Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮಂಗಳೂರು: ನರ್ಸ್‌ಗೆ ‘ತಲೆ ತೆಗೀತೀನಿ’ ವಾಟ್ಸಾಪ್‌ನಲ್ಲಿ ಕೊಲೆ ಬೆದರಿಕೆ; ದೂರು ನೀಡಿದರೂ ಕ್ರಮವಿಲ್ಲ, ಆರೋಪಿಗೆ ಜಾಮೀನು
    ಅಪರಾಧ

    ಮಂಗಳೂರು: ನರ್ಸ್‌ಗೆ ‘ತಲೆ ತೆಗೀತೀನಿ’ ವಾಟ್ಸಾಪ್‌ನಲ್ಲಿ ಕೊಲೆ ಬೆದರಿಕೆ; ದೂರು ನೀಡಿದರೂ ಕ್ರಮವಿಲ್ಲ, ಆರೋಪಿಗೆ ಜಾಮೀನು

    adminBy adminAugust 28, 2026Updated:August 28, 2026No Comments2 Mins Read

    ಮಂಗಳೂರು: ದಕ್ಷಿಣ ಕನ್ನಡದ ಬಂಟ್ವಾಳದ ಬಸ್ ನಿಲ್ದಾಣವೊಂದರಲ್ಲಿ ಪಾಗಲ್ ಪ್ರೇಮಿಯೊಬ್ಬ ಯುವತಿಯನ್ನು ಕೊಚ್ಚಿ ಕೊಲೆ ಮಾಡಿದ್ದ ಪ್ರಕರಣ ಮಾಸುವ ಮುನ್ನವೇ ಮಂಗಳೂರಿನಲ್ಲಿ ಮತ್ತೊಂದು ಕೊಲೆ ಬೆದರಿಕೆ ಪ್ರಕರಣ ಕೇಳಿಬಂದಿದೆ. ತನ್ನ ಮೇಲೆ ದೌರ್ಜನ್ಯವೆಸಗಿದವನ ವಿರುದ್ಧ ಯುವತಿಯೊಬ್ಬಳು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಇದೇ ಕಾರಣಕ್ಕೆ ಆರೋಪಿ ಆಕೆಗೆ ಕೊಲೆ ಬೆದರಿಕೆ ಹಾಕಿದ್ದಾನೆ. ಅಷ್ಟೇ ಅಲ್ಲದೆ ಯುವತಿಯ ಸ್ನೇಹಿತೆಯರ ಮೇಲೂ ಹಲ್ಲೆ ನಡೆಸಿದ್ದಾನೆ. ಇದೆಲ್ಲದರ ಬಳಿಕವೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪಗಳು ಕೇಳಿಬಂದಿವೆ.

    ಘಟನೆಯ ಹಿನ್ನೆಲೆ ಏನು?

    ಪುತ್ತೂರು ಮೂಲದ ನರ್ಸ್ ನಂದಿನಿ ಎಂಬುವವರು ಮಂಗಳೂರಿನ ನೀರುಮಾರ್ಗದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಕಳೆದ ಆಗಸ್ಟ್ 16ರಂದು ನಂದಿನಿ ಮೈಸೂರಿಗೆ ತೆರಳುವಾಗ, ತಮ್ಮ ಮನೆಯಲ್ಲಿದ್ದ ನಾಯಿಗೆ ಊಟ ಹಾಕಲು ಕೀಯನ್ನು ಸ್ನೇಹಿತೆ ಚಂದನಾಗೆ ನೀಡಿದ್ದರು. ಆಗಸ್ಟ್ 17ರಂದು ಚಂದನಾ ತನ್ನ ಮತ್ತೊಬ್ಬ ಸ್ನೇಹಿತೆ, ಕೇರಳ ಮೂಲದ ನರ್ಸ್ ಆದಿತ್ಯಾ ಜೊತೆ ನಂದಿನಿ ಮನೆಗೆ ತೆರಳಿದ್ದರು.

