Close Menu
    What's Hot

    ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ: ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026

    ಮೂವರು ಮಕ್ಕಳೊಂದಿಗೆ 100 ಅಡಿ ಕಂದಕಕ್ಕೆ ಜಿಗಿದ ಮಹಿಳಾ ಕುಸ್ತಿಪಟು: ತಾಯಿ ಸೇರಿ ಇಬ್ಬರು ಮಕ್ಕಳ ಸಾವು

    September 5, 2026

    ರಸ್ತೆ ಕಾಮಗಾರಿ ನಡುವೆ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: 8 ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು

    September 5, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ರಾಷ್ಟ್ರೀಯ»ರಸ್ತೆ ಕಾಮಗಾರಿ ನಡುವೆ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: 8 ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು
    ರಾಷ್ಟ್ರೀಯ

    ರಸ್ತೆ ಕಾಮಗಾರಿ ನಡುವೆ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: 8 ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು

    adminBy adminSeptember 5, 2026No Comments1 Min Read

    ತಿರುವನಂತಪುರಂ: ಕೇರಳದ ತ್ರಿಶ್ಯೂರು ಜಿಲ್ಲೆಯಲ್ಲಿ ನಿಲ್ಲಿಸಿದ್ದ ಗೂಡ್ಸ್ ಲಾರಿಯ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

    ಮೃತರ ಪೈಕಿ ಐವರನ್ನು ತಮಿಳುನಾಡಿನ ಸೇಲಂ ಮೂಲದ ವಿಶ್ವ (20), ದಿಂಡಿಗಲ್ ಮೂಲದ ಸೂರ್ಯ (20), ಯುವಸಂಜಿತ್ (20) ಹಾಗೂ ಮಧುರೈ ಮೂಲದ ಸಂತೋಷ್ (20) ಮತ್ತು ಪ್ರಸನ್ನ ಎಂದು ಗುರುತಿಸಲಾಗಿದೆ. ಉಳಿದ ಮೂವರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಮೃತರೆಲ್ಲರೂ ತಮಿಳುನಾಡಿನ ದಿಂಡಿಗಲ್‌ನಲ್ಲಿರುವ ಪಿ.ಎಸ್.ಎಂ. ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

    ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಕೈಪಮಂಗಲಂ ಸಮೀಪದ ಪನಂಬಿಕ್ಕುನ್ನು ಸೆಂಟರ್‌ನ ರಸ್ತೆ ತಿರುವಿನಲ್ಲಿ ಲಾರಿಯನ್ನು ನಿಲ್ಲಿಸಲಾಗಿತ್ತು. ಮಧ್ಯರಾತ್ರಿ ಸುಮಾರಿಗೆ ಬಂದ ತಮಿಳುನಾಡು ನೋಂದಣಿಯ ಕಾರು (TN 59 DW 8299) ನಿಯಂತ್ರಣ ತಪ್ಪಿ ಲಾರಿಯ ಹಿಂಭಾಗಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ.

    ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಒಳಗೆ ಸಿಲುಕಿಕೊಂಡಿದ್ದರು. ರಕ್ಷಣಾ ಸಿಬ್ಬಂದಿ ಕಾರಿನ ಬಿಡಿಭಾಗಗಳನ್ನು ಕತ್ತರಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕಾರಿನಲ್ಲಿದ್ದ ಎಂಟೂ ಮಂದಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

    ಘಟನಾ ಸ್ಥಳಕ್ಕೆ ಕೈಪಮಂಗಲಂ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.




    #nation
    Previous Articleಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು; ಕೇರಳದ ಆರೋಪಿಯ ಬಂಧನ
    Next Article ಮೂವರು ಮಕ್ಕಳೊಂದಿಗೆ 100 ಅಡಿ ಕಂದಕಕ್ಕೆ ಜಿಗಿದ ಮಹಿಳಾ ಕುಸ್ತಿಪಟು: ತಾಯಿ ಸೇರಿ ಇಬ್ಬರು ಮಕ್ಕಳ ಸಾವು

    Related Posts

    ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ: ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026

    ಮೂವರು ಮಕ್ಕಳೊಂದಿಗೆ 100 ಅಡಿ ಕಂದಕಕ್ಕೆ ಜಿಗಿದ ಮಹಿಳಾ ಕುಸ್ತಿಪಟು: ತಾಯಿ ಸೇರಿ ಇಬ್ಬರು ಮಕ್ಕಳ ಸಾವು

    September 5, 2026

    9 ದಿನ ‘ಹರೇ ಕೃಷ್ಣ’ ಜಪ, ಜನ್ಮಾಷ್ಟಮಿಯಂದೇ ರಕ್ಷಣೆ: ಸಾವಿನ ದವಡೆಯಿಂದ ಪಾರಾದ ಕಾರ್ಮಿಕ

    September 4, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ: ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026

    ಮೂವರು ಮಕ್ಕಳೊಂದಿಗೆ 100 ಅಡಿ ಕಂದಕಕ್ಕೆ ಜಿಗಿದ ಮಹಿಳಾ ಕುಸ್ತಿಪಟು: ತಾಯಿ ಸೇರಿ ಇಬ್ಬರು ಮಕ್ಕಳ ಸಾವು

    September 5, 2026

    ರಸ್ತೆ ಕಾಮಗಾರಿ ನಡುವೆ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: 8 ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು

    September 5, 2026

    ಪುತ್ತೂರು: ದೇವಸ್ಥಾನದ ಕಾಣಿಕೆ ಡಬ್ಬಿ ಕಳವು; ಕೇರಳದ ಆರೋಪಿಯ ಬಂಧನ

    September 4, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಹಾಸನ ಜೈಲಲ್ಲಿ ವಿಚಾರಣಾಧೀನ ಕೈದಿಗಳ ಭೀಕರ ಮಾರಾಮಾರಿ: ಜಗಳ ಬಿಡಿಸಲು ಹೋದ ಸಿಬ್ಬಂದಿಗೂ ಹಲ್ಲೆ

    September 4, 2026

    ಬಡ್ಡಿ ಹಣ ಕೊಡದ ಮಹಿಳೆಯ ಕಿಡ್ನಾಪ್: ನಗ್ನಗೊಳಿಸಿ ಹಲ್ಲೆ, ವಿಡಿಯೋ ವೈರಲ್ ಮಾಡುವ ಬೆದರಿಕೆ-ಆರೋಪಿಗಳ ಬಂಧನ

    September 4, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.