Close Menu
    What's Hot

    ಭಾರತೀಯ ಮೂಲದ ಮಹಿಳೆಗೆ ನಿರಂತರ ಕಿರುಕುಳ: ಕೆಲಸದ ಸ್ಥಳದ ಹೊರಗೆ ಬೆನ್ನಟ್ಟಿ ಗುಂಡಿಕ್ಕಿ ಕೊಲೆ, ಆರೋಪಿ ಆತ್ಮಹತ್ಯೆ

    September 12, 2026

    ಮಹಿಳೆ-ಯುವಕನ ಪ್ರೀತಿಗೆ ಕುಟುಂಬದ ವಿರೋಧ: ಪ್ರೇಮಿಗಳಿಬ್ಬರು ಆತ್ಮಹತ್ಯೆ, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

    September 12, 2026

    ED ದಾಳಿ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಪರ ವಿಜಯ್ ಮಲ್ಯ ಹೇಳಿದ್ದೇನು?

    September 12, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮಂಗಳೂರು ಜೈಲಿನಲ್ಲಿ ವಿಚಾರಣಾ ಬಂಧಿಗಳ ಕೊಲೆ ಯತ್ನ ಪ್ರಕರಣ: 14 ಮಂದಿ ದೋಷಿ
    ಅಪರಾಧ

    ಮಂಗಳೂರು ಜೈಲಿನಲ್ಲಿ ವಿಚಾರಣಾ ಬಂಧಿಗಳ ಕೊಲೆ ಯತ್ನ ಪ್ರಕರಣ: 14 ಮಂದಿ ದೋಷಿ

    adminBy adminSeptember 12, 2026Updated:September 12, 2026No Comments2 Mins Read

    ಮಂಗಳೂರು: 2017ರಲ್ಲಿ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾ ಬಂದಿಗಳ ಮೇಲೆ ಹಲ್ಲೆ ನಡೆಸಿ ಕೊಲೆ ಯತ್ನ ಹಾಗೂ ಜೈಲು ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬರ್ಕೆ ಪೊಲೀಸರು 16 ಮಂದಿ ಆರೋಪಿಗಳ ವಿರುದ್ಧ ದೋಷಾರೋಪಣಾ ಪತ್ರ(ಚಾರ್ಜ್‌ಶೀಟ್) ಸಲ್ಲಿಸಿದ್ದಾರೆ.

    ಉಡುಪಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾಗಿದ್ದ ನವನೀತ್ ಶೆಟ್ಟಿ ಹಾಗೂ ನಿರಂಜನ್ ಭಟ್ ಅವರ ಮೇಲೆ ಮಂಗಳೂರು ಜೈಲಿನಲ್ಲಿ ಹಲ್ಲೆ ನಡೆಸಿ ಕೊಲೆ ಯತ್ನ ಮಾಡಲಾಗಿತ್ತು.

    2017ರ ಸೆಪ್ಟೆಂಬರ್ 11ರಂದು ಮಧ್ಯಾಹ್ನ 12.30ರ ಸುಮಾರಿಗೆ ಮಂಗಳೂರು ಜಿಲ್ಲಾ ಕಾರಾಗೃಹದ ಹೊಸ ಕಟ್ಟಡದ ‘ಬಿ’ ಬ್ಲಾಕ್‌ನ ವರಾಂಡದಲ್ಲಿ ಘಟನೆ ನಡೆದಿತ್ತು. ನ್ಯಾಯಾಂಗ ಬಂಧನದಲ್ಲಿದ್ದ ವಿಚಾರಣಾ ಬಂದಿಗಳಾದ ನವನೀತ್ ಶೆಟ್ಟಿ ಮತ್ತು ನಿರಂಜನ್ ಭಟ್ ತಮ್ಮ ಪ್ರಕರಣದ ವಿಚಾರಣಾ ದಿನಾಂಕ ತಿಳಿದುಕೊಳ್ಳಲು ಕಾರಾಗೃಹ ಅಧೀಕ್ಷಕರ ಕಚೇರಿಗೆ ತೆರಳುತ್ತಿದ್ದ ವೇಳೆ ಆರೋಪಿಗಳು ಗಲಾಟೆ ನಡೆಸಿ ಹಲ್ಲೆ ಮಾಡಿದ್ದಾರೆ.

