Close Menu
    What's Hot

    ಪುತ್ತೂರು:ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿ ವಿರುದ್ಧ ಗಂಭೀರ ಆರೋಪ: ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆಗೆ ಒತ್ತಾಯ

    September 7, 2026

    ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿ, ಕುಟುಂಬದ ನಾಲ್ವರು ಸಾವು

    September 7, 2026

    ಮದುವೆಯ ಭರವಸೆ ನೀಡಿ ದೈಹಿಕ ಸಂಪರ್ಕ ಆರೋಪ: ಮಹಿಳೆ ಮೇಲೆ ಹಲ್ಲೆ, ಬೆಳ್ತಂಗಡಿ ಮೂಲದ ಯುವ ವಕೀಲನ ವಿರುದ್ಧ ಪ್ರಕರಣ ದಾಖಲು

    September 7, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಂತರಾಷ್ಟ್ರೀಯ»ರನ್‌ವೇಯಿಂದ ಜಾರಿ ವಾಹನಗಳಿಗೆ ಡಿಕ್ಕಿ: ಅಮೆಜಾನ್ ಕಾರ್ಗೋ ವಿಮಾನದಲ್ಲಿ ಬೆಂಕಿ, 5 ಸಾವು
    ಅಂತರಾಷ್ಟ್ರೀಯ

    ರನ್‌ವೇಯಿಂದ ಜಾರಿ ವಾಹನಗಳಿಗೆ ಡಿಕ್ಕಿ: ಅಮೆಜಾನ್ ಕಾರ್ಗೋ ವಿಮಾನದಲ್ಲಿ ಬೆಂಕಿ, 5 ಸಾವು

    adminBy adminSeptember 7, 2026No Comments2 Mins Read

    ವಾಷಿಂಗ್ಟನ್: ಅಮೆರಿಕದ ಮಿಯಾಮಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆಜಾನ್ ಸಂಸ್ಥೆಯ ಸರಕು ಸಾಗಣೆ (Cargo) ವಿಮಾನವೊಂದು ಲ್ಯಾಂಡಿಂಗ್ ವೇಳೆ ರನ್‌ವೇಯಿಂದ ಜಾರಿ, ಪಕ್ಕದಲ್ಲಿದ್ದ ವಾಹನಗಳಿಗೆ ಭೀಕರವಾಗಿ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 5 ಜನರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೋರ್ಟೊ ರಿಕೊದ ಸ್ಯಾನ್ ಜುವಾನ್‌ನಿಂದ ಮಿಯಾಮಿಗೆ ಆಗಮಿಸುತ್ತಿದ್ದ ‘ಪ್ರೈಮ್ ಏರ್ ಫ್ಲೈಟ್ 7598’ (ಬೋಯಿಂಗ್ 767) ವಿಮಾನವು ಮಧ್ಯಾಹ್ನ ಸುಮಾರು 2 ಗಂಟೆಯ ವೇಳೆಗೆ ಲ್ಯಾಂಡಿಂಗ್ ಆಗುವಾಗ ಈ ಭೀಕರ ದುರಂತ ಸಂಭವಿಸಿದೆ.

    ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೊಗಳಲ್ಲಿ, ನೀಲಿ ಮತ್ತು ಬಿಳಿ ಬಣ್ಣದ ಬೋಯಿಂಗ್ 767 ವಿಮಾನವು ರನ್‌ವೇಯಿಂದ ಜಾರಿ ಪಕ್ಕದ ರಸ್ತೆಯಲ್ಲಿದ್ದ ವಾಹನಗಳಿಗೆ ಉರುಳುತ್ತಾ ಡಿಕ್ಕಿ ಹೊಡೆದಿರುವುದು ಕಂಡುಬಂದಿದೆ. ಡಿಕ್ಕಿಯ ರಭಸಕ್ಕೆ ವಿಮಾನ ಹಾಗೂ ವಾಹನಗಳಲ್ಲಿ ಬೆಂಕಿ ಹೊತ್ತಿಕೊಂಡು ದಟ್ಟವಾದ ಹೊಗೆ ಆವರಿಸಿದೆ. ರನ್‌ವೇಯ ತುದಿಯಲ್ಲಿದ್ದ ಇಂಜಿನಿಯರ್ಡ್ ಮೆಟೀರಿಯಲ್ಸ್ ಅರೆಸ್ಟಿಂಗ್ ಸಿಸ್ಟಮ್ (EMAS) ತಂತ್ರಜ್ಞಾನದಿಂದಾಗಿ ದೊಡ್ಡ ಮಟ್ಟದ ಅಪಾಯ ತಪ್ಪಿದೆ ಎನ್ನಲಾಗಿದೆ.

