Close Menu
    What's Hot

    ದುನಿಯಾ ವಿಜಯ್–ನಾಗರತ್ನ ಪ್ರಕರಣಕ್ಕೆ ಅಂತ್ಯ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು

    September 3, 2026

    ಹಳೆಯಂಗಡಿ: ಪ್ರಯಾಣಿಕರಿಗಾಗಿ ಬಸ್‌ಗಳ ನಡುವೆ ತೀವ್ರ ಪೈಪೋಟಿ; ಅನಾಹುತದ ಆತಂಕ

    September 3, 2026

    ನಾಲ್ಕು ದಶಕಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಆರೋಪಿ; ಕಾರ್ಕಳ ಪೊಲೀಸರ ಯಶಸ್ವಿ ಕಾರ್ಯಾಚರಣೆ

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಕರಡು ಮತದಾರರ ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ಡಿಲೀಟ್; ‘ರಾಜಕೀಯ ಸೇಡು’ ಆರೋಪ
    ಅಪರಾಧ

    ಕರಡು ಮತದಾರರ ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ಡಿಲೀಟ್; ‘ರಾಜಕೀಯ ಸೇಡು’ ಆರೋಪ

    adminBy adminSeptember 3, 2026No Comments2 Mins Read

    ಚಂಡೀಗಢ: ಪಂಜಾಬ್‌ನ  ಕರಡು ಮತದಾರರ ಪಟ್ಟಿಯಿಂದ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ಡಿಲೀಟ್‌ ಮಾಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಘವ್ ಚಡ್ಡಾ , ಇದು ಎಎಪಿಯ ರಾಜಕೀಯ ಸೇಡು ಎಂದು ಆರೋಪಿಸಿದ್ದಾರೆ.

    ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ಸಿದ್ಧಪಡಿಸಲಾದ ಪಂಜಾಬ್ ಕರಡು ಮತದಾರರ ಪಟ್ಟಿಯಿಂದ ರಾಘವ್ ಚಡ್ಡಾ ಅವರ ಹೆಸರನ್ನು ಅಳಿಸಲಾಗಿದೆ. ಶಾಶ್ವತವಾಗಿ ಶಿಫ್ಟ್‌ ಆಗಿದ್ದಾರೆ ಎಂದು ಅವರ ಹೆಸರನ್ನು ಗುರುತಿಸಲಾಗಿದೆ. 2022 ರಲ್ಲಿ ಪಂಜಾಬ್‌ನಿಂದ ಎಎಪಿ ರಾಜ್ಯಸಭಾ ಸಂಸದರಾಗಿ ಆಯ್ಕೆಯಾಗಿದ್ದ ಅವರು ಇತ್ತೀಚೆಗೆ ಬಿಜೆಪಿಗೆ ಸೇರಿದ್ದರು. ಇದರಿಂದ ಎಎಪಿ ರಾಜಕೀಯ ಸೇಡಿಗೆ ಹೆಸರು ಡಿಲೀಟ್‌ ಮಾಡಿಸಿದೆ ಎಂದು ಆರೋಪಿಸಲಾಗಿದೆ.

    ಆಗಸ್ಟ್ 13 ರಂದು ಪ್ರಕಟವಾದ ASDD (ಅನುಪಸ್ಥಿತಿ, ಶಿಫ್ಟ್, ಡಿಸೀಸ್ಡ್ ಮತ್ತು ಡೂಪ್ಲಿಕೇಟ್) ಪಟ್ಟಿಯಲ್ಲಿ ಚಡ್ಡಾ ಅವರ ಹೆಸರು ಪ್ರಕಟವಾಗಿದೆ. ಪಂಜಾಬ್‌ನಲ್ಲಿ ಸುಮಾರು 9.7% ಜನರು, ಅಂದರೆ 20.66 ಲಕ್ಷ ಮತದಾರರ ಹೆಸರನ್ನು ಡಿಲೀಟ್‌ ಮಾಡಲಾಗಿದೆ.

    ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಚಡ್ಡಾ, ತಮ್ಮ ಮತದಾರರ ಗುರುತಿನ ಚೀಟಿಯನ್ನು ಮೊಹಾಲಿಯಲ್ಲಿ ನೋಂದಾಯಿಸಲಾಗಿದೆ. ತಮ್ಮನ್ನು ‘ಸ್ಥಳಾಂತರಿಸಲಾಗಿದೆ’ ಎಂದು ಏಕೆ ವರ್ಗೀಕರಿಸಲಾಗಿದೆ? ಇದು ಕೇವಲ ಗುಮಾಸ್ತರ ತಪ್ಪಿನಂತೆ ಕಾಣುತ್ತಿಲ್ಲ. ಇದು ರಾಜಕೀಯ ಸೇಡಿನಿಂದ ಕೂಡಿದೆ. ಪಕ್ಷವನ್ನು ತೊರೆದವರ ವಿರುದ್ಧ AAP ಸರ್ಕಾರ ಅಧಿಕಾರಿಗಳನ್ನು ಬಳಸಿ ಹೆಸರು ಡಿಲೀಟ್‌ ಮಾಡಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಚಡ್ಡಾ ಹಾಗೂ ಇತರ 6 ರಾಜ್ಯಸಭಾ ಸಂಸದರು ಏಪ್ರಿಲ್‌ನಲ್ಲಿ AAP ತೊರೆದು BJP ಸೇರಿದ್ದರು. ಈ ವೇಳೆ ಎಎಪಿ ತನ್ನ ತತ್ವಗಳು, ಮೌಲ್ಯಗಳು ಮತ್ತು ನೈತಿಕತೆಗಳಿಂದ ಸಂಪೂರ್ಣವಾಗಿ ವಿಮುಖವಾಗಿದೆ. ಇದರಿಂದ ಪಕ್ಷ ತೊರೆದಿದ್ದಾಗಿ ಹೇಳಿದ್ದರು.

