Close Menu
    What's Hot

    ಮಲ್ಪೆ: ನಿಗೂಢ ಪಾಪ್‌ಅಪ್ ಸಂದೇಶದ ಮೂಲಕ ಮೊಬೈಲ್ ಹ್ಯಾಕ್; ಎರಡು ಬ್ಯಾಂಕ್ ಖಾತೆಗಳಿಂದ ₹3.03 ಲಕ್ಷ ಹಣ ವರ್ಗಾವಣೆ

    November 14, 2026

    ಪುತ್ತೂರು: 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸುಲಿಗೆ ಪ್ರಕರಣದ ಆರೋಪಿಯ ಬಂಧನ

    November 14, 2026

    ಅಮೆರಿಕ: ಮಿಸ್ಸಿಸ್ಸಿಪ್ಪಿ ನದಿಯಲ್ಲಿ ಕ್ರೂಸ್ ಹಡಗಿಗೆ ಟ್ಯಾಂಕರ್ ಡಿಕ್ಕಿ; ಹಡಗು ಪಲ್ಟಿ, 32 ಮಂದಿಗೆ ಗಾಯ

    November 14, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಮಂಗಳೂರಿನ ಧಕ್ಕೆಗೆ ಸಿಎಂ ದಿಢೀರ್ ಭೇಟಿ; ಮೀನು ಮಾರಾಟ ಬಂದ್ ಮಾಡಿಸಿದ್ದಕ್ಕೆ ಅಧಿಕಾರಿಗಳ ವಿರುದ್ಧ ಗರಂ
    ಕರಾವಳಿ ಸುದ್ದಿ

    ಮಂಗಳೂರಿನ ಧಕ್ಕೆಗೆ ಸಿಎಂ ದಿಢೀರ್ ಭೇಟಿ; ಮೀನು ಮಾರಾಟ ಬಂದ್ ಮಾಡಿಸಿದ್ದಕ್ಕೆ ಅಧಿಕಾರಿಗಳ ವಿರುದ್ಧ ಗರಂ

    adminBy adminSeptember 19, 2026No Comments2 Mins Read

    ಮಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಬೆಳಿಗ್ಗೆ 6 ಗಂಟೆಗೆ ಸಚಿವ ಯು.ಟಿ. ಖಾದರ್ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಮಂಗಳೂರಿನ ಮೀನುಗಾರಿಕಾ ಬಂದರು (ಧಕ್ಕೆ) ಮತ್ತು ಅಳಿವೆಬಾಗಿಲಿಗೆ ದಿಢೀರ್ ಭೇಟಿ ನೀಡಿ, ವಾಸ್ತವ ಪರಿಸ್ಥಿತಿಯ ಖುದ್ದು ಪರಿಶೀಲನೆ ನಡೆಸಿದರು. ಖುದ್ದು ಬೋಟ್‌ ಹತ್ತಿ ಸಮುದ್ರ ಹಾಗೂ ಅಳಿವೆಬಾಗಿಲಿಗೆ ತೆರಳಿದ ಸಿಎಂ, ಇತ್ತೀಚೆಗೆ ಹೂಳು ತುಂಬಿ ಬೋಟ್ ಮುಳುಗಡೆಯಾಗಿದ್ದ ದುರಂತದ ಸ್ಥಳವನ್ನು ವೀಕ್ಷಿಸಿದರು. ಬಳಿಕ ಅಧಿಕಾರಿಗಳು ಬಿಡಿಸಿದ ಬ್ಲೂಪ್ರಿಂಟ್ ಪರಿಶೀಲಿಸಿ ಧಕ್ಕೆ ವಿಸ್ತರಣೆ ಮತ್ತು ಜೆಟ್ಟಿ ಅಭಿವೃದ್ಧಿ ಕಾಮಗಾರಿಗಳ ಮಾಹಿತಿ ಪಡೆದರು. ಮೀನು ಮಾರುಕಟ್ಟೆಗೆ ಭೇಟಿ ನೀಡಿದ ವೇಳೆ, ಸ್ಥಳೀಯರು ಹಿಡಿದಿದ್ದ ಬೃಹತ್ ಗಾತ್ರದ ಅಂಜಲ್ (ಸುರ್ಮೆ) ಮೀನುಗಳನ್ನು ಕೈಯಲ್ಲಿ ಹಿಡಿದು ವೀಕ್ಷಿಸಿ ವ್ಯಾಪಾರಿಗಳ ಕ್ಷೇಮ ವಿಚಾರಿಸಿದರು.