    ಪ್ರಕರಣದ ಪ್ರಮುಖ ಆರೋಪಿಯು ಇತರ 15 ಆರೋಪಿಗಳೊಂದಿಗೆ ಸೇರಿಕೊಂಡು ಸಂಚು ರೂಪಿಸಿ ಇಬ್ಬರು ವಿಚಾರಣಾ ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಾನೆ. ಆರೋಪಿಗಳು ಕೈಯಿಂದ ಹೊಡೆದು, ಕಾಲಿನಿಂದ ತುಳಿದು ಹಲ್ಲೆ ನಡೆಸಿರುವುದಲ್ಲದೆ, ಪೈಪ್ ನಿಂದ ನವನೀತ್ ಶೆಟ್ಟಿಯವರ ತಲೆ ಮತ್ತು ಬೆನ್ನಿಗೆ ಹೊಡೆದು ಗಾಯಗೊಳಿಸಿದ್ದಾರೆ. ಬಳಿಕ ಅವರನ್ನು ವರಾಂಡದಿಂದ ಕೆಳಗಿನ ಅಂಗಳಕ್ಕೆ ಎಳೆದು ಹಾಕಲಾಗಿದೆ.

    ಇದೇ ವೇಳೆ ಸ್ಟೀಲ್ ಡ್ರಮ್‌ನಿಂದ ನವನೀತ್ ಶೆಟ್ಟಿಯವರ ತಲೆಗೆ ಹೊಡೆದು ಗಾಯಗೊಳಿಸಿದ್ದಾರೆ. ಪ್ರಮುಖ ಆರೋಪಿಯು ಕೇರಂ ಬೋರ್ಡ್‌ನಿಂದ ತಲೆಗೆ ಹೊಡೆಯಲು ಮುಂದಾಗಿ ಕೊಲೆ ಯತ್ನ ನಡೆಸಿದ್ದು, ಜೈಲು ಸಿಬ್ಬಂದಿಯೊಬ್ಬರು ತಡೆದಿದ್ದಾರೆ ಎಂದು ಚಾರ್ಜ್‌ಶೀಟ್‌ನಲ್ಲಿ ತಿಳಿಸಿದ್ದಾರೆ.

    ಹಲ್ಲೆ ತಡೆಯಲು ಬಂದ ಜೈಲು ಸಿಬ್ಬಂದಿಯ ಸಮವಸ್ತ್ರವನ್ನು ಪ್ರಮುಖ ಆರೋಪಿ ಹಿಡಿದು ಎಳೆದಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ. ಉಳಿದ ಆರೋಪಿಗಳೂ ಭದ್ರತಾ ಸಿಬ್ಬಂದಿಗೆ ಸರಕಾರಿ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿ ಹಲ್ಲೆಗೆ ಮುಂದಾಗಿದ್ದಾರೆ ಎಂದು ಆರೋಪಿಸಲಾಗಿದೆ.

    ಇದೇ ವೇಳೆ ನವನೀತ್ ಶೆಟ್ಟಿಯವರ ತಂದೆ ಭಾಸ್ಕರ ಶೆಟ್ಟಿಯವರ ಕೊಲೆ ಪ್ರಕರಣವನ್ನು ಒಪ್ಪಿಕೊಳ್ಳುವಂತೆ ಬೆದರಿಕೆ ಹಾಕಲಾಗಿದ್ದು, ಇಲ್ಲದಿದ್ದರೆ ₹5 ಲಕ್ಷ ಹಣ ತಂದುಕೊಡುವಂತೆ ಒತ್ತಾಯಿಸಿ, ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಹಲ್ಲೆಯಿಂದ ನವನೀತ್ ಶೆಟ್ಟಿ ಹಾಗೂ ನಿರಂಜನ್ ಭಟ್ ಅವರಿಗೆ ಗಾಯಗಳಾಗಿದ್ದು, ವೈದ್ಯಕೀಯ ದೃಢಪತ್ರ ಹಾಗೂ ತನಿಖೆಯಿಂದ ಆರೋಪಗಳು ದೃಢಪಟ್ಟಿವೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬರ್ಕೆ ಪೊಲೀಸ್ ಠಾಣೆ ಅ.ಕ್ರ. 130/2017ರಲ್ಲಿ ಕಲಂ 120(B), 143, 147, 148, 341, 323, 324, 384, 506, 307, 353 ಜೊತೆಗೆ 149 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತನಿಖೆ ಪೂರ್ಣಗೊಳಿಸಿದ ಬರ್ಕೆ ಪೊಲೀಸರು 14-11-2017ರಂದು 16 ಮಂದಿ ಆರೋಪಿಗಳ ವಿರುದ್ಧ ದೋಷಾರೋಪಣಾ ಪತ್ರ ಸಲ್ಲಿಸಿದ್ದಾರೆ.

