Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಮತ್ತೊಂದು ಭಿಕ್ಷುಕಿಯ ಮನೆಯಲ್ಲಿ ಹಣದ ಮೂಟೆ, ಚಿಲ್ಲರೆ ರಾಶಿ ಪತ್ತೆ; 20ಕ್ಕೂ ಹೆಚ್ಚು ಮಂದಿಯಿಂದ ಹಣ ಎಣಿಕೆ
    ಕರ್ನಾಟಕ

    ಮತ್ತೊಂದು ಭಿಕ್ಷುಕಿಯ ಮನೆಯಲ್ಲಿ ಹಣದ ಮೂಟೆ, ಚಿಲ್ಲರೆ ರಾಶಿ ಪತ್ತೆ; 20ಕ್ಕೂ ಹೆಚ್ಚು ಮಂದಿಯಿಂದ ಹಣ ಎಣಿಕೆ

    adminBy adminAugust 28, 2026No Comments1 Min Read

    ಮಂಡ್ಯ : ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರ ಮನೆಯಲ್ಲಿ ಮೂಟೆಗಟ್ಟಲೆ ಹಣ ಹಾಗೂ ಚಿಲ್ಲರೆ ಕಾಸು ಪತ್ತೆಯಾಗಿರುವ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ಪೂರ್ಣಯ್ಯ ಬೀದಿಯ ಸಾವಿತ್ರಿ ಎಂಬ ವೃದ್ಧ ಭಿಕ್ಷುಕಿಯ ಮನೆಯಲ್ಲಿ ಹಣದ ರಾಶಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿದೆ.

    ಸಾವಿತ್ರಿ ಹಲವು ವರ್ಷಗಳಿಂದ ಭಿಕ್ಷೆ ಬೇಡಿ ಬಂದ ಹಣವನ್ನು ಸಂಗ್ರಹಿಸಿಕೊಂಡು ಜೀವನ ನಡೆಸುತ್ತಿದ್ದರು ಎನ್ನಲಾಗಿದೆ. ಸುಮಾರು 10 ವರ್ಷಗಳಿಂದ ಭಿಕ್ಷೆ ಬೇಡಿ ಸಂಗ್ರಹಿಸಿದ ಹಣವನ್ನು ಚೀಲಗಳಲ್ಲಿ ತುಂಬಿ ಮನೆಯಲ್ಲಿ ಇಟ್ಟುಕೊಂಡಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

    ವೃದ್ಧೆ ಹಲವು ವರ್ಷಗಳಿಂದ ಒಂಟಿಯಾಗಿ ಮನೆಯೊಂದರಲ್ಲಿ ವಾಸವಾಗಿದ್ದರು. ಮನೆಯಲ್ಲೂ ಸರಿಯಾದ ಸ್ವಚ್ಛತೆ ಹಾಗೂ ಬೆಳಕಿನ ವ್ಯವಸ್ಥೆ ಇರಲಿಲ್ಲ ಎನ್ನಲಾಗಿದೆ. ಇಂದು ಗುರುವಾರ ಸಾವಿತ್ರಿ ಮನೆಯಿಂದ ಹೊರಗೆ ಬಾರದಿರುವುದನ್ನು ಗಮನಿಸಿದ ಸ್ಥಳೀಯರಿಗೆ ಅನುಮಾನ ಮೂಡಿದೆ. ಬಳಿಕ ಮನೆಗೆ ತೆರಳಿ ಪರಿಶೀಲಿಸಿದಾಗ, ವೃದ್ಧೆ ಅನಾರೋಗ್ಯದಿಂದ ಬಳಲುತ್ತಿರುವುದು ಕಂಡುಬಂದಿದೆ.

    ತಕ್ಷಣ ಸ್ಥಳೀಯರು ಆಕೆಗೆ ಉಪಚಾರ ನೀಡಿ ಊಟ-ತಿಂಡಿ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬಳಿಕ ಮನೆಯ ಪರಿಸ್ಥಿತಿ ಪರಿಶೀಲಿಸಿದ ಸಂದರ್ಭದಲ್ಲಿ ಚೀಲಗಳಲ್ಲಿ ತುಂಬಿಸಿಟ್ಟಿದ್ದ ಹಣದ ಮೂಟೆಗಳು ಮತ್ತು ಅಪಾರ ಪ್ರಮಾಣದ ಚಿಲ್ಲರೆ ನಾಣ್ಯಗಳು ಕಂಡುಬಂದಿವೆ.

