Close Menu
    What's Hot

    ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ: ಸರ್ಕಾರದ ಮಟ್ಟದಲ್ಲಿ ಚಿಂತನೆ

    September 12, 2026

    ಹೋಟೆಲ್ ಕೊಠಡಿಯಲ್ಲಿ ಬ್ಯೂಟಿಷಿಯನ್ ಶವ ಪತ್ತೆ: ಜೊತೆಗಿದ್ದ ಉದ್ಯಮಿ ನಾಪತ್ತೆ, ಸಾವಿನ ಸುತ್ತ ಅನುಮಾನ

    September 12, 2026

    ಶಾಲೆಗೆ ಹೋಗಬೇಕಿದ್ದ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಆರೋಪ: 71 ಬಾಲಕಾರ್ಮಿಕರ ರಕ್ಷಣೆ, 5 ಪ್ರಕರಣ ದಾಖಲು

    September 12, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಶಾಲೆಗೆ ಹೋಗಬೇಕಿದ್ದ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಆರೋಪ: 71 ಬಾಲಕಾರ್ಮಿಕರ ರಕ್ಷಣೆ, 5 ಪ್ರಕರಣ ದಾಖಲು
    ಅಪರಾಧ

    ಶಾಲೆಗೆ ಹೋಗಬೇಕಿದ್ದ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಆರೋಪ: 71 ಬಾಲಕಾರ್ಮಿಕರ ರಕ್ಷಣೆ, 5 ಪ್ರಕರಣ ದಾಖಲು

    adminBy adminSeptember 12, 2026No Comments1 Min Read

    ನೆಲಮಂಗಲ: ರಾಜಧಾನಿ ಬೆಂಗಳೂರು ಪಶ್ಚಿಮ ವಿಭಾಗ ಹಾಗೂ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶ್ರಮಿಕರಾಗಿ ದುಡಿಯುತ್ತಿದ್ದ ಸಣ್ಣ ಸಣ್ಣ ಮಕ್ಕಳನ್ನು ರಕ್ಷಿಸಲು ಪೊಲೀಸರು ಭರ್ಜರಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು 71ಕ್ಕೂ ಹೆಚ್ಚು ಬಾಲಕಾರ್ಮಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಾರ್ಮಿಕರನ್ನು ಕಾನೂನುಬಾಹಿರವಾಗಿ ಕೆಲಸಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂಬ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಡಿವೈಎಸ್ಪಿ ಉಮಾರಾಣಿ ಹಾಗೂ ಸಿಪಿಐ ನರೇಂದ್ರ ಬಾಬು ಅವರ ನೇತೃತ್ವದಲ್ಲಿ ಪೊಲೀಸರ ವಿಶೇಷ ತಂಡ ದಿಢೀರ್ ದಾಳಿ ನಡೆಸಿದೆ.

    ದಾಳಿಯ ವೇಳೆ ಸಣ್ಣ ವಯಸ್ಸಿನ ಮಕ್ಕಳನ್ನು ಕಠಿಣ ಕೆಲಸಗಳಿಗೆ ಬಳಸಿಕೊಳ್ಳುತ್ತಿದ್ದುದು ಪತ್ತೆಯಾಗಿದೆ. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಒಟ್ಟು 5 ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ರಕ್ಷಿಸಲ್ಪಟ್ಟ ಎಲ್ಲಾ ಮಕ್ಕಳನ್ನು ಸುರಕ್ಷಿತವಾಗಿ ಮಕ್ಕಳ ಸಾಂತ್ವನ ಕೇಂದ್ರಕ್ಕೆ ರವಾನಿಸಲಾಗಿದೆ.ಇನ್ನೊಂದೆಡೆ, ಬೆಂಗಳೂರು ಪಶ್ಚಿಮ ವಿಭಾಗದ ಪೊಲೀಸರು ಬಾಲಕಾರ್ಮಿಕ ಪದ್ಧತಿ ತಡೆಗಟ್ಟಲು ಬೃಹತ್ ಕಾರ್ಯಾಚರಣೆಯನ್ನು ಕೈಗೆತ್ತಿಕೊಂಡಿದ್ದಾರೆ. ವಿಭಾಗದಾದ್ಯಂತ ಒಟ್ಟು 917 ವ್ಯಾಪಾರ ಮಳಿಗೆಗಳು, ಗ್ಯಾರೇಜ್ ಹಾಗೂ ಸಣ್ಣ ಪ್ರಮಾಣದ ಉದ್ದಿಮೆಗಳ ಮೇಲೆ ದಿಢೀರ್ ದಾಳಿ ನಡೆಸಲಾಗಿದೆ. ಈ ಬೃಹತ್ ಕಾರ್ಯಾಚರಣೆಯಲ್ಲಿ ಒಟ್ಟು 71 ಬಾಲಕಾರ್ಮಿಕರನ್ನು ರಕ್ಷಿಸಲಾಗಿದೆ.