    ನಾನು ಭ್ರಷ್ಟ ಆಮ್ ಆದ್ಮಿ ಪಕ್ಷವನ್ನು ತೊರೆದಾಗಿನಿಂದ, ಅದರ ನಾಯಕರು ಕೋಪದಿಂದ ಕುದಿಯುತ್ತಿದ್ದಾರೆ. ನಮ್ಮ ವಿರುದ್ಧ ಅದು ಪಂಜಾಬ್ ಪೊಲೀಸ್ ಮತ್ತು ಪಂಜಾಬ್ ಸರ್ಕಾರದ ಆಡಳಿತ ಯಂತ್ರದ ಬಲಪ್ರಯೋಗ ನಡೆಯುತ್ತಿದೆ. ಎಎಪಿ ತೊರೆದು ಬಿಜೆಪಿಗೆ ಸೇರಿದ ಇತರ ಸಂಸದರನ್ನು ಸಹ ಪಂಜಾಬ್ ಸರ್ಕಾರ ಗುರಿಯಾಗಿಸಿಕೊಂಡಿದೆ. ಈಗ ಅದು ಮತದಾರರ ಪಟ್ಟಿಯಲ್ಲಿ ಹೆಸರು ಅಳಿಸುವ ಮೂಲಕ ಸೇಡು ತೀರಿಸಿಕೊಂಡಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.




    #crime #nation
    Previous Article8 ತಿಂಗಳ ಮಗುವಿನ ಡೈಪರ್‌ನಲ್ಲಿ ₹50 ಲಕ್ಷದ ಚಿನ್ನ; ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ಕಳ್ಳಸಾಗಣೆ ಯತ್ನ ಬಯಲು
    Next Article ಕನಸಿನಲ್ಲಿ ಬಂದ ಸ್ವಾಮೀಜಿ, ಮರು ಅಂತ್ಯಕ್ರಿಯೆಗೆ ಸೂಚನೆ; 8 ತಿಂಗಳ ಬಳಿಕ ದೇಹ ನೋಡಿ ಭಕ್ತರಿಗೆ ಅಚ್ಚರಿ

    Related Posts

    ನಾಲ್ಕು ದಶಕಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಆರೋಪಿ; ಕಾರ್ಕಳ ಪೊಲೀಸರ ಯಶಸ್ವಿ ಕಾರ್ಯಾಚರಣೆ

    September 3, 2026

    8 ತಿಂಗಳ ಮಗುವಿನ ಡೈಪರ್‌ನಲ್ಲಿ ₹50 ಲಕ್ಷದ ಚಿನ್ನ; ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ಕಳ್ಳಸಾಗಣೆ ಯತ್ನ ಬಯಲು

    September 3, 2026

    ‌ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ; ಪೋಷಕರಿಂದ ಕೊಲೆ ಆರೋಪ

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದುನಿಯಾ ವಿಜಯ್–ನಾಗರತ್ನ ಪ್ರಕರಣಕ್ಕೆ ಅಂತ್ಯ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು

    September 3, 2026

    ಹಳೆಯಂಗಡಿ: ಪ್ರಯಾಣಿಕರಿಗಾಗಿ ಬಸ್‌ಗಳ ನಡುವೆ ತೀವ್ರ ಪೈಪೋಟಿ; ಅನಾಹುತದ ಆತಂಕ

    September 3, 2026

    ನಾಲ್ಕು ದಶಕಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಆರೋಪಿ; ಕಾರ್ಕಳ ಪೊಲೀಸರ ಯಶಸ್ವಿ ಕಾರ್ಯಾಚರಣೆ

    September 3, 2026

    ಕನಸಿನಲ್ಲಿ ಬಂದ ಸ್ವಾಮೀಜಿ, ಮರು ಅಂತ್ಯಕ್ರಿಯೆಗೆ ಸೂಚನೆ; 8 ತಿಂಗಳ ಬಳಿಕ ದೇಹ ನೋಡಿ ಭಕ್ತರಿಗೆ ಅಚ್ಚರಿ

    September 3, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ದುನಿಯಾ ವಿಜಯ್–ನಾಗರತ್ನ ಪ್ರಕರಣಕ್ಕೆ ಅಂತ್ಯ; ಹೈಕೋರ್ಟ್‌ನಿಂದ ಮಹತ್ವದ ತೀರ್ಪು

    September 3, 2026

    ಕನಸಿನಲ್ಲಿ ಬಂದ ಸ್ವಾಮೀಜಿ, ಮರು ಅಂತ್ಯಕ್ರಿಯೆಗೆ ಸೂಚನೆ; 8 ತಿಂಗಳ ಬಳಿಕ ದೇಹ ನೋಡಿ ಭಕ್ತರಿಗೆ ಅಚ್ಚರಿ

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.