ಚಾಮರಾಜನಗರ: ಬೈಕ್‌ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಹನೂರು ತಾಲೂಕಿನ ಆರ್.ಎಸ್.ದೊಡ್ಡಿ ಸಮೀಪದ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಹನೂರು ತಾಲೂಕಿನ ಕೊಪ್ಪ ಗ್ರಾಮದ ಸುರೇಶ್ (24), ಮಹೇಂದ್ರ (35) ಹಾಗೂ ಮುನಿಯಪ್ಪ (35) ಮೃತ ದುರ್ದೈವಿಗಳು. ಇವರು ಪ್ರಯಾಣಿಸುತ್ತಿದ್ದ ಬೈಕ್‌ಗೆ ಮಲೆಮಹದೇಶ್ವರ ಬೆಟ್ಟದತ್ತ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಇಬ್ಬರ ದೇಹಗಳು ಛಿದ್ರಗೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಗೌರಿ ಗಣೇಶ ಹಬ್ಬದ ಸಿದ್ಧತೆಯ ಹಿನ್ನೆಲೆಯಲ್ಲಿ ಮೂವರು ಕೊಳ್ಳೇಗಾಲದತ್ತ ತೆರಳುತ್ತಿದ್ದರು ಎಂದು ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ.
ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಹನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೀಡಾದ ಕಾರು ಹಾಗೂ ಬೈಕ್‌ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.








