Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಂತರಾಷ್ಟ್ರೀಯ»ಓಣಂ ಆಚರಿಸಿ ಸಿನಿಮಾ ನೋಡಿ ಒಬ್ಬರಿಗೆ ಚಾಕುವಿನಿಂದ ಇರಿತ, ಮತ್ತೊಬ್ಬರಿಗೆ ಕಾರಿನಿಂದ ಡಿಕ್ಕಿ; ಇಬ್ಬರು ಮಲಯಾಳಿ ಮಹಿಳೆಯರ ಹತ್ಯೆ
    ಅಂತರಾಷ್ಟ್ರೀಯ

    ಓಣಂ ಆಚರಿಸಿ ಸಿನಿಮಾ ನೋಡಿ ಒಬ್ಬರಿಗೆ ಚಾಕುವಿನಿಂದ ಇರಿತ, ಮತ್ತೊಬ್ಬರಿಗೆ ಕಾರಿನಿಂದ ಡಿಕ್ಕಿ; ಇಬ್ಬರು ಮಲಯಾಳಿ ಮಹಿಳೆಯರ ಹತ್ಯೆ

    adminBy adminAugust 31, 2026No Comments2 Mins Read

    ಒಂದೇ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ವಾಸಿಸುತ್ತಿದ್ದ ಕೇರಳ ಮೂಲದ ಇಬ್ಬರು ಮಲಯಾಳಿ ಮಹಿಳೆಯರನ್ನು ಅವರ ಆಪ್ತ ಗೆಳತಿಯೇ ಭೀಕರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಆಗಸ್ಟ್ 28 ರಂದು ನಡೆದಿದೆ.

    ತ್ರಿಶೂರ್‌ನ ಮನ್ನುತ್ತಿ ಮುಡಿಕ್ಕೋಡ್‌ನ ಅಂಜನಾ ಹರಿ (35) ಹಾಗೂ ತಿರುವನಂತಪುರಂ ಕೇಶವದಾಸಪುರಂನ ಆನ್ ಮೇರಿ ಮ್ಯಾಥ್ಯೂ (40) ಕೊಲೆಯಾದ ದುರ್ದೈವಿಗಳು. ಕೊಲೆ ಆರೋಪದ ಮೇಲೆ ಅವರೊಟ್ಟಿಗೆ ಆಪ್ತವಾಗಿದ್ದ ಕೊಟ್ಟಾಯಂ ಮೂಲದ ಅನಿಲಾ (32) ಎಂಬಾಕೆಯನ್ನು ಮಿಲ್ಪಿಟಾಸ್ ಪೊಲೀಸರು ಬಂಧಿಸಿದ್ದಾರೆ.

    ಕ್ಯಾಲಿಫೋರ್ನಿಯಾ ಅಮೆರಿಕದ ಕ್ಯಾಲಿಫೋರ್ನಿಯಾದ ಮಿಲ್ಪಿಟಾಸ್‌ನಲ್ಲಿ  ಅಂಜನಾ, ಆನ್ ಮೇರಿ ಹಾಗೂ ಆರೋಪಿ ಅನಿಲಾ ಮೂವರೂ ಮಿಲ್ ಕ್ರೀಕ್ ಅಪಾರ್ಟ್‌ಮೆಂಟ್‌ಗಳಲ್ಲೇ ತಮ್ಮ ಕುಟುಂಬದೊಂದಿಗೆ ವಾಸವಾಗಿದ್ದರು. ಘಟನೆಗೆ ಹಿಂದಿನ ದಿನವಷ್ಟೇ ಮೂವರೂ ಒಟ್ಟಿಗೆ ಓಣಂ ಹಬ್ಬವನ್ನು ಆಚರಿಸಿ, ಸಿನಿಮಾ ನೋಡಲು ಥಿಯೇಟರ್‌ಗೆ ಹೋಗಿದ್ದರು ಎಂದು ಸಂಬಂಧಿಕರು ತಿಳಿಸಿದ್ದಾರೆ. ಆದರೆ ಕೊಲೆಗೆ ನಿಖರವಾದ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಆಗಸ್ಟ್ 28 ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಪಾರ್ಟ್‌ಮೆಂಟ್‌ನ ಪಾರ್ಕಿಂಗ್ ಪ್ರದೇಶದಲ್ಲಿ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿ ಹೊಡೆಸಿದ ಬಗ್ಗೆ ಪೊಲೀಸರಿಗೆ ಕರೆ ಬಂದಿತ್ತು. ಸ್ಥಳಕ್ಕೆ ಧಾವಿಸಿದ ಪೊಲೀಸರಿಗೆ ತೀವ್ರವಾಗಿ ಗಾಯಗೊಂಡಿದ್ದ ಅಂಜನಾ ಹರಿ ಶವವಾಗಿ ಪತ್ತೆಯಾಗಿದ್ದರು. ಪ್ರತ್ಯಕ್ಷದರ್ಶಿಗಳು ನೀಡಿದ ಸುಳಿವು ಆಧರಿಸಿ ನೀಲಿ ಬಣ್ಣದ ಎಸ್‌ಯುವಿ ಕಾರನ್ನು ಪತ್ತೆಹಚ್ಚಿದ ಪೊಲೀಸರು, ಅದರ ಚಾಲಕಿ ಅನಿಲಾಳನ್ನು ಬಂಧಿಸಿದರು.