    ಈ ವೇಳೆ, ಆದಿತ್ಯಾ ನೀಡಿದ ಮಾಹಿತಿ ಆಧರಿಸಿ ಅಲ್ಲಿಗೆ ಬಂದ ಆರೋಪಿ ನೌಶದ್, ಮನೆಗೆ ಅಕ್ರಮವಾಗಿ ಪ್ರವೇಶಿಸಿ ಚಂದನಾ ಮತ್ತು ಆದಿತ್ಯಾಗೆ ಅಶ್ಲೀಲವಾಗಿ ನಿಂದಿಸಿ ಗಲಾಟೆ ಮಾಡಿದ್ದಾನೆ. ಈ ವಿಷಯ ತಿಳಿದು ನಂದಿನಿ ಕರೆ ಮಾಡಿದಾಗ, ಫೋನ್ ಸ್ವೀಕರಿಸಿದ ನೌಶದ್ ನಂದಿನಿಗೂ ಅಶ್ಲೀಲವಾಗಿ ಬೈದು ಜೀವಬೆದರಿಕೆ ಹಾಕಿದ್ದಾನೆ.

    ‘ನಿನ್ನ ತಲೆ ತೆಗೀತೀನಿ’: ವಾಟ್ಸಾಪ್‌ನಲ್ಲಿ ಕೊಲೆ ಬೆದರಿಕೆ!

    ಆರೋಪಿ ನೌಶದ್ ವಿರುದ್ಧ ನಂದಿನಿ ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದರು. ದೂರು ನೀಡಿದ ವಿಚಾರ ತಿಳಿಯುತ್ತಿದ್ದಂತೆಯೇ ಕೋಪಗೊಂಡ ನೌಶದ್, ವಾಟ್ಸಾಪ್‌ನಲ್ಲಿ ವಾಯ್ಸ್ ಮೆಸೇಜ್ ಕಳುಹಿಸಿ “ನನಗೆ ಯಾವುದಕ್ಕೂ ಹೆದರಿಕೆ ಇಲ್ಲ. ಪೊಲೀಸರಿಗೆ ಶರಣಾಗೋದಕ್ಕಿಂತ ಮುಂಚೆ ನಿನ್ನ ತಲೆ ತೆಗೀತೀನಿ, ಕೊಲ್ಲದೇ ಬಿಡುವುದಿಲ್ಲ!” ಎಂದು ಬಹಿರಂಗವಾಗಿಯೇ ಬೆದರಿಕೆ ಹಾಕಿದ್ದ. ಇದರಿಂದ ತೀವ್ರ ಭೀತಿಗೊಳಗಾದ ನಂದಿನಿ, ಆಗಸ್ಟ್ 20ರಂದು ಮಂಗಳೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಳು.

    ಮತ್ತೊಬ್ಬ ನರ್ಸ್‌ಗೆ ಬ್ಲಾಕ್‌ಮೇಲ್?

    ದೂರು ನೀಡಿ 10 ದಿನಗಳಾದರೂ ಪೊಲೀಸರು ಆರೋಪಿ ನೌಶದ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಭಯಗೊಂಡ ನಂದಿನಿ, ರಕ್ಷಣೆ ಕೋರಿ ವಿಶ್ವ ಹಿಂದೂ ಪರಿಷತ್ (VHP) ಮತ್ತು ದುರ್ಗಾವಾಹಿನಿ ಮುಖಂಡರನ್ನು ಸಂಪರ್ಕಿಸಿದ್ದಾಳೆ.

    ಈ ವೇಳೆ ಮತ್ತೊಬ್ಬ ನರ್ಸ್ ಆದಿತ್ಯಾಳನ್ನೂ ವಿಎಚ್‌ಪಿ ಮುಖಂಡರು ಸಂಪರ್ಕಿಸಿದ್ದು, “ನೌಶದ್ ಬಳಿ ನನ್ನ ಫೋಟೋ, ವಿಡಿಯೋಗಳಿವೆ” ಎಂದು ಆದಿತ್ಯಾ ಹೇಳಿಕೊಂಡಿದ್ದಾಳೆ. ಈ ಆಧಾರದ ಮೇಲೆ ನೌಶದ್ ಆಕೆಯ ಫೋಟೋ-ವಿಡಿಯೋ ಇಟ್ಟುಕೊಂಡು ಬ್ಲಾಕ್‌ಮೇಲ್ ಮಾಡುತ್ತಿದ್ದನಾ ಎಂಬ ಅನುಮಾನ ವ್ಯಕ್ತವಾಗಿದೆ. ಸದ್ಯ ಆದಿತ್ಯಾ ಕೇರಳಕ್ಕೆ ತೆರಳಿದ್ದು, ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಎನ್ನಲಾಗಿದೆ.

