ಮಂಗಳೂರು: ಕಳೆದ ಎಂಟು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯೊಬ್ಬನನ್ನು ಮಂಗಳೂರು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಮುಕ್ಕಚೇರಿ ಸಮೀಪದ ಹಿಲರಿನಗರ ನಿವಾಸಿ ಮುವಾಝ್ (45) ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಆತ ಕೇರಳದ ಇರಿಕ್ಕೂರುನಲ್ಲಿ ವಾಸವಾಗಿದ್ದ.
ಮುವಾಝ್ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಆತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಆತನ ವಿರುದ್ಧ ಎಲ್‌ಪಿಸಿ ವಾರಂಟ್ ಜಾರಿ ಮಾಡಿತ್ತು.
ಇದೀಗ ಮಂಗಳೂರು ಪೂರ್ವ ಠಾಣೆ ಪೊಲೀಸರು ಮುವಾಝ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.








