Close Menu
    What's Hot

    ಮಾಣಿ ಬಳಿ ಬೆಳಂಬೆಳಗ್ಗೆ ಭೀಕರ ಅಪಘಾತ; ಓರ್ವ ಮಹಿಳೆ ಮೃತ್ಯು, ಮೂವರು ಗಂಭೀರ

    September 28, 2026

    ಉಡುಪಿ: ಬ್ಯಾಂಕ್ ಅಧಿಕಾರಿ ಹೆಸರಿನಲ್ಲಿ ಮೋಸ; APK ಫೈಲ್ ಕಳುಹಿಸಿ ₹17.50 ಲಕ್ಷ ಎಗರಿಸಿದ ಖದೀಮರು

    September 28, 2026

    ಬ್ಯಾಂಕ್ ಮುಷ್ಕರ ಮುಂದೂಡಿದ UFBU; ಶಾಖೆಗಳು ಎಂದಿನಂತೆ ಕಾರ್ಯನಿರ್ವಹಣೆ

    September 28, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮಂಗಳೂರು: ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡಿದ್ದ MDMA ಜಾಲ ಪತ್ತೆ; ₹24 ಲಕ್ಷ ಮೌಲ್ಯದ MDMA ಸಹಿತ ಮೂವರ ಬಂಧನ
    ಅಪರಾಧ

    ಮಂಗಳೂರು: ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡಿದ್ದ MDMA ಜಾಲ ಪತ್ತೆ; ₹24 ಲಕ್ಷ ಮೌಲ್ಯದ MDMA ಸಹಿತ ಮೂವರ ಬಂಧನ

    adminBy adminSeptember 28, 2026No Comments2 Mins Read

    ಮಂಗಳೂರು: ನಗರದಲ್ಲಿ ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಜಾಲವನ್ನು ಮಂಗಳೂರು ನಗರ ಅಪರಾಧ ವಿಭಾಗದ (CCB) ಪೊಲೀಸರು ಭೇದಿಸಿದ್ದಾರೆ. ಭರ್ಜರಿ ಕಾರ್ಯಾಚರಣೆ ನಡೆಸಿದ ಸಿಸಿಬಿ ತಂಡ, ₹24 ಲಕ್ಷ ಮೌಲ್ಯದ 240 ಗ್ರಾಂ ಎಂಡಿಎಂಎ ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಹೆಡೆಮುರಿ ಕಟ್ಟಿದೆ.

    ಉಳ್ಳಾಲ ತಾಲೂಕಿನ ಮುಡಿಪು ನಿವಾಸಿಗಳಾದ ನವಾಜ್ ಅಲಿಯಾಸ್ ನವ್ವಾ ಅಲಿಯಾಸ್ ಮುಡಿಪು ನವಾಜ್ (35), ಮೊಹಮ್ಮದ್ ಆರೀಫ್ ಎನ್ (36) ಹಾಗೂ ಲಾಯ್ಡ್ ಡಿಸೊಜಾ (35) ಬಂಧಿತ ಆರೋಪಿಗಳು.
    ಬೆಂಗಳೂರು ನಗರದಿಂದ ಭಾರಿ ಪ್ರಮಾಣದಲ್ಲಿ ನಿಷೇಧಿತ MDMA ಮಾದಕವಸ್ತುವನ್ನು ಖರೀದಿಸಿಕೊಂಡು ಬಂದು, ಮಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯಾರ್ಥಿಗಳು ಮತ್ತು ಯುವಕರನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿತ್ತು.

    ಈ ಮಾಹಿತಿಯನ್ನಾಧರಿಸಿ ಸೆಪ್ಟೆಂಬರ್ 26, 2026 ರಂದು ಸಂಜೆ ಉಳ್ಳಾಲ ತಾಲೂಕಿನ ಮುಡಿಪು ಕಾಯರ್ ಗೋಳಿ ಕ್ರಾಸ್ ಬಳಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
    ಬಂಧಿತರಿಂದ ₹24,00,000 ಮೌಲ್ಯದ 240 ಗ್ರಾಂ MDMA, 4 ಮೊಬೈಲ್ ಫೋನ್‌ಗಳು ಹಾಗೂ ಡ್ರಗ್ಸ್ ಸಾಗಾಟಕ್ಕೆ ಬಳಸಿದ್ದ ಟೆಂಪೋ ವಾಹನವನ್ನು ಜಪ್ತಿ ಮಾಡಲಾಗಿದೆ. ವಶಪಡಿಸಿಕೊಂಡ ಒಟ್ಟು ಸೊತ್ತುಗಳ ಅಂದಾಜು ಮೌಲ್ಯ ₹29,80,000 ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

    ಬಂಧಿತ ಪ್ರಮುಖ ಆರೋಪಿ ನವಾಜ್ ಅಲಿಯಾಸ್ ಮುಡಿಪು ನವಾಜ್ ಹಳೆಯ ಅಪರಾಧ ಹಿನ್ನೆಲೆಯುಳ್ಳವನಾಗಿದ್ದು, ಈತನ ವಿರುದ್ಧ ಮಂಗಳೂರು ನಗರದ ವಿವಿಧ ಠಾಣೆಗಳಲ್ಲಿ ಹಲ್ಲೆ, ಜೀವ ಬೆದರಿಕೆ, ಕೊಲೆಯತ್ನ, ಅಪಹರಣ, ಅತ್ಯಾಚಾರ, ವಂಚನೆ, ದನಗಳ್ಳತನ ಹಾಗೂ ಮಾದಕದ್ರವ್ಯ ಮಾರಾಟ ಸೇರಿದಂತೆ ಬರೋಬ್ಬರಿ 16 ಗಂಭೀರ ಪ್ರಕರಣಗಳು ದಾಖಲಾಗಿವೆ.

