Close Menu
    What's Hot

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಚೀರುಂಭಾ ಭಗವತಿ ತೀಯಾ ಸಮಾಜದಲ್ಲಿ ಅವ್ಯವಹಾರ ಆರೋಪ; ಲೆಕ್ಕಪತ್ರ ಕೇಳಿದರೆ ಕೈಕಾಲು ಕಡಿಯುದಾಗಿ ಬೆದರಿಕೆ
    ಅಪರಾಧ

    ಚೀರುಂಭಾ ಭಗವತಿ ತೀಯಾ ಸಮಾಜದಲ್ಲಿ ಅವ್ಯವಹಾರ ಆರೋಪ; ಲೆಕ್ಕಪತ್ರ ಕೇಳಿದರೆ ಕೈಕಾಲು ಕಡಿಯುದಾಗಿ ಬೆದರಿಕೆ

    adminBy adminAugust 28, 2026No Comments2 Mins Read

    ಶ್ರೀ ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾರ ನಡೆದಿದ್ದು ಈ ಕುರಿತು ಸಹಕಾರಿ ನಿಬಂಧಕರಿಗೆ ದೂರು ನೀಡಲಾಗಿದೆ. ಪೊಲೀಸ್ ಕಮಿಷನರ್ ಅವರಿಗೂ ದೂರು ನೀಡಲಾಗಿದೆ. ಲೆಕ್ಕಪತ್ರ ಕೇಳಿದರೆ ಕೈಕಾಲು ಕಡಿಯುವ ಬೆದರಿಕೆ ಹಾಕಿದ್ದಾರೆ ಎಂದು ಕಾರ್ಯಕಾರಿ ಸಮಿತಿ ಸದಸ್ಯ ಪವನ್ ರಾಜ್ ಪತ್ರಿಕಾಗೋಷ್ಟಿಯಲ್ಲಿ ಆರೋಪಿಸಿದರು.ಕಳೆದ ಎರಡು ವರ್ಷಗಳಿಂದ ಶ್ರೀ ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸದಸ್ಯನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಹಿಂದಿನ ಮಹಾಸಭೆಯಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರಾಗಿ ಸುರೇಶ್ ಭಟ್ನಗರ ಹಾಗೂ ಸಂಘದ ಅಧ್ಯಕ್ಷರಾಗಿ ಉಮೇಶ್ ಬೆಂಜನಪದವು ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದರು. ಆದರೆ ಅಧಿಕಾರ ಹಸ್ತಾಂತರಗೊಂಡ 15 ದಿನಗಳಲ್ಲೇ ಉಮೇಶ್ ಬೆಂಜನಪದವು ವೈಯಕ್ತಿಕ ಕಾರಣ ನೀಡಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಅದಾದ ಬಳಿಕ ಹೊಸ ಮಹಾಸಭೆಯನ್ನು ಕರೆಯದೆ, ಹಲವು ಆಕ್ಷೇಪಗಳ ನಡುವೆಯೇ ಮಾಸಿಕ ಸಭೆಯಲ್ಲಿ ಚಿದಾನಂದ ಗುರಿಕಾರ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.

    ಇಲ್ಲಿಂದ ಮುಂದಿನ ಆಡಳಿತ ಕ್ರಮಗಳ ಕುರಿತು ಕಾರ್ಯಕಾರಿ ಸಮಿತಿಯೊಳಗೆ ಹಲವು ಪ್ರಶ್ನೆಗಳು ಉದ್ಭವಿಸುತ್ತಾ ಬಂದಿವೆ. ಸಂಘದ ಮಾಜಿ ಅಧ್ಯಕ್ಷರಾದ ಚಂದ್ರಹಾಸ್ ಉಳ್ಳಾಲ್ ಅವರ ಅವಧಿಯಲ್ಲಿ ನೂತನ ಸಭಾಂಗಣ ನಿರ್ಮಾಣದ ವೇಳೆ ಹಣಕಾಸಿನ ಕೊರತೆ ಉಂಟಾದಾಗ, ಅವರ ಕುಟುಂಬಕ್ಕೆ ಸೇರಿದ ಜಮೀನನ್ನು ಭಗವತಿ ಬ್ಯಾಂಕ್‌ನಲ್ಲಿ ಅಡಮಾನವಿಟ್ಟು ಸುಮಾರು 130 ಲಕ್ಷ ಸಾಲ ಪಡೆದು ಸಭಾಂಗಣ ನಿರ್ಮಾಣಕ್ಕೆ ಬಳಸಲಾಗಿತ್ತು ಎಂದು ಸಭೆಗಳಲ್ಲಿ ತಿಳಿಸಲಾಗಿತ್ತು. ಸಭಾಂಗಣದಿಂದ ತಿಂಗಳಿಗೆ ಸುಮಾರು ₹1 ಲಕ್ಷ ಬಾಡಿಗೆ ಆದಾಯ ಬರುವ ವ್ಯವಸ್ಥೆಯನ್ನು ರೂಪಿಸಿ, ಅದೇ ಆದಾಯದಿಂದ ಬ್ಯಾಂಕ್ ಸಾಲದ ಕಂತುಗಳನ್ನು ಪಾವತಿಸಲಾಗುತ್ತಿತ್ತು.

