Close Menu
    What's Hot

    ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು; ಕೇರಳದ ಆರೋಪಿಯ ಬಂಧನ

    September 4, 2026

    ಸುಮಂತ್ ನಿಗೂಢ ಸಾವು ಪ್ರಕರಣ: ಸಹೋದರ, ಇಬ್ಬರು ಚಿಕ್ಕಪ್ಪನ ಬ್ರೈನ್ ಮ್ಯಾಪಿಂಗ್

    September 4, 2026

    ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳ್ಳತನ: ಉಪ್ಪಿನಂಗಡಿಯಲ್ಲಿ ಇಬ್ಬರ ಬಂಧನ

    September 4, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಮಂಗಳೂರು ಮೊಸರುಕುಡಿಕೆ ಹಿನ್ನೆಲೆ: ಸೆ.5ರಂದು ಹಲವೆಡೆ ಸಂಚಾರ ಬದಲಾವಣೆ, ಪರ್ಯಾಯ ಮಾರ್ಗಗಳ ವಿವರ
    ಕರಾವಳಿ ಸುದ್ದಿ

    ಮಂಗಳೂರು ಮೊಸರುಕುಡಿಕೆ ಹಿನ್ನೆಲೆ: ಸೆ.5ರಂದು ಹಲವೆಡೆ ಸಂಚಾರ ಬದಲಾವಣೆ, ಪರ್ಯಾಯ ಮಾರ್ಗಗಳ ವಿವರ

    adminBy adminSeptember 4, 2026Updated:September 4, 2026No Comments2 Mins Read

    ಮಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆಪ್ಟೆಂಬರ್ 5ರಂದು ಮಂಗಳೂರು ನಗರದ ವಿವಿಧೆಡೆ ಮೊಸರುಕುಡಿಕೆ ಕಾರ್ಯಕ್ರಮಗಳು ಹಾಗೂ ಮೆರವಣಿಗೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಸಂಜೆ 5 ಗಂಟೆಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ದಟ್ಟಣೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಸಾಧ್ಯವಾದಷ್ಟು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಮಂಗಳೂರು ನಗರ ಪೊಲೀಸ್ ಇಲಾಖೆ ಸೂಚಿಸಿದೆ.

    ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಹಾಗೂ ಮೆರವಣಿಗೆ ಸಾಗುವ ರಸ್ತೆಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡದಂತೆ ಪೊಲೀಸರು ಮನವಿ ಮಾಡಿದ್ದಾರೆ. ಸಂಚಾರ ನಿಯಂತ್ರಣದ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಯೊಂದಿಗೆ ಸಾರ್ವಜನಿಕರು ಸಹಕರಿಸುವಂತೆ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

    ಸಂಚಾರ ದಟ್ಟಣೆಯಾಗುವ ಸಾಧ್ಯತೆ ಇರುವ ಪ್ರಮುಖ ಸ್ಥಳಗಳು

    1. ತೊಕ್ಕೊಟ್ಟು ಒಳಪೇಟೆ:
    ತೊಕ್ಕೊಟ್ಟು ಜಂಕ್ಷನ್‌ನಿಂದ ಕೊಲ್ಯ ಜಂಕ್ಷನ್‌ವರೆಗೆ ಹಾಗೂ ಉಳ್ಳಾಲ ಅಬ್ಬಕ್ಕ ವೃತ್ತ ಮತ್ತು ಒಳಪೇಟೆ ಕಡೆಗೆ ಸಂಚಾರ ದಟ್ಟಣೆಯಾಗುವ ಸಾಧ್ಯತೆ ಇದೆ.

    ಪರ್ಯಾಯ ಮಾರ್ಗ: ತಲಪಾಡಿ ಕಡೆಗೆ ತೆರಳುವ ವಾಹನಗಳು ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಸರ್ವಿಸ್ ರಸ್ತೆಗೆ ಎಡಕ್ಕೆ ತಿರುಗಿ, ದೇರಳಕಟ್ಟೆ ಜಂಕ್ಷನ್‌ನಲ್ಲಿ ಬಲಕ್ಕೆ ತಿರುಗಿ ಮಡ್ಯಾರ್–ಮಾಡೂರು–ಬೀರಿಕೋಟೆಕಾರ್ ಜಂಕ್ಷನ್ ಮೂಲಕ ಸಂಚರಿಸಬಹುದು. ಉಳ್ಳಾಲ ಅಬ್ಬಕ್ಕ ವೃತ್ತ ಹಾಗೂ ತೊಕ್ಕೊಟ್ಟು ಒಳಪೇಟೆ ಕಡೆಗೆ ತೆರಳುವ ವಾಹನಗಳು ಬೀರಿಕೋಟೆಕಾರ್–ಸೋಮೇಶ್ವರ ಮಾರ್ಗ ಬಳಸಬಹುದು.

