Close Menu
    What's Hot

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಂತರಾಷ್ಟ್ರೀಯ»ಇರಾನ್-ಅಮೆರಿಕ ಸಂಘರ್ಷದ ಎಫೆಕ್ಟ್: ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಯಲ್ಲಿ ಭಾರಿ ಏರಿಕೆ
    ಅಂತರಾಷ್ಟ್ರೀಯ

    ಇರಾನ್-ಅಮೆರಿಕ ಸಂಘರ್ಷದ ಎಫೆಕ್ಟ್: ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಯಲ್ಲಿ ಭಾರಿ ಏರಿಕೆ

    adminBy adminSeptember 9, 2026No Comments2 Mins Read

    ಟೆಹ್ರಾನ್/ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಅಮೆರಿಕ ಹಾಗೂ ಇರಾನ್ ನಡುವಿನ ಸಶಸ್ತ್ರ ಸಂಘರ್ಷ ಮತ್ತಷ್ಟು ಉಗ್ರರೂಪ ಪಡೆದುಕೊಂಡಿದೆ. ಅಮೆರಿಕದ ಯುದ್ಧನೌಕೆಯನ್ನು ಗುರಿಯಾಗಿಸಿ ಇರಾನ್ ದಾಳಿ ನಡೆಸಿದ ಬೆನ್ನಲ್ಲೇ, ಪ್ರತೀಕಾರವಾಗಿ ಅಮೆರಿಕದ ಸೇನಾ ಪಡೆಗಳು ಇರಾನ್‌ನ ಐದು ಪ್ರಮುಖ ತೈಲ ಟ್ಯಾಂಕರ್‌ಗಳ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿರುವುದಾಗಿ ಅಮೆರಿಕದ ಸೆಂಟ್ರಲ್ ಕಮಾಂಡ್ ತಿಳಿಸಿದೆ.

    ಒಮಾನ್ ಕೊಲ್ಲಿಯಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ಸ್ ಕಾರ್ಪ್ಸ್‌ (IRGC) ಜೊತೆ ಸಂಪರ್ಕ ಹೊಂದಿದ್ದ 4 ತೈಲ ಟ್ಯಾಂಕರ್‌ಗಳು ಹಾಗೂ ಇರಾನ್‌ನ ಪ್ರಮುಖ ತೈಲ ರಫ್ತು ಕೇಂದ್ರವಾದ ಖಾರ್ಗ್ ದ್ವೀಪದ ಬಳಿಯಿದ್ದ ಮತ್ತೊಂದು ಟ್ಯಾಂಕರ್ ಮೇಲೆ ದಾಳಿ ನಡೆಸಲಾಗಿದೆ. ಈ ಟ್ಯಾಂಕರ್‌ಗಳು ಐಆರ್‌ಜಿಸಿ ಹಾಗೂ ಅದರ ಪ್ರಾದೇಶಿಕ ಉಗ್ರ ಸಂಘಟನೆಗಳಿಗೆ ಹಣಕಾಸು ಒದಗಿಸುವ ಅಕ್ರಮ ಜಾಲದ ಭಾಗವಾಗಿದ್ದವು ಎಂದು ಅಮೆರಿಕ ಹೇಳಿದೆ.

    ಅಮೆರಿಕದ ದಾಳಿಗೆ ಪ್ರತಿಯಾಗಿ ಇರಾನ್, ಜೋರ್ಡಾನ್‌ನಲ್ಲಿರುವ ಅಮೆರಿಕನ್ ಸೇನಾ ನೆಲೆಯತ್ತ 20 ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾಯಿಸಿದೆ. ಆದರೆ, ತನ್ನ ವಾಯು ರಕ್ಷಣಾ ವ್ಯವಸ್ಥೆಯ ಮೂಲಕ 18 ಕ್ಷಿಪಣಿಗಳನ್ನು ಹೊಡೆದುರುಳಿಸಲಾಗಿದ್ದು, ಇನ್ನುಳಿದ 2 ಕ್ಷಿಪಣಿಗಳು ಜನವಸತಿ ಇಲ್ಲದ ಪ್ರದೇಶದಲ್ಲಿ ಬಿದ್ದಿವೆ ಎಂದು ಜೋರ್ಡಾನ್ ಸೇನೆ ಸ್ಪಷ್ಟಪಡಿಸಿದೆ. ಇದರ ಬೆನ್ನಲ್ಲೇ ಕುವೈತ್ ಮತ್ತು ಬಹ್ರೇನ್ ಬಂದರುಗಳಲ್ಲಿರುವ ಅಮೆರಿಕ ಸಂಪರ್ಕಿತ ತೈಲ ಟ್ಯಾಂಕರ್‌ಗಳ ಸಿಬ್ಬಂದಿ ತಕ್ಷಣ ಹಡಗುಗಳನ್ನು ತೊರೆಯುವಂತೆ ಇರಾನ್ ಕಠಿಣ ಎಚ್ಚರಿಕೆ ನೀಡಿದೆ. ಅಮೆರಿಕ ದಾಳಿ ನಡೆಸಿದ ಖಾರ್ಗ್ ದ್ವೀಪವು ಇರಾನ್‌ನ ಅತ್ಯಂತ ಪ್ರಮುಖ ತೈಲ ರಫ್ತು ಕೇಂದ್ರವಾಗಿದ್ದು, ದೇಶದ ಒಟ್ಟು ಕಚ್ಚಾ ತೈಲದ ಶೇ. 90 ರಷ್ಟು ಭಾಗ ಈ ದ್ವೀಪದ ಮೂಲಕವೇ ರಫ್ತಾಗುತ್ತದೆ. ಈ ಸಂಘರ್ಷದ ನೇರ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯ ಮೇಲೆ ಬಿದ್ದಿದೆ.