    ಅಧಿಕಾರ ಹಸ್ತಾಂತರದ ಸಂದರ್ಭದಲ್ಲಿ ಚಂದ್ರಹಾಸ್ ಉಳ್ಳಾಲ್ ಅವರು ಸಾಧ್ಯವಾದಷ್ಟು ಬೇಗ ಸಾಲವನ್ನು ತೀರಿಸಿ ಅಡಮಾನದಲ್ಲಿರುವ ದಾಖಲೆಗಳನ್ನು ಹಿಂದಿರುಗಿಸುವಂತೆ ಮನವಿ ಮಾಡಿಕೊಂಡಿದ್ದರು. ನಂತರದ ಸಭೆಯಲ್ಲಿ ಬ್ಯಾಂಕ್ ಸಾಲ ಹಾಗೂ ಇತರ ಬಾಕಿಗಳನ್ನು ಸೇರಿಸಿ ಒಟ್ಟು ಸುಮಾರು 36 ಲಕ್ಷ ರೂ. ಬಾಧ್ಯತೆ ಇದೆ ಎಂದು ತಿಳಿಸಲಾಗಿತ್ತು. ಈ ಕುರಿತು ಲೆಕ್ಕಪತ್ರ ಮಂಡಿಸುವಂತೆ ಕೇಳಿದರೂ ಯಾವುದೇ ಲೆಕ್ಕಪತ್ರ ಮಂಡನೆ ಆಗಿಲ್ಲ. ಇದೇ ರೀತಿಯಾಗಿ ನಮ್ಮ ಕ್ಷೇತ್ರದಲ್ಲಿ ದಾನಿಗಳ ಸಹಕಾರದಿಂದ ಮಹಾದ್ವಾರ ನಿರ್ಮಾಣವಾಗಿದೆ.

    ನಮಗೆ ಯಾವುದೇ ಸಂಘರ್ಷ ಮಾಡಲು ಮನಸ್ಸಿಲ್ಲ, ನಮ್ಮದೇ ಸಂಘ, ನಮ್ಮದೇ ಸಮಾಜ, ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಆದರೆ ಪಾರದರ್ಶಕವಾಗಿ ಸಂಘದ ಬೈಲಾ ಪ್ರಕಾರ ನಡೆಯಬೇಕು, ಲೆಕ್ಕಪತ್ರಗಳು ಪಾರದರ್ಶಕವಾಗಿ ಇರ್ಬೇಕು, ಕಾರ್ಯಕಾರಿಣಿ ಸಮಿತಿಗೆ ಹಕ್ಕು ಮತ್ತು ಜವಾಬ್ದಾರಿಗಳು ಇರ್ಬೇಕು. ಇದೇ ನಮ್ಮ ಆಗ್ರಹ. ಆದರೆ ಲೆಕ್ಕಪತ್ರ ಕುರಿತು ಪ್ರಶ್ನೆ ಮಾಡಿದರೆ ಫೋನ್‌ನಲ್ಲಿ ಬೆದರಿಕೆ ಹಾಕಲಾಗುತ್ತದೆ. ಕೈಕಾಲು ಕಡಿಯುವುದಾಗಿ ಹೇಳುತ್ತಾರೆ. ಈ ಕುರಿತು ಪೊಲೀಸ್ ಕಮಿಷನರ್ ಅವರಿಗೆ ದೂರು ಕೊಟ್ಟರೂ ಎಲ್ಲ ದಾಖಲೆಗಳನ್ನು ನೀಡಲಾಗಿದ್ದರೂ ಆತನ ವಿರುದ್ಧ ಎಫ್‌ಐಆರ್ ದಾಖಲಾಗಿಲ್ಲ ಎಂದರು.




    #crime #dakshinakannada
    Previous Articleಸ್ವಂತ ಮಗನನ್ನೇ ಜಲಾಶಯಕ್ಕೆ ಎಸೆದ ಆರೋಪ; 4 ವರ್ಷದ ಬಾಲಕನ ಶವ ಪತ್ತೆ, ತಂದೆಯ ಬಂಧನ
    Next Article ₹30 ಸಾವಿರ ಲಂಚ ಪಡೆದ ಆರೋಪ; ಮೂವರು ಹೆಡ್ ಕಾನ್ಸ್‌ಟೇಬಲ್‌ ಸೇರಿ ಹೋಂಗಾರ್ಡ್ ಲೋಕಾಯುಕ್ತ ಬಲೆಗೆ

    Related Posts

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026

    KPSC ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪಗೆ ಹೈಕೋರ್ಟ್‌ ಛೀಮಾರಿ

    September 3, 2026

    ಉಡುಪಿ: ಪಡಿತರ ಅಕ್ಕಿ ವಿಚಾರದಲ್ಲಿ ಅವಾಚ್ಯ ನಿಂದನೆ, ಕೊಲೆ ಬೆದರಿಕೆ; ಮೂವರು ಆರೋಪಿಗಳ ಬಂಧನ

    September 3, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಿಂಡಲಗಾ ಜೈಲಿನ ಕೈದಿಯೊಂದಿಗೆ ವಿಡಿಯೋ ಕಾಲ್; ವಿವಾದದ ಬೆನ್ನಲ್ಲೇ ಪಿಎಸ್ಐ ಜಯಶ್ರೀ ಸಸ್ಪೆಂಡ್

    September 3, 2026

    IPS ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ಜನರಿಂದ ಹಣ ವಸೂಲಿ ಮಾಡುತ್ತಿದ್ದ 17ರ ಬಾಲಕನ ಬಂಧನ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.