ಮಂಗಳೂರು: ಮಂಗಳೂರಿನಲ್ಲಿ ಶುಕ್ರವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಕರಾವಳಿ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂಜೆ ಬಂಟ್ವಾಳಕ್ಕೆ ತೆರಳಿ, ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಸಚಿವ ಸಂಪುಟ ಸಭೆ ಮುಗಿದ ಬಳಿಕ ಹೆಬ್ರಿಗೆ ತೆರಳಿದ್ದ ಮುಖ್ಯಮಂತ್ರಿಗಳು, ಅಲ್ಲಿಂದ ಮೇರಿಹಿಲ್ ಹೆಲಿಪ್ಯಾಡ್ ಮೂಲಕ ಮಂಗಳೂರಿಗೆ ಹಿಂತಿರುಗಿದರು. ಬಳಿಕ ನೇರವಾಗಿ ರಸ್ತೆ ಮಾರ್ಗವಾಗಿ ಬಂಟ್ವಾಳದಲ್ಲರುವ ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ಭೇಟಿ ನೀಡಿದರು.
ಮನೆಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಹಿರಿಯ ನಾಯಕ ಜನಾರ್ದನ ಪೂಜಾರಿ ಅವರು ಸಾಲು ಹೊದಿಸಿ, ಶುಭ ಹಾರೈಸಿ ಆತ್ಮೀಯವಾಗಿ ಅಭಿನಂದಿಸಿದರು. ಈ ವೇಳೆ ಪೂಜಾರಿ ಅವರ ಯೋಗಕ್ಷೇಮ ವಿಚಾರಿಸಿದ ಮುಖ್ಯಮಂತ್ರಿಗಳು, ಅವರ ನಿವಾಸದಲ್ಲೇ ಫಲಾಹಾರ ಸ್ವೀಕರಿಸಿ ಬಳಿಕ ಮಂಗಳೂರಿಗೆ ನಿರ್ಮಲವಾಗಿ ಹಿಂತಿರುಗಿದರು.