    ಮತ್ತೊಂದೆಡೆ, ಅಂಜನಾ ಕೊಲೆಯಾದ ಸುದ್ದಿ ತಿಳಿದ ಆಕೆಯ ಪತಿ ಜಾಕೋಬ್ ಅಪಾರ್ಟ್‌ಮೆಂಟ್‌ಗೆ ಧಾವಿಸಿದಾಗ, ಮನೆ ಒಳಗೆ ಆನ್ ಮೇರಿ ಮ್ಯಾಥ್ಯೂ ಚಾಕುವಿನಿಂದ ಇರಿಯಲ್ಪಟ್ಟು ರಕ್ತದ ಮಡುವಿನಲ್ಲಿ ಸತ್ತು ಬಿದ್ದಿರುವುದು ಕಂಡುಬಂದಿದೆ. ಆನ್ ಮೇರಿಯನ್ನು ಕೊಲೆ ಮಾಡಿದ ಬಳಿಕ ಅಂಜನಾಳನ್ನು ಹೊರಗೆ ಕರೆದು ಕಾರು ಡಿಕ್ಕಿ ಹೊಡೆಸಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಅಂಜನಾ ಹರಿ (35): ಶಾಲಾ ಶಿಕ್ಷಕಿಯಾಗಿದ್ದ ಅಂಜನಾ 2021ರಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಪತಿ ವಿಜೇಶ್ ಹಾಗೂ 6 ವರ್ಷದ ಮಗಳು ವಾಮಿಕಾ ಜೊತೆ ಅಮೆರಿಕಕ್ಕೆ ತೆರಳಿದ್ದರು.

    ಆನ್ ಮೇರಿ ಮ್ಯಾಥ್ಯೂ (40): ಕಂಪ್ಯೂಟರ್ ಶಿಕ್ಷಕಿಯಾಗಿದ್ದ ಆನ್ ಮೇರಿ, ಜೂನ್‌ನಲ್ಲಷ್ಟೇ ತಂದೆಯ 70ನೇ ಹುಟ್ಟುಹಬ್ಬಕ್ಕಾಗಿ ಕೇರಳಕ್ಕೆ ಬಂದು ಮರಳಿದ್ದರು. ಇವರು 12 ಮತ್ತು 5 ವರ್ಷದ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡು ಇಬ್ಬರ ಮೃತದೇಹಗಳನ್ನು ಕೇರಳಕ್ಕೆ ತರಲು ಕನಿಷ್ಠ ಎರಡು ವಾರಗಳಿಗಿಂತ ಹೆಚ್ಚು ಸಮಯ ತಗಲಬಹುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮಿಲ್ಪಿಟಾಸ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.




    #crime International
    Previous Articleಮಂಗಳೂರು : ಕುಡಿದ ಮತ್ತಿನಲ್ಲಿ ಅಣ್ಣ-ತಮ್ಮನ ನಡುವೆ ಜಗಳ; ಚಾಕುವಿನಿಂದ ಇರಿದು ಅಣ್ಣನ ಕೊಲೆ
    Next Article ಮಂಗಳೂರು : ಅಣ್ಣನ ಕೊಲೆ ಹಿಂದಿನ ಅಸಲಿ ಕಾರಣ ಬಯಲು; ಮೊಬೈಲ್‌ಗಾಗಿ ಅಣ್ಣ-ತಮ್ಮನ ನಡುವೆ ಗಲಾಟೆ

    Related Posts

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.