    ಅಪಘಾತದಲ್ಲಿ ಕಾಕ್‌ಪಿಟ್‌ನಲ್ಲಿ ಪೈಲಟ್ ಹಾಗೂ ಸಹ-ಪೈಲಟ್ ಸಿಲುಕಿಕೊಂಡಿದ್ದು, ರಸ್ತೆಯಲ್ಲಿದ್ದ ಕಾರುಗಳಲ್ಲಿದ್ದ ಪ್ರಯಾಣಿಕರು ವಾಹನಗಳ ಅಡಿಯಲ್ಲಿ ಸಿಲುಕಿದ್ದರು. ಮಿಯಾಮಿ-ಡೇಡ್ ಕೌಂಟಿ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸಿಲುಕಿಕೊಂಡವರನ್ನು ಹೊರತೆಗೆದಿದ್ದಾರೆ. ಮೃತಪಟ್ಟವರು ವಾಹನದಲ್ಲಿದ್ದವರೇ ಅಥವಾ ಪೈಲಟ್‌ಗಳೇ ಎಂಬುದು ಇನ್ನಷ್ಟೇ ಸ್ಪಷ್ಟವಾಗಬೇಕಿದೆ. ಗಾಯಗೊಂಡ ಐವರ ಪೈಕಿ ಮೂವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

    ದುರಂತದ ಮಾಹಿತಿ ತಿಳಿಯುತ್ತಿದ್ದಂತೆ ಮಿಯಾಮಿ-ಡೇಡ್ ಅಗ್ನಿಶಾಮಕ ರಕ್ಷಣಾ ಘಟಕದ 60 ವಾಹನಗಳು ಹಾಗೂ 200ಕ್ಕೂ ಹೆಚ್ಚು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿ, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಯಿಂದಾಗಿ ವಿಮಾನ ನಿಲ್ದಾಣದ ಎಲ್ಲಾ ರನ್‌ವೇಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದ್ದು, ವಿಮಾನಗಳ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಅಪಘಾತದ ನಿಖರ ಕಾರಣ ತಿಳಿಯಲು ಫೆಡರಲ್ ವಿಮಾನಯಾನ ಆಡಳಿತ (FAA) ಮತ್ತು ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ (NTSB) ತನಿಖೆ ಕೈಗೊಂಡಿವೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಅಮೆಜಾನ್ ವಕ್ತಾರ ಕೆಲ್ಲಿ ನಾಂಟೆಲ್, ಸ್ಥಳೀಯ ಅಧಿಕಾರಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದು, ಹೆಚ್ಚಿನ ವಿವರಗಳನ್ನು ಕಲೆಹಾಕಲಾಗುತ್ತಿದೆ ಎಂದು ತಿಳಿಸಿದ್ದಾರೆ.

    ಕಳೆದ ವರ್ಷವೂ ಲೂಯಿಸ್‌ವಿಲ್ಲೆ ವಿಮಾನ ನಿಲ್ದಾಣದಲ್ಲಿ ಯುಪಿಎಸ್ ಸರಕು ವಿಮಾನ ಅಪಘಾತಕ್ಕೀಡಾಗಿ 15 ಜನರು ಮೃತಪಟ್ಟಿದ್ದ ಘಟನೆ ನೆನಪಿಸಿಕೊಳ್ಳಬಹುದು.




    International
    Previous Articleಮಲ್ಪೆ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ; ಎಸೆದು ಹೋದವರಿಗಾಗಿ ಪೊಲೀಸರ ಶೋಧ
    Next Article ನ್ಯಾಯಾಲಯಕ್ಕೆ ಹಾಜರಾಗದೆ 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    Related Posts

    ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತೀರ್ಪು ನೀಡಲು ಜ್ಯೂರಿ ವಿಫಲ

    September 5, 2026

    ‘ಆಪರೇಷನ್ ಅಶ್‌ದಾರ್’ ಯಶಸ್ಸು: ಲಷ್ಕರ್ ಉಗ್ರ ಕಮಾಂಡರ್ ಯಾಸಿರ್ ಹತ್ಯೆ

    September 5, 2026

    ಪಟಾಕಿ ಸಂಗ್ರಹಿಸಿದ್ದ ಸೇನಾ ನೆಲೆಯಲ್ಲಿ ಸ್ಫೋಟ: ಸಾವಿನ ಸಂಖ್ಯೆ 15ಕ್ಕೆ ಏರಿಕೆ

    September 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಪುತ್ತೂರು:ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿ ವಿರುದ್ಧ ಗಂಭೀರ ಆರೋಪ: ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆಗೆ ಒತ್ತಾಯ

    September 7, 2026

    ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿ, ಕುಟುಂಬದ ನಾಲ್ವರು ಸಾವು

    September 7, 2026

    ಮದುವೆಯ ಭರವಸೆ ನೀಡಿ ದೈಹಿಕ ಸಂಪರ್ಕ ಆರೋಪ: ಮಹಿಳೆ ಮೇಲೆ ಹಲ್ಲೆ, ಬೆಳ್ತಂಗಡಿ ಮೂಲದ ಯುವ ವಕೀಲನ ವಿರುದ್ಧ ಪ್ರಕರಣ ದಾಖಲು

    September 7, 2026

    ‘ಬೈ ಬೈ ಪಪ್ಪಾ’ ಎಂದು ತಂದೆಗೆ ಹೇಳಿ ಚೆನಾಬ್ ನದಿಗೆ ಜಿಗಿದ ಯುವತಿ; ಶವಕ್ಕಾಗಿ ಶೋಧ

    September 7, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿ, ಕುಟುಂಬದ ನಾಲ್ವರು ಸಾವು

    September 7, 2026

    ಮದುವೆಯ ಭರವಸೆ ನೀಡಿ ದೈಹಿಕ ಸಂಪರ್ಕ ಆರೋಪ: ಮಹಿಳೆ ಮೇಲೆ ಹಲ್ಲೆ, ಬೆಳ್ತಂಗಡಿ ಮೂಲದ ಯುವ ವಕೀಲನ ವಿರುದ್ಧ ಪ್ರಕರಣ ದಾಖಲು

    September 7, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.