Close Menu
    What's Hot

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಶವಕ್ಕೆ ಅಂತ್ಯಸಂಸ್ಕಾರ ಮಾಡಿ ತಿಂಗಳು ಕಳೆದ ಬಳಿಕ ಜೀವಂತವಾಗಿ ಬಂದ ಯುವಕ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಕುತ್ತಾರು ‘ಸೌಹಾರ್ದ ವೃತ್ತ’  ವಿವಾದಕ್ಕೆ ತೆರೆ: ಕೊರಗಜ್ಜನ ಮುಟ್ಟಾಲೆ–ದಂಟೆ ವಿಶೇಷ ಆಕರ್ಷಣೆಯೊಂದಿಗೆ ಲೋಕಾರ್ಪಣೆ
    ಕರಾವಳಿ ಸುದ್ದಿ

    ಕುತ್ತಾರು ‘ಸೌಹಾರ್ದ ವೃತ್ತ’  ವಿವಾದಕ್ಕೆ ತೆರೆ: ಕೊರಗಜ್ಜನ ಮುಟ್ಟಾಲೆ–ದಂಟೆ ವಿಶೇಷ ಆಕರ್ಷಣೆಯೊಂದಿಗೆ ಲೋಕಾರ್ಪಣೆ

    adminBy adminSeptember 2, 2026No Comments1 Min Read

    ಮಂಗಳೂರು: ಕುತ್ತಾರು ಜಂಕ್ಷನ್‌ನ ವೃತ್ತದ ನಾಮಕರಣ ವಿಚಾರವಾಗಿ ಕೆಲಕಾಲದಿಂದ ವಿವಾದಕ್ಕೆ ಕಾರಣವಾಗಿದ್ದ ವಿಷಯಕ್ಕೆ ಇದೀಗ ತೆರೆ ಬಿದ್ದಿದೆ. ಕುತ್ತಾರು ಜಂಕ್ಷನ್‌ನಲ್ಲಿ ನಿರ್ಮಿಸಲಾಗಿರುವ ನೂತನ ‘ಸೌಹಾರ್ದ ವೃತ್ತ’ವನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ಮಂಗಳವಾರ ರಾತ್ರಿ ಲೋಕಾರ್ಪಣೆ ಮಾಡಿದರು.

    ನೂತನ ವೃತ್ತದ ಮುಕುಟದಲ್ಲಿ ಕೊರಗಜ್ಜನ ಮುಟ್ಟಾಲೆ ಹಾಗೂ ದಂಟೆಯ ಪ್ರತಿಕೃತಿಯನ್ನು ಅಳವಡಿಸಲಾಗಿದ್ದು, ಕರಾವಳಿಯ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ರೀತಿಯಲ್ಲಿ ವೃತ್ತವನ್ನು ವಿನ್ಯಾಸಗೊಳಿಸಲಾಗಿದೆ.

    ವೃತ್ತದಲ್ಲಿ ಕೊರಗಜ್ಜನ ಆದಿಕ್ಷೇತ್ರ, ರಾಣಿಪುರ ಚರ್ಚ್ ಹಾಗೂ ಕುಂಡೂರು ಜುಮಾ ಮಸೀದಿಗೆ ತೆರಳುವ ಮಾರ್ಗಗಳ ಕುರಿತು ಮಾರ್ಗಸೂಚಿ ಫಲಕಗಳನ್ನು ಅಳವಡಿಸಲಾಗಿದೆ. ಈ ಮೂಲಕ ವಿವಿಧ ಧರ್ಮಗಳ ಹಾಗೂ ಸಮುದಾಯಗಳ ನಡುವೆ ಸೌಹಾರ್ದದ ಸಂದೇಶ ಸಾರುವ ಉದ್ದೇಶವನ್ನು ಹೊಂದಲಾಗಿದೆ.

