ಮಲ್ಪೆ: ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಆಂಧ್ರಪ್ರದೇಶ ಮೂಲದ ಪರಮೇಶ್ ಎಂದು ಗುರುತಿಸಲಾಗಿದೆ. ಗುಜರಿ ಸಂಗ್ರಹಿಸುವ ಕೆಲಸ ಮಾಡುತ್ತಿದ್ದ ಪರಮೇಶ್, ಪ್ರತಿದಿನ ಮಲಗುತ್ತಿದ್ದ ಸ್ಥಳದಲ್ಲೇ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಮಲ್ಪೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಕೊಲೆಗೆ ಕಾರಣ ಹಾಗೂ ಆರೋಪಿಗಳ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.








