Close Menu
    What's Hot

    ಲಾಟರಿ ಅದೃಷ್ಟ ಕೈಕೊಟ್ಟಿದ್ದಕ್ಕೆ ಆಕ್ರೋಶ; ಮಹಿಳಾ ಮಾರಾಟಗಾರ್ತಿಗೆ ಚಾಕು ಇರಿತ

    September 28, 2026

    ಸೌಜನ್ಯಾ ಪ್ರಕರಣದ SIT ತನಿಖೆಗೆ ಕಲ್ಲಡ್ಕ ಪ್ರಭಾಕರ ಭಟ್‌ ಪ್ರಶ್ನೆ; ಅಧಿಕಾರಿಗಳ ಆಯ್ಕೆ ಬಗ್ಗೆ ಅನುಮಾನ

    September 28, 2026

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಭೀಕರ ಅಪಘಾತದ ಬಳಿಕ ರಮಾನಾಥ ರೈ ಆಸ್ಪತ್ರೆಯಿಂದ ಡಿಸ್ಚಾರ್ಜ್; ಮನೆಯಲ್ಲಿ ವಿಶ್ರಾಂತಿ 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ
    ಕರಾವಳಿ ಸುದ್ದಿ

    ಭೀಕರ ಅಪಘಾತದ ಬಳಿಕ ರಮಾನಾಥ ರೈ ಆಸ್ಪತ್ರೆಯಿಂದ ಡಿಸ್ಚಾರ್ಜ್; ಮನೆಯಲ್ಲಿ ವಿಶ್ರಾಂತಿ 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ

    adminBy adminSeptember 23, 2026No Comments1 Min Read

    ಮಂಗಳೂರು : ಕಾರ್ಕಳದ ಸಾಣೂರು ಬಳಿ ಭಾನುವಾರ ನಡೆದ ಭೀಕರ ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ಅಪಘಾತದಲ್ಲಿ ಗಾಯಗೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಬಿ. ರಮಾನಾಥ ರೈ ಅವರು ಚೇತರಿಸಿಕೊಂಡು ಮಂಗಳವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಮರಳಿದ್ದಾರೆ.

    ಮಂಗಳೂರಿನ ಯೆನೆಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೈ ಅವರಿಗೆ ಸಂಪೂರ್ಣ ಗುಣಮುಖರಾಗಲು ಮನೆಯಲ್ಲೇ 15 ದಿನಗಳ ಕಾಲ ಕಡ್ಡಾಯ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.
    ಪಂಚಾಯತ್ ಸದಸ್ಯರೊಬ್ಬರ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಮಾನಾಥ್ ರೈ ಅವರು ತಮ್ಮ ಆಪ್ತರೊಂದಿಗೆ ಕಾರ್ಕಳಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 169ರ ಸಾಣೂರು ಶ್ರೀರಾಮ ಮಂದಿರ ಡಿವೈಡರ್ ಕ್ರಾಸ್ ಬಳಿ ಎದುರಿನಿಂದ ಬಂದ ಖಾಸಗಿ ಬಸ್ಸೊಂದು ಇವರ ಕಾರಿಗೆ ಭೀಕರವಾಗಿ ಡಿಕ್ಕಿ ಹೊಡೆದಿತ್ತು.

    ಅಪಘಾತದಲ್ಲಿ ಗಾಯಗೊಂಡಿದ್ದ ಕಾರು ಚಾಲಕ ಅಭಿಷೇಕ್ ಹಾಗೂ ಆಪ್ತ ಸಹಾಯಕ ಚರಣ್ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕಾಲಿಗೆ ತೀವ್ರ ಪೆಟ್ಟಾಗಿದ್ದ ಮತ್ತೋರ್ವ ಆಪ್ತ ಸಹಾಯಕ ಡೆಂಜಿಲ್ ನೊರೊನ್ಹಾ ಅವರಿಗೆ ಮಂಗಳವಾರ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ರಮಾನಾಥ್ ರೈ ಅವರು ಅಪಾಯದಿಂದ ಪಾರಾಗಿದ್ದು, ಮನೆಗೆ ವಾಪಸಾಗಿರುವ ಸುದ್ದಿ ತಿಳಿದು ಕಾರ್ಯಕರ್ತರು ಹಾಗೂ ಬೆಂಬಲಿಗರು ನಿಟ್ಟುಸಿರು ಬಿಟ್ಟಿದ್ದಾರೆ. ಆಸ್ಪತ್ರೆಯಲ್ಲಿದ್ದ ವೇಳೆ ಹಲವು ಸಂಸದರು, ಶಾಸಕರು, ವಿವಿಧ ಪಕ್ಷಗಳ ರಾಜಕೀಯ ಧುರೀಣರು ಹಾಗೂ ನೂರಾರು ಅಭಿಮಾನಿಗಳು ಆಗಮಿಸಿ ಅವರ ಆರೋಗ್ಯ ವಿಚಾರಿಸಿದ್ದರು.