    2. ಕದ್ರಿ ಕಂಬಳ:
    ಬಟ್ಟಗುಡ್ಡೆ ಜಂಕ್ಷನ್‌ನಿಂದ ಕದ್ರಿ ಕಂಬಳ–ಭಾರತ್ ಬೀಡಿ ಪ್ರದೇಶದವರೆಗೆ ಸಂಚಾರ ದಟ್ಟಣೆಯಾಗುವ ಸಾಧ್ಯತೆ ಇದೆ.

    ಪರ್ಯಾಯ ಮಾರ್ಗ: ಬಟ್ಟಗುಡ್ಡೆ ಕಡೆಯಿಂದ ಕದ್ರಿ ಕಂಬಳ ಕಡೆಗೆ ತೆರಳುವವರು ಬಿಜೈ ಜಂಕ್ಷನ್–ಪಿಂಟೋ ಬೇಕರಿ–ಕರಂಗಲಪಾಡಿ ಮಾರ್ಗ ಬಳಸಬಹುದು. ಭಾರತ್ ಬೀಡಿ ಕಡೆಯಿಂದ ಬಟ್ಟಗುಡ್ಡೆ ಕಡೆಗೆ ತೆರಳುವ ವಾಹನಗಳು ಮಲ್ಲಿಕಟ್ಟೆ–ನಂತೂರು ಮಾರ್ಗದಲ್ಲಿ ಸಂಚರಿಸಬಹುದು.

    3. ಅತ್ತಾವರ:
    ಕೋಟಿಚೆನ್ನಯ ವೃತ್ತದಿಂದ ಬಾಬುಗುಡ್ಡೆ–ಅತ್ತಾವರ ಕೆಎಂಸಿ ರಸ್ತೆ–ಆನಂದ ಶೆಟ್ಟಿ ವೃತ್ತದವರೆಗೆ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

    ಪರ್ಯಾಯ ಮಾರ್ಗ: ಕೋಟಿಚೆನ್ನಯ ವೃತ್ತದಿಂದ ಅತ್ತಾವರ ಕಡೆಗೆ ತೆರಳುವ ವಾಹನಗಳು ವೆಲೆನ್ಸಿಯಾ ಮಾರ್ಗ ಬಳಸಬಹುದು. ಅತ್ತಾವರದಿಂದ ಕೋಟಿಚೆನ್ನಯ ವೃತ್ತದ ಕಡೆಗೆ ತೆರಳುವ ವಾಹನಗಳು ಆನಂದ ಶೆಟ್ಟಿ ವೃತ್ತದಲ್ಲಿ ಎಡಕ್ಕೆ ತಿರುಗಿ ಎಸ್.ಎಲ್. ಮಥಾಯಸ್ ರಸ್ತೆ–ಹೈಲ್ಯಾಂಡ್ ಜಂಕ್ಷನ್ ಮೂಲಕ ಸಂಚರಿಸಬಹುದು.

    4. ಕೊಟ್ಟಾರ:
    ಕೊಟ್ಟಾರ ಚೌಕಿಯಿಂದ ಉರ್ವಸ್ಟೋರ್ ಜಂಕ್ಷನ್‌ವರೆಗೆ ಸಂಚಾರ ದಟ್ಟಣೆಯಾಗುವ ಸಾಧ್ಯತೆ ಇದೆ.

    ಪರ್ಯಾಯ ಮಾರ್ಗ: ಲಾಲ್‌ಬಾಗ್/ನಾರಾಯಣಗುರು ವೃತ್ತದಿಂದ ಕೊಟ್ಟಾರ ಚೌಕಿ ಕಡೆಗೆ ತೆರಳುವ ವಾಹನಗಳು ಕೆಎಸ್‌ಆರ್‌ಟಿಸಿ–ಕುಂಟಿಕಾನ ಮಾರ್ಗ ಬಳಸಬಹುದು. ಕೊಟ್ಟಾರ ಚೌಕಿಯಿಂದ ಲಾಲ್‌ಬಾಗ್ ಕಡೆಗೆ ತೆರಳುವ ಲಘು ವಾಹನಗಳು ಕುಂಟಿಕಾನ–ಬಿಜೈ–ಕೆಎಸ್‌ಆರ್‌ಟಿಸಿ ಮಾರ್ಗ ಬಳಸಬಹುದು. ಘನ ವಾಹನಗಳು ಕುಂಟಿಕಾನ–ಕೆಪಿಟಿ ವೃತ್ತ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ.