    ತಮ್ಮ ಭೇಟಿಯ ಹಿನ್ನೆಲೆಯಲ್ಲಿ ಧಕ್ಕೆಯಲ್ಲಿ ಸಾರ್ವಜನಿಕ ಮೀನು ಮಾರಾಟ ಮತ್ತು ದೈನಂದಿನ ವಹಿವಾಟನ್ನು ಪೊಲೀಸರು ಹಾಗೂ ಅಧಿಕಾರಿಗಳು ಸ್ಥಗಿತಗೊಳಿಸಿದ್ದನ್ನು ಕಂಡು ಸಿಎಂ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ನನಗೆ ಯಾವುದೇ ಸೆಕ್ಯೂರಿಟಿ ಅಗತ್ಯವಿಲ್ಲ. ಇಲ್ಲಿನ ನೈಜ ವಹಿವಾಟು ಹಾಗೂ ಜನರ ತೊಂದರೆಗಳನ್ನು ನೇರವಾಗಿ ನೋಡಲು ಬಂದಿದ್ದೆ. ಆದರೆ ಅಧಿಕಾರಿಗಳು ಇಡೀ ಧಕ್ಕೆಯನ್ನೇ ಬಂದ್ ಮಾಡಿಸಿದ್ದಾರೆ. ಈ ಕೃತ್ಯದ ಬಗ್ಗೆ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಕಮಿಷನರ್ ಅವರಿಂದ ವರದಿ ಕೇಳಿದ್ದೇನೆ. ವ್ಯಾಪಾರ ಬಂದ್ ಮಾಡಿಸಿದ ಅಧಿಕಾರಿಗಳು ಯಾರೇ ಆಗಿದ್ದರೂ ಅವರನ್ನು ಇಂದೇ ಅಮಾನತು ಮಾಡುತ್ತೇವೆ” ಎಂದು ಮಾಧ್ಯಮಗಳ ಮುಂದೆ ಗುಡುಗಿದರು.

    ಶಾಶ್ವತ ಡ್ರೆಜ್ಜಿಂಗ್ ವ್ಯವಸ್ಥೆ: ಅಳಿವೆಬಾಗಿಲಿನ ಹೂಳು ತೆರವುಗೊಳಿಸಲು ಸರ್ಕಾರವೇ ಡ್ರೆಜ್ಜರ್ ಯಂತ್ರವನ್ನು ಲೀಸ್‌ಗೆ ಪಡೆಯುವುದು ಅಥವಾ ಸ್ವಂತವಾಗಿ ಖರೀದಿಸುವ ಬಗ್ಗೆ ಶೀಘ್ರವೇ ತೀರ್ಮಾನಿಸಲಾಗುವುದು. ಹೂಳನ್ನು ಜಾಗ ವಿಸ್ತರಣೆಗೆ ಬಳಸುವ ಕುರಿತು ಕೇಂದ್ರದ ತಾಂತ್ರಿಕ ಸಮಿತಿ ಸಲಹೆ ಪಡೆಯಲಾಗುವುದು. ಮೀನುಗಾರರಿಗೆ ಮೂಲಸೌಕರ್ಯ: ಮೀನುಗಾರ ಮಹಿಳೆಯರಿಗೆ ಸುಸಜ್ಜಿತ ಶೌಚಾಲಯ, ಪ್ರಾಥಮಿಕ ಆರೋಗ್ಯ ತಪಾಸಣಾ ಕೇಂದ್ರ ಹಾಗೂ ಸಮುದ್ರದಲ್ಲಿ ತುರ್ತು ಸೇವೆಗೆ ಬೋಟ್ ಆಂಬುಲೆನ್ಸ್ ವ್ಯವಸ್ಥೆ.

    ಒತ್ತುವರಿ ತೆರವು: ಧಕ್ಕೆ ಸುತ್ತಮುತ್ತ ರಸ್ತೆ ಬ್ಲಾಕ್ ಮಾಡಿ ಅಕ್ರಮವಾಗಿ ಕಾಂಪೌಂಡ್ ಹಾಕಿಕೊಂಡು ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಜಾಗಗಳನ್ನು ಮುಲಾಜಿಲ್ಲದೆ ವಶಪಡಿಸಿಕೊಳ್ಳಲು ಆದೇಶ.

