ಪುತ್ತೂರು: ಕೆಲಸದ ನಿಮಿತ್ತ ಆಟೋದಲ್ಲಿ ತೆರಳುತ್ತಿದ್ದ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪ ಮೇಲೆ ಚಾಲಕನ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ರಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಪ್ರಕರಣದ ಸಂತ್ರಸ್ಥ ಮಹಿಳೆಯು ಸೆ. 09 ರಂದು ಬೆಳಿಗ್ಗೆ ಕೆಲಸದ ನಿಮಿತ್ತ ಮನೆಯಿಂದ ಹೊರಟಿದ್ದರು. ಈ ವೇಳೆ , ಆಕೆಯ ಪರಿಚಯದ ಬಾಲಕೃಷ್ಣ ಎಂಬವರು ಚಾಲಕರಾಗಿರುವ KA21B2011 ನೊಂದಣಿ ಅಟೋ ರಿಕ್ಷಾದಲ್ಲಿ ಪುತ್ತೂರು ಕಡೆಗೆ ತೆರಳುತ್ತಿದ್ದರು ಎನ್ನಲಾಗಿದೆ.
ಅಟೋ ಚಾಲಕನು ಮಾರ್ಗ ಬದಲಿಸಿ, ರಿಕ್ಷಾವನ್ನು ಕುರಿಯ ಎಂಬಲ್ಲಿಗೆ ತಂದು ನಿಲ್ಲಿಸಿ ಬಳಿಕ ಸಂತ್ರಸ್ಥ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಸಂತ್ರಸ್ಥ ಮಹಿಳೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ
ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 117-2026, ಕಲಂ: 74,75,64 ಬಿಎನ್ ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಾಲಕೃಷ್ಣ ರವರನ್ನು ಸಂಟ್ಯಾರ್ ಪರ್ಪುಂಜ ಬಳಿ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.








