೆಸಿದ ಗಂಭೀರ ಪ್ರಕರಣದಲ್ಲಿ ಅಪರಾಧಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹3.05 ಲಕ್ಷ ದಂಡ ವಿಧಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

    ಕಡಬ ಕೊಡಿಂಬಾಳ ನಿವಾಸಿ ಜಯಾನಂದ ಕೆ. (60) ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾನೆ. ಈ ಸಂಬಂಧ 2020ರಲ್ಲಿ ಕಡಬ ಪೊಲೀಸ್ ಠಾಣೆಯಲ್ಲಿ (ಅ.ಕ್ರ. 06/2020) ಭಾರತೀಯ ದಂಡ ಸಂಹಿತೆಯ (IPC) ವಿವಿಧ ಗಂಭೀರ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ್ದ ಆಗಿನ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಕುಸುಮಧರ ಅವರು ಆರೋಪಿಯ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದರು.

    ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ್ ಅವರು, ಸಾಕ್ಷ್ಯಾಧಾರಗಳ ಆಧಾರದ ಮೇಲೆ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿ ಈ ಕೆಳಗಿನಂತೆ ಶಿಕ್ಷೆ ವಿಧಿಸಿದ್ದಾರೆ:

    ಐಪಿಸಿ ಕಲಂ 326A ಅಡಿಯಲ್ಲಿ: 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹3,00,000 ದಂಡ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ 2 ವರ್ಷ ಸರಳ ಜೈಲು ಶಿಕ್ಷೆ.

    ಐಪಿಸಿ ಕಲಂ 504ರ ಅಡಿಯಲ್ಲಿ: 1 ವರ್ಷ ಕಾರಾಗೃಹ ಶಿಕ್ಷೆ ಹಾಗೂ ₹5,000 ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 3 ತಿಂಗಳ ಸರಳ ಕಾರಾಗೃಹ ಶಿಕ್ಷೆ.

    ಮಹಿಳೆಯರ ಮೇಲಿನ ಆ್ಯಸಿಡ್ ದಾಳಿಯಂತಹ ಅಮಾನುಷ ಕೃತ್ಯಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಈ ತೀರ್ಪು ಸಮಾಜಕ್ಕೆ ಪ್ರಮುಖ ಸಂದೇಶ ನೀಡಿದೆ. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಕೃಷ್ಣವೇಣಿ, ಹರಿಶ್ಚಂದ್ರ ಉದ್ಯಾವರ್, ಪ್ರಕಾಶ್ ಚಂದ್ರ ಶೆಟ್ಟಿ ಹಾಗೂ ಜಯಂತಿ ಕೆ. ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

    #crime #dakshinakannada
    Previous Articleಕಡಬದಲ್ಲಿ ‘ಕಿಂಗ್ಸ್ ಬಜಾರ್’ ಸ್ಕೀಮ್‌ಗೆ ಪೊಲೀಸ್ ದಾಳಿ: ನಿಷೇಧಿತ ಹಣಪರಿಚಲನೆ ಆರೋಪ, ಕೇಸ್ ದಾಖಲು
    Next Article ಆನ್‌ಲೈನ್ ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ ಆರೋಪ: ಕ್ರಮದ ಎಚ್ಚರಿಕೆ ನೀಡಿದ ಸಚಿವ ಯು.ಟಿ. ಖಾದರ್

    Related Posts

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026

    ಉಡುಪಿ: ಪಡಿತರ ಅಕ್ಕಿ ವಿಚಾರದಲ್ಲಿ ಅವಾಚ್ಯ ನಿಂದನೆ, ಕೊಲೆ ಬೆದರಿಕೆ; ಮೂವರು ಆರೋಪಿಗಳ ಬಂಧನ

    September 3, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.