    ಕೊಣಾಜೆ ಠಾಣೆಯಲ್ಲಿ 12 ಪ್ರಕರಣಗಳು
    ಉಳ್ಳಾಲ ಠಾಣೆಯಲ್ಲಿ 2 ಪ್ರಕರಣಗಳು
    ಮುಲ್ಕಿ ಹಾಗೂ ಸುರತ್ಕಲ್ ಠಾಣೆಯಲ್ಲಿ ತಲಾ 1 ಪ್ರಕರಣಗಳು

    ಮಾದಕವಸ್ತು ಮಾರಾಟಕ್ಕೆ ಸಂಬಂಧಿಸಿದಂತೆ ಈತನ ವಿರುದ್ಧ ಈ ಹಿಂದೆಯೇ ಕೊಣಾಜೆ ಹಾಗೂ ಉಳ್ಳಾಲ ಠಾಣೆಗಳಲ್ಲಿ ತಲಾ ಎರಡು ಪ್ರಕರಣಗಳು ದಾಖಲಾಗಿದ್ದವು.
    ಈ ಡ್ರಗ್ಸ್ ಸಾಗಾಟ ಮತ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಉಳಿದ ಆರೋಪಿಗಳ ಪತ್ತೆಗಾಗಿ ಸಿಸಿಬಿ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿ ಶೋಧ ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ.




    #crime #dakshinakannada
    Previous Articleಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರದ ಸಂಚು; ಮತ್ತೊಬ್ಬನ ಕೊಲೆಗೆ ₹24 ಲಕ್ಷ ಸುಪಾರಿ ಆರೋಪ
    Next Article ಬ್ಯಾಂಕ್ ಮುಷ್ಕರ ಮುಂದೂಡಿದ UFBU; ಶಾಖೆಗಳು ಎಂದಿನಂತೆ ಕಾರ್ಯನಿರ್ವಹಣೆ

    Related Posts

    ಮಾಣಿ ಬಳಿ ಬೆಳಂಬೆಳಗ್ಗೆ ಭೀಕರ ಅಪಘಾತ; ಓರ್ವ ಮಹಿಳೆ ಮೃತ್ಯು, ಮೂವರು ಗಂಭೀರ

    September 28, 2026

    ಉಡುಪಿ: ಬ್ಯಾಂಕ್ ಅಧಿಕಾರಿ ಹೆಸರಿನಲ್ಲಿ ಮೋಸ; APK ಫೈಲ್ ಕಳುಹಿಸಿ ₹17.50 ಲಕ್ಷ ಎಗರಿಸಿದ ಖದೀಮರು

    September 28, 2026

    ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರದ ಸಂಚು; ಮತ್ತೊಬ್ಬನ ಕೊಲೆಗೆ ₹24 ಲಕ್ಷ ಸುಪಾರಿ ಆರೋಪ

    September 27, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಾಣಿ ಬಳಿ ಬೆಳಂಬೆಳಗ್ಗೆ ಭೀಕರ ಅಪಘಾತ; ಓರ್ವ ಮಹಿಳೆ ಮೃತ್ಯು, ಮೂವರು ಗಂಭೀರ

    September 28, 2026

    ಉಡುಪಿ: ಬ್ಯಾಂಕ್ ಅಧಿಕಾರಿ ಹೆಸರಿನಲ್ಲಿ ಮೋಸ; APK ಫೈಲ್ ಕಳುಹಿಸಿ ₹17.50 ಲಕ್ಷ ಎಗರಿಸಿದ ಖದೀಮರು

    September 28, 2026

    ಬ್ಯಾಂಕ್ ಮುಷ್ಕರ ಮುಂದೂಡಿದ UFBU; ಶಾಖೆಗಳು ಎಂದಿನಂತೆ ಕಾರ್ಯನಿರ್ವಹಣೆ

    September 28, 2026

    ಮಂಗಳೂರು: ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡಿದ್ದ MDMA ಜಾಲ ಪತ್ತೆ; ₹24 ಲಕ್ಷ ಮೌಲ್ಯದ MDMA ಸಹಿತ ಮೂವರ ಬಂಧನ

    September 28, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಟೆಲಿಗ್ರಾಂ ಗ್ರೂಪ್‌ನಲ್ಲಿ ಭಯೋತ್ಪಾದನಾ ಚರ್ಚೆ ಗುಪ್ತಚರ ಇಲಾಖೆಯ ನಿಗಾ; ಇಬ್ಬರು ಆರೋಪಿಗಳ ಬಂಧನ

    September 26, 2026

    ಗಿಟಾರ್‌ಗೂ ಬಿತ್ತು ಹೆಲ್ಮೆಟ್ ದಂಡ; ಬೆಂಗಳೂರು AI ಕ್ಯಾಮೆರಾ ಯಡವಟ್ಟು ವೈರಲ್

    September 26, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.