    ಪ್ರಕರಣದಲ್ಲಿ ಒಟ್ಟು 14 ಆರೋಪಿಗಳು ದೋಷಿಗಳಾಗಿದ್ದಾರೆಎಂದು ನ್ಯಾಯಾಲಯ ತೀರ್ಪು ನೀಡಿದ್ದು, ಇವರ ಪೈಕಿ ಲಾಯ್ ವೇಗಸ್, ಧನರಾಜ್ ಪೂಜಾರಿ ಹಾಗೂ ಅಭಿಷೇಕ್ ಅವರು ಇತರ ಪ್ರಕರಣಗಳಲ್ಲಿ ಈಗಾಗಲೇ ಜೈಲು ಬಂಧನದಲ್ಲಿದ್ದಾರೆ. ಉಳಿದ 10 ಮಂದಿಯನ್ನು ನ್ಯಾಯಾಲಯದ ಆದೇಶದಂತೆ ನಿನ್ನೆ ವಶಕ್ಕೆ ಪಡೆಯಲಾಗಿದೆ. ಮತ್ತೊಬ್ಬ ಆರೋಪಿ ನಿನ್ನೆ ನ್ಯಾಯಾಲಯಕ್ಕೆ ಗೈರಾಗಿದ್ದಾನೆ.

    ಪ್ರಕರಣದ ಆರೋಪಿಗಳಿಗೆ ವಿಧಿಸಲಾಗುವ ಶಿಕ್ಷೆಯ ಪ್ರಮಾಣವನ್ನು ಸೆಪ್ಟೆಂಬರ್ 16ರಂದು ನ್ಯಾಯಾಲಯ ಪ್ರಕಟಿಸಲಿದೆ ಎಂದು ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ..




    #crime #dakshinakannada
    Previous Articleಪ್ರಸಿದ್ಧ ಟೀ ಸ್ಟಾಲ್‌ “ಟೀ ಡೇನಲ್ಲಿ” ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ₹20 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಭಸ್ಮ
    Next Article ಮಕ್ಕಳ ಜೀವದ ಜೊತೆ ಚೆಲ್ಲಾಟ: ಪಿಕಪ್ ವಾಹನದಲ್ಲಿ ಅಪಾಯಕಾರಿ ಪ್ರಯಾಣ, ಪೊಲೀಸರಿಂದ ವಾಹನ ಜಪ್ತಿ

    Related Posts

    ಭಾರತೀಯ ಮೂಲದ ಮಹಿಳೆಗೆ ನಿರಂತರ ಕಿರುಕುಳ: ಕೆಲಸದ ಸ್ಥಳದ ಹೊರಗೆ ಬೆನ್ನಟ್ಟಿ ಗುಂಡಿಕ್ಕಿ ಕೊಲೆ, ಆರೋಪಿ ಆತ್ಮಹತ್ಯೆ

    September 12, 2026

    ED ದಾಳಿ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಪರ ವಿಜಯ್ ಮಲ್ಯ ಹೇಳಿದ್ದೇನು?

    September 12, 2026

    “ನಾನು ಮೀಡಿಯಾದವನು, ವಿಡಿಯೋ ಮಾಡಿ ವೈರಲ್ ಮಾಡುತ್ತೇನೆ” ಎಂದು ಸಂಚಾರ ಪೊಲೀಸರಿಗೆ ಬೆದರಿಕೆ: ಮಂಗಳೂರಿನಲ್ಲಿ ಪ್ರಕರಣ ದಾಖಲು

    September 12, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಭಾರತೀಯ ಮೂಲದ ಮಹಿಳೆಗೆ ನಿರಂತರ ಕಿರುಕುಳ: ಕೆಲಸದ ಸ್ಥಳದ ಹೊರಗೆ ಬೆನ್ನಟ್ಟಿ ಗುಂಡಿಕ್ಕಿ ಕೊಲೆ, ಆರೋಪಿ ಆತ್ಮಹತ್ಯೆ

    September 12, 2026

    ಮಹಿಳೆ-ಯುವಕನ ಪ್ರೀತಿಗೆ ಕುಟುಂಬದ ವಿರೋಧ: ಪ್ರೇಮಿಗಳಿಬ್ಬರು ಆತ್ಮಹತ್ಯೆ, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

    September 12, 2026

    ED ದಾಳಿ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಪರ ವಿಜಯ್ ಮಲ್ಯ ಹೇಳಿದ್ದೇನು?

    September 12, 2026

    “ನಾನು ಮೀಡಿಯಾದವನು, ವಿಡಿಯೋ ಮಾಡಿ ವೈರಲ್ ಮಾಡುತ್ತೇನೆ” ಎಂದು ಸಂಚಾರ ಪೊಲೀಸರಿಗೆ ಬೆದರಿಕೆ: ಮಂಗಳೂರಿನಲ್ಲಿ ಪ್ರಕರಣ ದಾಖಲು

    September 12, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಹಿಳೆ-ಯುವಕನ ಪ್ರೀತಿಗೆ ಕುಟುಂಬದ ವಿರೋಧ: ಪ್ರೇಮಿಗಳಿಬ್ಬರು ಆತ್ಮಹತ್ಯೆ, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

    September 12, 2026

    ED ದಾಳಿ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಪರ ವಿಜಯ್ ಮಲ್ಯ ಹೇಳಿದ್ದೇನು?

    September 12, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.