    #dakshinakannada
    Previous Articleಧಾರ್ಮಿಕ ಕಾರಣಕ್ಕೆ ವಂದೇ ಮಾತರಂ ಹಾಡದಿದ್ದರೆ ಕ್ರಿಮಿನಲ್ ಕ್ರಮ ಬೇಡ; ಸುಪ್ರೀಂ ಕೋರ್ಟ್
    Next Article ಕಟಪಾಡಿ ಕಲ್ಲಾಪು ಬಳಿ ಸರಣಿ ಅಪಘಾತ; ನಾಲ್ಕು ಕಾರುಗಳು ಪರಸ್ಪರ ಡಿಕ್ಕಿ

    Related Posts

    ಸೌಜನ್ಯಾ ಪ್ರಕರಣದ SIT ತನಿಖೆಗೆ ಕಲ್ಲಡ್ಕ ಪ್ರಭಾಕರ ಭಟ್‌ ಪ್ರಶ್ನೆ; ಅಧಿಕಾರಿಗಳ ಆಯ್ಕೆ ಬಗ್ಗೆ ಅನುಮಾನ

    September 28, 2026

    ರಹಿಮಾನ್ ಹತ್ಯೆ ಪ್ರಕರಣದಲ್ಲಿ ಹೊಸ ತಿರುವು; ಎಸ್‌ಪಿಯನ್ನೇ ಮಂಪರು ಪರೀಕ್ಷೆಗೆ ಒಳಪಡಿಸಿ ಎಂದ ಕಲ್ಲಡ್ಕ ಪ್ರಭಾಕರ ಭಟ್

    September 28, 2026

    ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ಕಳಿಯಾಟ ಮಹೋತ್ಸವದ ಸಿದ್ಧತೆಗೆ ಸಮಿತಿ ರಚನಾ ಸಭೆ

    September 28, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಲಾಟರಿ ಅದೃಷ್ಟ ಕೈಕೊಟ್ಟಿದ್ದಕ್ಕೆ ಆಕ್ರೋಶ; ಮಹಿಳಾ ಮಾರಾಟಗಾರ್ತಿಗೆ ಚಾಕು ಇರಿತ

    September 28, 2026

    ಸೌಜನ್ಯಾ ಪ್ರಕರಣದ SIT ತನಿಖೆಗೆ ಕಲ್ಲಡ್ಕ ಪ್ರಭಾಕರ ಭಟ್‌ ಪ್ರಶ್ನೆ; ಅಧಿಕಾರಿಗಳ ಆಯ್ಕೆ ಬಗ್ಗೆ ಅನುಮಾನ

    September 28, 2026

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026

    ರಹಿಮಾನ್ ಹತ್ಯೆ ಪ್ರಕರಣದಲ್ಲಿ ಹೊಸ ತಿರುವು; ಎಸ್‌ಪಿಯನ್ನೇ ಮಂಪರು ಪರೀಕ್ಷೆಗೆ ಒಳಪಡಿಸಿ ಎಂದ ಕಲ್ಲಡ್ಕ ಪ್ರಭಾಕರ ಭಟ್

    September 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕೆಪಿಎಸ್‌ಸಿ ನೇಮಕಾತಿ ಅಕ್ರಮ; ಇಡಿ ದಾಳಿಯಲ್ಲಿ ಸಿಕ್ಕ ಡೈರಿಯಲ್ಲಿ ಲಕ್ಷಾಂತರ ಹಣದ ಲೆಕ್ಕ ಪತ್ತೆ

    September 28, 2026

    15 ದಿನಗಳಲ್ಲಿ 51 ಶಾಲೆಗಳಿಗೆ ಭೇಟಿ 15ರ ಬಾಲಕಿಯ ಸಾಧನೆ ವಿಶ್ವ ದಾಖಲೆ ; ಪರೀಕ್ಷಾ ಒತ್ತಡದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ ವಿಷ್ಣುಪ್ರಿಯಾ

    September 28, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.