Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಈದ್ ಮಿಲಾದ್ ಆಚರಣೆ ವಿವಾದ; ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಎಫ್‌ಐಆರ್
    ಕರ್ನಾಟಕ

    ಈದ್ ಮಿಲಾದ್ ಆಚರಣೆ ವಿವಾದ; ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

    adminBy adminAugust 29, 2026No Comments2 Mins Read

    ಚಿಕ್ಕಮಗಳೂರು: ನಗರದ ಖಾಸಗಿ MES ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಈದ್ ಮಿಲಾದ್ ಆಚರಣೆ ನಡೆಸದಂತೆ ಆಕ್ರೋಶ ವ್ಯಕ್ತಪಡಿಸಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತರ ವಿರುದ್ಧ ಪ್ರಿನ್ಸಿಪಾಲ್ ನೀಡಿದ್ದ ದೂರಿನ ಮೇರೆಗೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

    ಚಿಕ್ಕಮಗಳೂರಿನ ಎಂಇಎಸ್ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಆಡಳಿತ ಮಂಡಳಿ ಈದ್ ಮಿಲಾದ್ ಆಚರಣೆಗೆ ಮುಂದಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ನಿರ್ದಿಷ್ಟ ಡ್ರೆಸ್ ಕೋಡ್ ಪಾಲಿಸುವಂತೆ ಆಡಳಿತ ಮಂಡಳಿ ಮೆಸೇಜ್ ಕಳುಹಿಸಿದ್ದಾರೆ. ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಹಿಂದೂ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ನೇರವಾಗಿ ಶಾಲೆಗೆ ತೆರಳಿ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಸದ್ಯ ಶಾಲೆ ಪ್ರಿನ್ಸಿಪಾಲ್ ನೀಡಿದ ದೂರಿನನ್ವಯ ಹಿಂದೂ ಸಂಘಟನೆಯ ಮುಖಂಡರು ಮತ್ತು ಕಾರ್ಯಕರ್ತರಾದ ಕೋಟೆ ಪ್ರಸಾದ್, ಬೆಣ್ಣೆ ಕೃಷ್ಣ, ಶಿವಣ್ಣ, ದಿಲೀಪ್ ಶೆಟ್ಟಿ, ಸುನಿಲ್, ರಾಜೇಗೌಡ ಸೇರಿದಂತೆ ಹಲವರ ವಿರುದ್ಧ ಪೊಲೀಸರು ಬಿಎನ್‌ಎಸ್ (BNS) ಸೆಕ್ಷನ್ 329(4), 352 ಹಾಗೂ 190ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

    ಏನಿದೆ ಎಫ್​​ಐಆರ್​ನಲ್ಲಿ?

    ಸುಮಾರು 02 ವರ್ಷಗಳಿಂದ ಎಂಇಎಸ್ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್​​ನಲ್ಲಿ ನರ್ಸರಿಯಿಂದ 06ನೇ ತರಗತಿ ವರೆಗೆ ಕ್ಲಾಸ್​ಗಳು ನಡೆಯುತ್ತಿದ್ದು, ಅದಕ್ಕೆ ನಾನು ಪ್ರಾಂಶುಪಾಲೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ನಮ್ಮ ಶಾಲೆಯಲ್ಲಿ ಉಳಿದಂತೆ ಒಟ್ಟು 21 ಜನ ಶಿಕ್ಷಕರಿದ್ದು ಅದರಲ್ಲಿ 18 ಜನ ಮಹಿಳೆಯರಿದ್ದು, ಇಬ್ಬರು ಮಾತ್ರ ಶಿಕ್ಷಕರಿದ್ದಾರೆ. ಶಾಲೆಯ ನಿಯಮದಂತೆ ಮಕ್ಕಳಿಗೆ ಪ್ರತಿ ಶನಿವಾರ ಕಲರ್ ಡ್ರೆಸ್ ಇದ್ದು ಅದೇ ಪ್ರಕಾರ ಆಗಸ್ಟ್​​ 29ರಂದು ಮಕ್ಕಳು ಕಲರ್ ಡ್ರೆಸ್​​ನಲ್ಲಿ ಶಾಲೆಗೆ ಬರುತ್ತಿದ್ದರು.

    ಇಂದು ಬೆಳಗ್ಗೆ ಸುಮಾರು 09-15 ಗಂಟೆ ಸಮಯಕ್ಕೆ 07-08 ಜನರ ಗುಂಪು ಏಕಾಏಕಿ ಶಾಲೆಗೆ ನುಗ್ಗಿ ಈದ್ ಮಿಲಾದ್ ಹಬ್ಬದ ಆಚರಣೆ ಮಾಡುತ್ತಿದ್ದೀರಾ ಎಂದು ಜೋರು ಜೋರಾಗಿ ಕೂಗಾಡಿದರು. ನಾನು ಆ ರೀತಿ ಯಾವುದೇ ಆಚರಣೆ ಮಾಡುತ್ತಿಲ್ಲ. ಮಕ್ಕಳು ಶಾಲಾ ನಿಯಮದಂತೆ ಕಲರ್ ಡ್ರೆಸ್​ನಲ್ಲಿ ಬಂದಿದ್ದಾರೆ ಎಂದು ಹೇಳಿದರೂ ಕೇಳದೇ ಬಾಯಿಗೆ ಬಂದ ಹಾಗೆ ಬೈಯುತ್ತ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ. ತಕ್ಷಣ ನಾನು 112 ಕರೆ ಮಾಡಿ ವಿಚಾರ ತಿಳಿಸಿದೆ. ಪೊಲೀಸ್​​​ ಬಂದು ಅವರನ್ನು ಕಳುಹಿಸಿದ್ದಾರೆ. ಕೋಟೆ ಪ್ರಸಾದ್, ಬೆಣ್ಣೆ ಕೃಷ್ಣ, ಶಿವಣ್ಣ, ದಿಲೀಪ್ ಶೆಟ್ಟಿ, ಸುನಿಲ್ ಹಾಗೂ ರಾಜೇಗೌಡ ಮತ್ತು ಇತರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.




    #karnataka
    Previous Articleಪತ್ನಿಯನ್ನೇ ಕೊಂದು ಸೆಪ್ಟಿಕ್ ಟ್ಯಾಂಕ್‌ನಲ್ಲಿ ಶವ ಹೂತು ಹಾಕಿದ ಪತಿ; ಬಯಲಾಯ್ತು ಭೀಕರ ರಹಸ್ಯ
    Next Article ಪ್ರವಾಹದಲ್ಲಿ ಕೊಚ್ಚಿಬಂದ ಬ್ಯಾಂಕ್ ಲಾಕರ್; ಒಡೆದು ₹57 ಲಕ್ಷ ದೋಚಿದ 29 ಮಂದಿ ಅರೆಸ್ಟ್

    Related Posts

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026

    ATM ಕಳ್ಳತನಕ್ಕೆ ಹೊಸ ತಂತ್ರ: ಮಷಿನ್‌ ಸಮೇತ ಎಸ್ಕೇಪ್‌ ಆದ ಕಳ್ಳರು

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.