    ಬುಧವಾರ ಏಷ್ಯನ್ ಮಾರುಕಟ್ಟೆಯಲ್ಲಿ ಇಂಟರ್ನ್ಯಾಷನಲ್ ಬ್ರೆಂಟ್ ಕಚ್ಚಾ ತೈಲದ ಬೆಲೆ ಶೇ. 1.5 ರಷ್ಟು ಏರಿಕೆಯಾಗಿ ಬ್ಯಾರೆಲ್‌ಗೆ 99.41 ಡಾಲರ್‌ಗೆ ತಲುಪಿದ್ದರೆ, ಅಮೆರಿಕದ ಕಚ್ಚಾ ತೈಲದ ಬೆಲೆ ಶೇ. 1.6 ರಷ್ಟು ಏರಿಕೆಯಾಗಿ 94.55 ಡಾಲರ್‌ಗೆ ಜಿಗಿದಿದೆ. ಮತ್ತೊಂದೆಡೆ, ಇರಾನ್ ಬೆಂಬಲಿತ ಯೆಮನ್‌ನ ಹೌತಿ ಬಂಡುಕೋರರು ಸೌದಿ ಅರೇಬಿಯಾದ ಇಂಧನ ಮೂಲಸೌಕರ್ಯಗಳು ಹಾಗೂ ನಾಗರಿಕ ಪ್ರದೇಶಗಳ ಮೇಲೆ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ 73 ಮಂದಿ ಗಾಯಗೊಂಡಿದ್ದು, ತೈಲ ಸಂಸ್ಕರಣಾಗಾರಗಳಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಉತ್ಪಾದನಾ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

    ಪರಿಸ್ಥಿತಿ ಕುರಿತು ಪ್ರತಿಕ್ರಿಯಿಸಿರುವ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ, “ಇರಾನ್ ಪ್ರತಿಬಾರಿ ಅಮೆರಿಕದ ನೌಕಾಪಡೆಯ ಹಡಗುಗಳನ್ನು ಗುರಿಯಾಗಿಸಲು ಯತ್ನಿಸಿದಾಗಲೆಲ್ಲಾ, ಅವರು ತಮ್ಮ ತೈಲ ಟ್ಯಾಂಕರ್‌ಗಳನ್ನು ಕಳೆದುಕೊಳ್ಳಬೇಕಾಗುತ್ತದೆ” ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಫೆಬ್ರವರಿ 28ರಂದು ಆರಂಭವಾದ ಈ ಯುದ್ಧವು ಇದೀಗ ಜಾಗತಿಕ ಆರ್ಥಿಕತೆಗೆ ದೊಡ್ಡ ಕಂಟಕವಾಗಿ ಪರಿಣಮಿಸಿದೆ




    #national International
    Previous Articleಲಿಯೋ ಮಾರ್ಟ್, ಸ್ವಿಗ್ಗಿ ಇನ್ಸ್ಟಾಮಾರ್ಟ್ ಆರೋಗ್ಯ ಇಲಾಖೆ ಮೇಲೆ ದಾಳಿ: ಅವಧಿ ಮೀರಿದ ಆಹಾರ ವಶಕ್ಕೆ
    Next Article 8 ತಿಂಗಳ ಹಿಂದೆಯ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ವಿದ್ಯಾರಣ್ಯಪುರದ ಇಬ್ಬರು ಯುವತಿಯರು ಪತ್ತೆ, ಒಬ್ಬಳು ಗರ್ಭಿಣಿ

    Related Posts

    ಅಸ್ಸಾಂನಲ್ಲಿ ಬೆಚ್ಚಿಬೀಳಿಸಿದ ರಸ್ತೆ ಅಪಘಾತ; ಮಿನಿ ಬಸ್ ಜಖಂಗೊಂಡು 23 ಮಂದಿ ದುರ್ಮರಣ

    November 13, 2026

    ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ಹತ್ಯೆ ಪ್ರಕರಣ; 6 ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು

    November 13, 2026

    ಉದ್ಘಾಟನೆಯ ಸಂಭ್ರಮದ ಬೆನ್ನಲ್ಲೇ ತನಿಷ್ಕ್ ಮಳಿಗೆಯಲ್ಲಿ ಕಳ್ಳತನ; ಟ್ರಾಲಿ ಬ್ಯಾಗ್‌ನಲ್ಲಿ ಆಭರಣ ಸಾಗಿಸಿದ ಕಳ್ಳ

    November 13, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026

    ಮಗಳ ಮದುವೆ ಲಗ್ನಪತ್ರಿಕೆ ಹಂಚಲು ಹೋಗಿದ್ದ ದಂಪತಿಗೆ ಸಿಮೆಂಟ್ ಲಾರಿ ಡಿಕ್ಕಿ; ಪತ್ನಿ ಸಾವು, ಪತಿಯ ಕಾಲು ತುಂಡು

    November 13, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.