    ಇನ್ನೊಂದೆಡೆ, ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಂತೆಯೇ ಆಸ್ಪತ್ರೆ ಆಡಳಿತ ಮಂಡಳಿಯು ದೂರು ನೀಡಿದ ನಂದಿನಿ ಹಾಗೂ ಆದಿತ್ಯಾ ಇಬ್ಬರನ್ನೂ ಕೆಲಸದಿಂದ ವಜಾಗೊಳಿಸಿ ಆದೇಶಿಸಿದೆ. “ಮಂಗಳೂರಿನಲ್ಲಿ ನಡೆಯುತ್ತಿರುವ ಇತ್ತೀಚಿನ ಘಟನೆಗಳನ್ನು ನೋಡಿದರೆ ಹೊರಗೆ ಓಡಾಡಲು ಭಯವಾಗುತ್ತಿದೆ, ನಮಗೆ ಸೂಕ್ತ ರಕ್ಷಣೆ ಬೇಕು” ಎಂದು ನಂದಿನಿ ಕಣ್ಣೀರು ಹಾಕಿದ್ದಾರೆ

    ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ

    ಆರೋಪಿ ಬಂಧನ ವಿಳಂಬದ ಬಗ್ಗೆ ಸಾರ್ವಜನಿಕರು ಹಾಗೂ ಹಿಂದೂ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

    “ನಮಗೂ ಆರೋಪಿಯನ್ನು ಬಂಧಿಸುವ ಉದ್ದೇಶವೇ ಇದೆ. ಈ ಪ್ರಕರಣದಲ್ಲಿ ಯಾವುದೇ ವಿನಾಯಿತಿ ನೀಡಲಾಗಿಲ್ಲ. ಆದರೆ ಇದು ದೂರವಾಣಿ ಮೂಲಕ ಬೆದರಿಕೆ ಹಾಕಿದ ಪ್ರಕರಣವಾಗಿದೆ. ಕಾನೂನಿನಲ್ಲಿ ಈ ಅಪರಾಧಕ್ಕೆ ನಿಗದಿಪಡಿಸಿರುವ ಶಿಕ್ಷೆಯ ಮಿತಿ ನಿರ್ದಿಷ್ಟ ಮಟ್ಟಕ್ಕಿಂತ ಕಡಿಮೆಯಿರುವುದರಿಂದ ತಕ್ಷಣ ಬಂಧಿಸಲು ಕಾನೂನಿನಲ್ಲಿ ಅವಕಾಶವಿರುವುದಿಲ್ಲ ಎಂದು ಕಮಿಷನರ್ ತಿಳಿಸಿದ್ದಾರೆ. ಪೊಲೀಸ್ ಕಮಿಷನರ್‌ ಸ್ಪಷ್ಟನೆ ಬೆನ್ನಲ್ಲೇ, ಆರೋಪಿ ನೌಶದ್ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದಾನೆ.

     




    #crime #dakshinakannada
    Previous Article8 ವರ್ಷಗಳ ಹಿಂದೆ ಸತ್ತ ಮಗನ ಹೆಸರಲ್ಲಿ ₹5 ಲಕ್ಷ ವಂಚನೆ; ಕುಟುಂಬಕ್ಕೆ ಜೀವ ಬೆದರಿಕೆ, ಇಬ್ಬರು ಅರೆಸ್ಟ್
    Next Article ಬೀಗ ಹಾಕಿದ ಮನೆಗಳೇ ಟಾರ್ಗೆಟ್; ಉಡುಪಿಯಲ್ಲಿ ಸರಣಿ ಕಳ್ಳತನ,ಇಬ್ಬರು ಖತರ್ನಾಕ್ ಕಳ್ಳರು ಅರೆಸ್ಟ್

    Related Posts

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.