ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಅತ್ಯಾಚಾರಕ್ಕೆ ಯತ್ನಿಸಿ ಮಹಿಳೆಯನ್ನು ಕೊಲೆ ಮಾಡಿದ ಆರೋಪ ಕೇಳಿ ಬಂದಿದೆ.
45 ವರ್ಷದ ಮಹಿಳೆಯ ಮೇಲೆ ಅಪ್ರಾಪ್ತ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಪ್ರತಿರೋಧ ವ್ಯಕ್ತಪಡಿಸಿದ್ದಕ್ಕೆ ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ.
ಸಂತ್ರಸ್ತ ಮಹಿಳೆ ಮೇಲೆ ಅಪ್ರಾಪ್ತನಿಂದ ಹಲ್ಲೆ ಆರೋಪ ಕೇಳಿ ಬಂದಿದೆ. ಗಲಾಟೆಯ ವೇಳೆ ತನ್ನ ಪುತ್ರನಿಗೆ ಮಹಿಳೆ ಕರೆ ಮಾಡಿದ್ದರು. ಇದೇ ವೇಳೆ ತನ್ನ ತಂದೆ ಮತ್ತು ಚಿಕ್ಕಪ್ಪಂದಿರನ್ನು ಆರೋಪಿ ಕರೆಸಿದ್ದ.
ಬಳಿಕ ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಮೃತಳ ಪುತ್ರ ಸ್ಥಳಕ್ಕೆ ಬರುವಷ್ಟರಲ್ಲಿ ಮಚ್ಚಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ತೀವ್ರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ಶಿಫ್ಟ್ ಮಾಡುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ. ಅಪ್ರಾಪ್ತ ಮತ್ತು ಆತನ ತಂದೆ, ಚಿಕ್ಕಪ್ಪಂದಿರು ಸೇರಿ ಐವರ ವಿರುದ್ಧ ಕೇಸು ದಾಖಲಾಗಿದೆ. ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.