    ‘ಧಾರ್ಮಿಕ ನಂಬಿಕೆಗಳು ದೌರ್ಬಲ್ಯವಲ್ಲ’

    ವೃತ್ತವನ್ನು ಉದ್ಘಾಟಿಸಿ ಮಾತನಾಡಿದ ಸಚಿವ ಯು.ಟಿ. ಖಾದರ್, ಧಾರ್ಮಿಕ ನಂಬಿಕೆಗಳು ದೌರ್ಬಲ್ಯವಲ್ಲ, ಈ ಮಣ್ಣಿನ ಶಕ್ತಿ ಎಂದು ಹೇಳಿದರು. ಎಲ್ಲ ಧರ್ಮಗಳ ಸಂದೇಶವೂ ಇನ್ನೊಬ್ಬರ ದೇಹದ ಗಾಯ ಹಾಗೂ ಮನಸ್ಸಿನ ನೋವನ್ನು ಗುಣಪಡಿಸುವ ಔಷಧಿಯಂತಿರಬೇಕು ಎಂದು ಅವರು ಅಭಿಪ್ರಾಯಪಟ್ಟರು.

    ಕುತ್ತಾರಿನಿಂದಲೇ ಇಡೀ ದೇಶಕ್ಕೆ ಸೌಹಾರ್ದದ ಸಂದೇಶ ರವಾನೆಯಾಗಬೇಕು. ಕುತ್ತಾರು ಪ್ರದೇಶವು ಮುಂದಿನ ದಿನಗಳಲ್ಲಿ ಸೌಹಾರ್ದ ಮತ್ತು ಸೋದರತೆಯ ಪ್ರದೇಶವಾಗಿ ಬೆಳೆಯಬೇಕು ಎಂದು ಖಾದರ್ ಹೇಳಿದರು.

    ಇದೇ ವೇಳೆ, ಕುತ್ತಾರು–ಅಂಬ್ಲಮೊಗರು ರಸ್ತೆ ಅಗಲೀಕರಣ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಹಾಗೂ ಇದಕ್ಕಾಗಿ ಲೋಕೋಪಯೋಗಿ ಇಲಾಖೆಯಿಂದ ₹3 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಸಚಿವರು ತಿಳಿಸಿದರು.

    ಕಾರ್ಯಕ್ರಮದಲ್ಲಿ ಕುತ್ತಾರು ಕ್ಷೇತ್ರದ ಪ್ರಮುಖರು, ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಪ್ರತಿನಿಧಿಗಳು, ಮಸೀದಿ ಹಾಗೂ ಚರ್ಚ್ ಧರ್ಮಗುರುಗಳು ಸೇರಿದಂತೆ ವಿವಿಧ ಸಮುದಾಯಗಳ ಪ್ರಮುಖರು ಉಪಸ್ಥಿತರಿದ್ದರು.




    #dakshinakannada
    Previous Articleಬೆಳ್ತಂಗಡಿ: ಭೀಕರ ರಸ್ತೆ ಅಪಘಾತ; 24ರ ಯುವಕ ಸಾವು
    Next Article ATM ಕಳ್ಳತನಕ್ಕೆ ಹೊಸ ತಂತ್ರ: ಮಷಿನ್‌ ಸಮೇತ ಎಸ್ಕೇಪ್‌ ಆದ ಕಳ್ಳರು

    Related Posts

    ಯತೀಶ್ ಪೆರುವಾಯಿ ಗಡಿಪಾರು ಪ್ರಕ್ರಿಯೆ ಕೈಬಿಡಲು ಅಧಿಕಾರಿಗಳ ಆದೇಶ

    September 2, 2026

    ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ; 24ರ ಯುವಕ ಸಾವು

    September 2, 2026

    ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ತಾಂತ್ರಿಕ ಮಾಹಿತಿ ಪಡೆದ AJIET ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು

    September 1, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಶವಕ್ಕೆ ಅಂತ್ಯಸಂಸ್ಕಾರ ಮಾಡಿ ತಿಂಗಳು ಕಳೆದ ಬಳಿಕ ಜೀವಂತವಾಗಿ ಬಂದ ಯುವಕ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026

    ಯತೀಶ್ ಪೆರುವಾಯಿ ಗಡಿಪಾರು ಪ್ರಕ್ರಿಯೆ ಕೈಬಿಡಲು ಅಧಿಕಾರಿಗಳ ಆದೇಶ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.