    ಫಿಶರೀಸ್ ವಿವಿ ಉನ್ನತೀಕರಣ: ಮಂಗಳೂರಿನ ಫಿಶರೀಸ್ ಕಾಲೇಜನ್ನು ವಿಶ್ವವಿದ್ಯಾಲಯವಾಗಿ ಉನ್ನತೀಕರಿಸಿ, ಪ್ರವೇಶ ಮಿತಿಯನ್ನು 200 ಸೀಟುಗಳಿಗೆ ಹೆಚ್ಚಿಸಲು ಸಂಪುಟ ಸಭೆಯಲ್ಲಿ ನಿರ್ಧಾರ.

    ಕಸ್ತೂರಿ ರಂಗನ್ ವರದಿ ವಿರುದ್ಧ ಅಧಿವೇಶನ: ಕಸ್ತೂರಿ ರಂಗನ್ ವರದಿಯಿಂದ ಮಲೆನಾಡು ಹಾಗೂ ಕರಾವಳಿ ಜನರಿಗೆ ಅನ್ಯಾಯವಾಗುತ್ತಿದ್ದು, ಈ ಕುರಿತು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲು ಸೋಮವಾರ ವಿಧಾನಸಭೆಯಲ್ಲಿ ವಿಶೇಷ ಅಧಿವೇಶನ ಕರೆಯಲಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.

     

     




    #dakshinakannada
    Previous Articleಮಂಗಳೂರು: ಮ್ಯಾಟ್ರಿಮೊನಿ ಆ್ಯಪ್ ಮೂಲಕ ಪರಿಚಯ; ಮದುವೆ ನೆಪದಲ್ಲಿ ಮಹಿಳೆಗೆ ₹1.91 ಲಕ್ಷ ವಂಚನೆ
    Next Article ಕಟಪಾಡಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ

    Related Posts

    ಮಲ್ಪೆ: ನಿಗೂಢ ಪಾಪ್‌ಅಪ್ ಸಂದೇಶದ ಮೂಲಕ ಮೊಬೈಲ್ ಹ್ಯಾಕ್; ಎರಡು ಬ್ಯಾಂಕ್ ಖಾತೆಗಳಿಂದ ₹3.03 ಲಕ್ಷ ಹಣ ವರ್ಗಾವಣೆ

    November 14, 2026

    ಪುತ್ತೂರು: 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸುಲಿಗೆ ಪ್ರಕರಣದ ಆರೋಪಿಯ ಬಂಧನ

    November 14, 2026

    ಸುಬ್ರಹ್ಮಣ್ಯ: 26 ವರ್ಷಗಳ ಹಿಂದಿನ ಕೊಲೆ ಪ್ರಕರಣದ ಆರೋಪಿ ಕೇರಳದಲ್ಲಿ ಬಂಧನ; ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ

    November 14, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಲ್ಪೆ: ನಿಗೂಢ ಪಾಪ್‌ಅಪ್ ಸಂದೇಶದ ಮೂಲಕ ಮೊಬೈಲ್ ಹ್ಯಾಕ್; ಎರಡು ಬ್ಯಾಂಕ್ ಖಾತೆಗಳಿಂದ ₹3.03 ಲಕ್ಷ ಹಣ ವರ್ಗಾವಣೆ

    November 14, 2026

    ಪುತ್ತೂರು: 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸುಲಿಗೆ ಪ್ರಕರಣದ ಆರೋಪಿಯ ಬಂಧನ

    November 14, 2026

    ಅಮೆರಿಕ: ಮಿಸ್ಸಿಸ್ಸಿಪ್ಪಿ ನದಿಯಲ್ಲಿ ಕ್ರೂಸ್ ಹಡಗಿಗೆ ಟ್ಯಾಂಕರ್ ಡಿಕ್ಕಿ; ಹಡಗು ಪಲ್ಟಿ, 32 ಮಂದಿಗೆ ಗಾಯ

    November 14, 2026

    ದೇಶದ ರಕ್ಷಣಾ ರಹಸ್ಯಗಳನ್ನೇ ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಆರೋಪ; ವಾಯುಪಡೆಯ ಅಧಿಕಾರಿಯ ವಿರುದ್ಧ ಪೊಲೀಸರಿಂದ ಚಾರ್ಜ್‌ಶೀಟ್ ದಾಖಲು

    November 14, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.