    ಶಾಲಾ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡು ಶೋಷಣೆ ಮಾಡುತ್ತಿದ್ದ ಅಂಗಡಿಗಳು ಹಾಗೂ ಸಂಸ್ಥೆಗಳ ಮಾಲೀಕರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಸಂಪೂರ್ಣ ಸಿದ್ಧತೆ ನಡೆಸಿದೆ. ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟವಾಡುವ ಹಾಗೂ ಬಾಲಕಾರ್ಮಿಕರನ್ನು ಕೆಲಸಕ್ಕೆ ಇಟ್ಟುಕೊಳ್ಳುವವರ ವಿರುದ್ಧ ಮುಂದಿನ ದಿನಗಳಲ್ಲೂ ಇಂತಹ ಕಟ್ಟುನಿಟ್ಟಿನ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪೊಲೀಸರು ಎಚ್ಚರಿಸಿದ್ದಾರೆ.

    #crime #karnataka
    Previous Articleಸ್ನೇಹಿತನ ಪತ್ನಿಯೊಂದಿಗೆ ಅಕ್ರಮ ಸಂಬಂಧದ ಶಂಕೆ: ಬಾಲ್ಯದ ಗೆಳೆಯನನ್ನೇ ಕಬ್ಬಿಣದ ರಾಡ್‌ನಿಂದ ಕೊಂದು ಹಾಕಿದ ಸ್ನೇಹಿತ
    Next Article ಹೋಟೆಲ್ ಕೊಠಡಿಯಲ್ಲಿ ಬ್ಯೂಟಿಷಿಯನ್ ಶವ ಪತ್ತೆ: ಜೊತೆಗಿದ್ದ ಉದ್ಯಮಿ ನಾಪತ್ತೆ, ಸಾವಿನ ಸುತ್ತ ಅನುಮಾನ

    Related Posts

    ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ: ಸರ್ಕಾರದ ಮಟ್ಟದಲ್ಲಿ ಚಿಂತನೆ

    September 12, 2026

    ಹೋಟೆಲ್ ಕೊಠಡಿಯಲ್ಲಿ ಬ್ಯೂಟಿಷಿಯನ್ ಶವ ಪತ್ತೆ: ಜೊತೆಗಿದ್ದ ಉದ್ಯಮಿ ನಾಪತ್ತೆ, ಸಾವಿನ ಸುತ್ತ ಅನುಮಾನ

    September 12, 2026

    ಸ್ನೇಹಿತನ ಪತ್ನಿಯೊಂದಿಗೆ ಅಕ್ರಮ ಸಂಬಂಧದ ಶಂಕೆ: ಬಾಲ್ಯದ ಗೆಳೆಯನನ್ನೇ ಕಬ್ಬಿಣದ ರಾಡ್‌ನಿಂದ ಕೊಂದು ಹಾಕಿದ ಸ್ನೇಹಿತ

    September 12, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ: ಸರ್ಕಾರದ ಮಟ್ಟದಲ್ಲಿ ಚಿಂತನೆ

    September 12, 2026

    ಹೋಟೆಲ್ ಕೊಠಡಿಯಲ್ಲಿ ಬ್ಯೂಟಿಷಿಯನ್ ಶವ ಪತ್ತೆ: ಜೊತೆಗಿದ್ದ ಉದ್ಯಮಿ ನಾಪತ್ತೆ, ಸಾವಿನ ಸುತ್ತ ಅನುಮಾನ

    September 12, 2026

    ಶಾಲೆಗೆ ಹೋಗಬೇಕಿದ್ದ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಆರೋಪ: 71 ಬಾಲಕಾರ್ಮಿಕರ ರಕ್ಷಣೆ, 5 ಪ್ರಕರಣ ದಾಖಲು

    September 12, 2026

    ಸ್ನೇಹಿತನ ಪತ್ನಿಯೊಂದಿಗೆ ಅಕ್ರಮ ಸಂಬಂಧದ ಶಂಕೆ: ಬಾಲ್ಯದ ಗೆಳೆಯನನ್ನೇ ಕಬ್ಬಿಣದ ರಾಡ್‌ನಿಂದ ಕೊಂದು ಹಾಕಿದ ಸ್ನೇಹಿತ

    September 12, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ: ಸರ್ಕಾರದ ಮಟ್ಟದಲ್ಲಿ ಚಿಂತನೆ

    September 12, 2026

    ಶಾಲೆಗೆ ಹೋಗಬೇಕಿದ್ದ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡ ಆರೋಪ: 71 ಬಾಲಕಾರ್ಮಿಕರ ರಕ್ಷಣೆ, 5 ಪ್ರಕರಣ ದಾಖಲು

    September 12, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.