ಮೂರು ತಿಂಗಳ ಹೆಣ್ಣು ಮಗುವಿನ ಮೇಲೆ 35 ವರ್ಷದ ನೆರೆಮನೆಯ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜೆತೇಂದ್ರ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು, ಮಗು ಮನೆಯೊಳಗಿನ ಮಂಚದ ಮೇಲೆ ಮಲಗಿತ್ತು. ತಾಯಿ ರಾತ್ರಿ ಊಟ ತಯಾರಿಸುತ್ತಿದ್ದರೆ, ತಂದೆ ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಕುಟುಂಬಕ್ಕೆ ಪರಿಚಿತನಾಗಿದ್ದ ನೆರೆಮನೆಯ ಜೆತೇಂದ್ರ ಮನೆಗೆ ಬಂದು ಮಗುವಿನೊಂದಿಗೆ ಆಟವಾಡಿದ್ದಾನೆ. ಬಳಿಕ ಮಗುವನ್ನು ಹೊರಗೆ ಕರೆದೊಯ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುಮಾರು ಅರ್ಧ ಗಂಟೆಯ ಬಳಿಕ ಆರೋಪಿ ಮಗುವನ್ನು ಮನೆಗೆ ವಾಪಸ್ ಕರೆತಂದು ಮಂಚದ ಮೇಲೆ ಮಲಗಿಸಿ ಅಲ್ಲಿಂದ ತೆರಳಿದ್ದಾನೆ. ಬಳಿಕ ಮಗು ನಿರಂತರವಾಗಿ ಅಳುತ್ತಿರುವುದನ್ನು ಗಮನಿಸಿದ ತಾಯಿ, ಮಗುವನ್ನು ಸಮಾಧಾನಪಡಿಸಲು ಮುಂದಾದಾಗ ಆಕೆಯ ಖಾಸಗಿ ಅಂಗದಿಂದ ತೀವ್ರ ರಕ್ತಸ್ರಾವವಾಗುತ್ತಿರುವುದು ಕಂಡುಬಂದಿದೆ. ಕೂಡಲೇ ಕುಟುಂಬಸ್ಥರು ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯ ಗ್ರಾಮವೊಂದರ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದ ಬಳಿಕ, ಮಗುವಿನ ಸ್ಥಿತಿ ಗಂಭೀರವಾಗಿದ್ದರಿಂದ ಸೈಫಾಯಿ ಮೆಡಿಕಲ್ ಕಾಲೇಜಿಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಸದ್ಯ ಮಗು ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಗುವಿನ ತಂದೆ ನೀಡಿದ ದೂರಿನ ಆಧಾರದ ಮೇಲೆ ಜೆತೇಂದ್ರ ವಿರುದ್ಧ ಸಂಬಂಧಿತ ಕಾನೂನುಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಬುಧವಾರ ಆತನನ್ನು ಪೊಲೀಸರು ಬಂಧಿಸಿದ್ದಾರೆ








