ಮನೆಯ ಬೀಗ ಮುರಿದು 1.42 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ. ಪಿಡಿಒ ದಂಪತಿಯ ಮನೆಗೆ ನುಗ್ಗಿ ನಗ, ನಾಣ್ಯವನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಶಿವಮೊಗ್ಗದ ವಿದ್ಯಾನಗರದ 4-A ಕ್ರಾಸ್ ನಲ್ಲಿ ಈ ಒಂದು ಕಳ್ಳತನ ನಡೆದಿದೆ.
ಮನೆಯ ಬೀಗ ಮುರಿದು ಮನೆಯಲ್ಲಿದ್ದ ಚಿನ್ನ, ಬೆಳ್ಳಿ ನಗದು ಹಣ ಕದ್ದು ಕಳ್ಳರು ಪರಾರಿ ಆಗಿದ್ದಾರೆ ಮನೆಯಲ್ಲಿದ್ದ 943 ಗ್ರಾಂ ಚಿನ್ನಾಭರಣ, 500 ಗ್ರಾಮ ಬೆಳ್ಳಿ 1.5 ಲಕ್ಷ ಮೌಲ್ಯದ 15 ವಾಚ್ 86,000 ನಗದು ಹಣ ಕಳ್ಳತನ ಮಾಡಿದ್ದಾರೆ. ಕಳ್ಳರು ಪರಾರಿ ಆಗುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.