    ಹಣ ಪತ್ತೆಯಾಗುತ್ತಿದ್ದಂತೆ ಸ್ಥಳೀಯರು ಹಾಗೂ ಸ್ವಯಂ ಸೇವಕರು ಸೇರಿ ಹಣ ಎಣಿಕೆ ಕಾರ್ಯ ಆರಂಭಿಸಿದ್ದಾರೆ. 20ಕ್ಕೂ ಹೆಚ್ಚು ಸ್ವಯಂಸೇವಕರು ಹಣ ಎಣಿಸುವ ಕಾರ್ಯದಲ್ಲಿ ತೊಡಗಿದ್ದು, ಲಕ್ಷಾಂತರ ರೂಪಾಯಿ ಮೊತ್ತ ಸಂಗ್ರಹವಾಗಿರುವುದು ಬೆಳಕಿಗೆ ಬಂದಿದೆ ಎನ್ನಲಾಗಿದೆ. ಆದರೆ ಒಟ್ಟು ಎಷ್ಟು ಹಣ ಪತ್ತೆಯಾಗಿದೆ ಎಂಬ ನಿಖರ ಮೊತ್ತ ಇನ್ನಷ್ಟೇ ತಿಳಿದುಬರಬೇಕಿದೆ.

    ಸಾವಿತ್ರಿ ಜೀವನಪೂರ್ತಿ ಭಿಕ್ಷೆ ಬೇಡಿ ಸಂಗ್ರಹಿಸಿದ ಹಣವನ್ನು ಸುರಕ್ಷಿತವಾಗಿ ಇಡಲು ಸ್ಥಳೀಯರು ಮುಂದಾಗಿದ್ದಾರೆ. ಈ ಹಣವನ್ನು ಅವರ ಹೆಸರಿನಲ್ಲೇ ಬ್ಯಾಂಕ್ ಖಾತೆಯಲ್ಲಿ ಡೆಪಾಸಿಟ್ ಮಾಡಲು ನಿರ್ಧರಿಸಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

    ಇತ್ತೀಚೆಗಷ್ಟೇ ಮಂಡ್ಯ ನಗರದಲ್ಲಿಯೂ ಮೃತಪಟ್ಟಿದ್ದ ವೃದ್ಧೆಯೊಬ್ಬರ ಮನೆಯಲ್ಲಿ ಇದೇ ರೀತಿಯಲ್ಲಿ ಭಾರೀ ಪ್ರಮಾಣದ ಹಣ ಪತ್ತೆಯಾಗಿತ್ತು. ಇದೀಗ ಶ್ರೀರಂಗಪಟ್ಟಣದಲ್ಲೂ ಭಿಕ್ಷುಕಿಯ ಮನೆಯಲ್ಲಿ ಹಣದ ರಾಶಿ ಪತ್ತೆಯಾಗಿರುವುದು ಮಂಡ್ಯ ಜಿಲ್ಲೆಯಲ್ಲಿ ಚರ್ಚೆಗೆ ಕಾರಣವಾಗಿದೆ.

     




    #karnataka
    Previous Articleಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಸಿಎಂ-ಹೈಕಮಾಂಡ್‌ ನಿರ್ಧಾರದತ್ತ ಎಲ್ಲರ ಚಿತ್ತ
    Next Article ಬಂಟ್ವಾಳ: ‘ಮೃತ’ನೆಂದು ಭಾವಿಸಿ ಅಂತ್ಯಕ್ರಿಯೆಗೆ ಸಿದ್ಧತೆ, ರುದ್ರಭೂಮಿಯಲ್ಲೂ ವ್ಯವಸ್ಥೆ; ಬಳಿಕ ಏಕಾಏಕಿ ಉಸಿರಾಡಿದ ಯುವಕ, ಕುಟುಂಬಸ್ಥರಿಗೆ ಶಾಕ್

    Related Posts

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026

    ATM ಕಳ್ಳತನಕ್ಕೆ ಹೊಸ ತಂತ್ರ: ಮಷಿನ್‌ ಸಮೇತ ಎಸ್ಕೇಪ್‌ ಆದ ಕಳ್ಳರು

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.