    ವಾಹನ ಸವಾರರಿಗೆ ಪೊಲೀಸರ ಮನವಿ

    ಮೊಸರುಕುಡಿಕೆ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ತಾತ್ಕಾಲಿಕವಾಗಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ವಾಹನ ಸವಾರರು ಸಾಧ್ಯವಾದಷ್ಟು ಪರ್ಯಾಯ ಮಾರ್ಗಗಳನ್ನು ಬಳಸಬೇಕು. ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಹಾಗೂ ಮೆರವಣಿಗೆ ಸಾಗುವ ರಸ್ತೆಗಳ ಇಕ್ಕೆಲಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡಬಾರದು ಎಂದು ಮಂಗಳೂರು ನಗರ ಪೊಲೀಸ್ ಇಲಾಖೆ ತಿಳಿಸಿದೆ.

    ಸಾರ್ವಜನಿಕರು ಸಂಚಾರ ನಿಯಂತ್ರಣಕ್ಕೆ ಸಹಕರಿಸುವಂತೆ ಪೊಲೀಸ್ ಆಯುಕ್ತರು ಮನವಿ ಮಾಡಿದ್ದಾರೆ.




    #dakshinakannada
    Previous Articleಪೆಟ್ರೋಲ್-ಡೀಸೆಲ್ ವಾಹನಗಳಿಗೆ ಭವಿಷ್ಯದಲ್ಲಿ ಬ್ರೇಕ್ ಬೀಳತ್ತಾ?-ಆಟೋ ಕಂಪನಿಗಳಿಗೆ ಸೂಚನೆ ಕೊಟ್ಟ ಪ್ರಧಾನಮಂತ್ರಿ ಸಲಹೆಗಾರ..!
    Next Article ಬೆಳ್ತಂಗಡಿಯಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಗಂಭೀರ, ಬಳಿಕ ಸಾವು

    Related Posts

    ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು; ಕೇರಳದ ಆರೋಪಿಯ ಬಂಧನ

    September 4, 2026

    ಸುಮಂತ್ ನಿಗೂಢ ಸಾವು ಪ್ರಕರಣ: ಸಹೋದರ, ಇಬ್ಬರು ಚಿಕ್ಕಪ್ಪನ ಬ್ರೈನ್ ಮ್ಯಾಪಿಂಗ್

    September 4, 2026

    ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳ್ಳತನ: ಉಪ್ಪಿನಂಗಡಿಯಲ್ಲಿ ಇಬ್ಬರ ಬಂಧನ

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು; ಕೇರಳದ ಆರೋಪಿಯ ಬಂಧನ

    September 4, 2026

    ಸುಮಂತ್ ನಿಗೂಢ ಸಾವು ಪ್ರಕರಣ: ಸಹೋದರ, ಇಬ್ಬರು ಚಿಕ್ಕಪ್ಪನ ಬ್ರೈನ್ ಮ್ಯಾಪಿಂಗ್

    September 4, 2026

    ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳ್ಳತನ: ಉಪ್ಪಿನಂಗಡಿಯಲ್ಲಿ ಇಬ್ಬರ ಬಂಧನ

    September 4, 2026

    9 ದಿನ ‘ಹರೇ ಕೃಷ್ಣ’ ಜಪ, ಜನ್ಮಾಷ್ಟಮಿಯಂದೇ ರಕ್ಷಣೆ: ಸಾವಿನ ದವಡೆಯಿಂದ ಪಾರಾದ ಕಾರ್ಮಿಕ

    September 4, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಾಸನ ಜೈಲಲ್ಲಿ ವಿಚಾರಣಾಧೀನ ಕೈದಿಗಳ ಭೀಕರ ಮಾರಾಮಾರಿ: ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ

    September 4, 2026

    ಬಡ್ಡಿ ಹಣ ಕೊಡದ ಮಹಿಳೆಯ ಕಿಡ್ನಾಪ್: ನಗ್ನಗೊಳಿಸಿ ಹಲ್ಲೆ, ವಿಡಿಯೋ ವೈರಲ್ ಮಾಡುವ ಬೆದರಿಕೆ-ಆರೋಪಿಗಳ ಬಂಧನ

    September 4, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.