Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»8 ವರ್ಷಗಳ ಹಿಂದೆ ಸತ್ತ ಮಗನ ಹೆಸರಲ್ಲಿ ₹5 ಲಕ್ಷ ವಂಚನೆ; ಕುಟುಂಬಕ್ಕೆ ಜೀವ ಬೆದರಿಕೆ, ಇಬ್ಬರು ಅರೆಸ್ಟ್
    ಅಪರಾಧ

    8 ವರ್ಷಗಳ ಹಿಂದೆ ಸತ್ತ ಮಗನ ಹೆಸರಲ್ಲಿ ₹5 ಲಕ್ಷ ವಂಚನೆ; ಕುಟುಂಬಕ್ಕೆ ಜೀವ ಬೆದರಿಕೆ, ಇಬ್ಬರು ಅರೆಸ್ಟ್

    adminBy adminAugust 28, 2026No Comments1 Min Read

    ಉಡುಪಿ : 8 ವರ್ಷಗಳ ಹಿಂದೆ ತೀರಿಹೋದ ವ್ಯಕ್ತಿಯೊಬ್ಬರು ವಜ್ರದ ವ್ಯಾಪಾರದಲ್ಲಿ 5 ಲಕ್ಷ ರೂಪಾಯಿ ಬಾಕಿ ಇರಿಸಿದ್ದಾರೆ ಎಂದು ಸುಳ್ಳು ಹೇಳಿ, ಅವರ ಕುಟುಂಬಕ್ಕೆ ಜೀವ ಬೆದರಿಕೆಯೊಡ್ಡುತ್ತಿದ್ದ ಇಬ್ಬರು ಖತರ್ನಾಕ್ ಆರೋಪಿಗಳನ್ನು ಉಡುಪಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಶಿವಳ್ಳಿ ಗ್ರಾಮದ ಕುಕ್ಕುಂಜೆ ನಿವಾಸಿ ಸಾಜೀದ್ ಹಾಗೂ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಸೈಯದ್ ಸೈಫ್ ಅಹಮ್ಮದ್ (40) ಬಂಧಿತ ಆರೋಪಿಗಳು.

    ದೂರುದಾರರಿಗೆ ಜುಲೈ 2, 2026ರಂದು ವಾಟ್ಸಾಪ್ ಕರೆಯೊಂದು ಬಂದಿದ್ದು, ಹಿಂದಿಯಲ್ಲಿ ಮಾತನಾಡಿದ ವ್ಯಕ್ತಿ, “ನಿಮ್ಮ ಮಗ ಅಜಿತ್ ಪಾಡಿಯಾರ್ ನಮ್ಮ ಬಳಿ ವಜ್ರದ ವ್ಯವಹಾರ ನಡೆಸಿ 5 ಲಕ್ಷ ರೂಪಾಯಿ ಬಾಕಿ ಇಟ್ಟಿದ್ದಾನೆ, ಆ ಹಣವನ್ನು ನೀವು ನೀಡಬೇಕು” ಎಂದು ಒತ್ತಾಯಿಸಿದ್ದ. ಮಗ ಅಜಿತ್ 8 ವರ್ಷಗಳ ಹಿಂದೆಯೇ ತೀರಿಹೋಗಿದ್ದು, ಈ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ ಎಂದು ತಂದೆ ಹಣ ನೀಡಲು ನಿರಾಕರಿಸಿದ್ದರು. ಆದಾಗ್ಯೂ, ಅದೇ ದಿನ ದುಬಾಯಿಯಲ್ಲಿದ್ದ ದೂರುದಾರರ ಮತ್ತೊಬ್ಬ ಮಗ ಅಮೀತ್ ಅವರಿಗೂ ವಾಟ್ಸಾಪ್ ಕರೆ ಮಾಡಿದ ಆರೋಪಿಗಳು, 5 ಲಕ್ಷ ನೀಡದಿದ್ದರೆ ಊರಿನಲ್ಲಿರುವ ಅವರ ಪತ್ನಿ ರಕ್ಷಾ ಅವರಿಗೆ ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದರು. ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

    ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್ IPS, ಹೆಚ್ಚುವರಿ ಎಸ್‌ಪಿ ಸುಧಾಕರ್ ನಾಯ್ಕ ಹಾಗೂ ಡಿವೈಎಸ್‌ಪಿ ಬೆಳ್ಳಿಯಪ್ಪ ಅವರ ಮಾರ್ಗದರ್ಶನದಲ್ಲಿ, ಉಡುಪಿ ನಗರ ಠಾಣಾ ಇನ್‌ಸ್ಪೆಕ್ಟರ್ ಮಹೇಶ ಪ್ರಸಾದ್.ಪಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಈ ವಿಶೇಷ ತಂಡ ಜುಲೈ 20 ರಂದು ಸಾಜೀದ್‌ನನ್ನು ಮತ್ತು ಆಗಸ್ಟ್ 26 ರಂದು ಸೈಯದ್ ಸೈಫ್ ಅಹಮ್ಮದ್‌ನನ್ನು ದಸ್ತಗಿರಿ ಮಾಡಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಲಾದ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.




    #crime #karnataka
    Previous Article‘ಬಂಧಿಸುವುದು ಪೊಲೀಸರಿಗೆ ತಮಾಷೆಯೇ?’; ವೈಟ್‌ಫೀಲ್ಡ್ ಪೊಲೀಸರಿಗೆ ಹೈಕೋರ್ಟ್ ಕ್ಲಾಸ್
    Next Article ಮಂಗಳೂರು: ನರ್ಸ್‌ಗೆ ‘ತಲೆ ತೆಗೀತೀನಿ’ ವಾಟ್ಸಾಪ್‌ನಲ್ಲಿ ಕೊಲೆ ಬೆದರಿಕೆ; ದೂರು ನೀಡಿದರೂ ಕ್ರಮವಿಲ್ಲ, ಆರೋಪಿಗೆ ಜಾಮೀನು

    Related Posts

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.