Close Menu
    What's Hot

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026

    ಉಡುಪಿಯಲ್ಲಿ ನಾಪತ್ತೆಯಾದ ಖಾಸಗಿ ಬಸ್ ಕೆಲವೇ ಗಂಟೆಗಳಲ್ಲಿ ಪತ್ತೆ; ಕಳ್ಳರಿಗಾಗಿ ಪೊಲೀಸರ ಶೋಧ

    September 30, 2026

    ಕರಂಗಲ್ಪಾಡಿ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಗೂಡ್ಸ್ ಆಟೋ ಚಾಲಕ ಸಾವು

    September 30, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಉಡುಪಿಯಲ್ಲಿ ನಾಪತ್ತೆಯಾದ ಖಾಸಗಿ ಬಸ್ ಕೆಲವೇ ಗಂಟೆಗಳಲ್ಲಿ ಪತ್ತೆ; ಕಳ್ಳರಿಗಾಗಿ ಪೊಲೀಸರ ಶೋಧ
    ಅಪರಾಧ

    ಉಡುಪಿಯಲ್ಲಿ ನಾಪತ್ತೆಯಾದ ಖಾಸಗಿ ಬಸ್ ಕೆಲವೇ ಗಂಟೆಗಳಲ್ಲಿ ಪತ್ತೆ; ಕಳ್ಳರಿಗಾಗಿ ಪೊಲೀಸರ ಶೋಧ

    adminBy adminSeptember 30, 2026No Comments1 Min Read

    ಉಡುಪಿ : ನಗರದ ಚಿತ್ಪಾಡಿಯ ಹನುಮಾನ್ ಗ್ಯಾರೇಜ್ ಹಿಂಭಾಗದಲ್ಲಿ ನಿಲ್ಲಿಸಲಾಗಿದ್ದ ಸುಮಾರು ಖಾಸಗಿ ಬಸ್ಸನ್ನು ಕದ್ದೊಯ್ದಿದ್ದ ಪ್ರಕರಣವನ್ನು ಉಡುಪಿ ನಗರ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕೆಲವೇ ಗಂಟೆಗಳಲ್ಲಿ ಭೇದಿಸಿದ್ದಾರೆ. ಕಳವಾಗಿದ್ದ ಬಸ್ಸನ್ನು ಮುದರಂಗಡಿ ಸಮೀಪದ ಮುದ್ದಾಡಿ ಎಂಬಲ್ಲಿ ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಳ್ಳಲಾಗಿದೆ.

    ಕುಂದಾಪುರದ ಕಟ್‌ಬೆಲ್ತೂರು ನಿವಾಸಿ ಕೃಷ್ಣ (51) ಎಂಬವರು ಈ ಖಾಸಗಿ ಬಸ್ಸಿನಲ್ಲಿ ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸೆಪ್ಟೆಂಬರ್ 28ರ ರಾತ್ರಿ ಸುಮಾರು 9:48ರ ವೇಳೆಗೆ ಬಸ್ ಚಾಲಕ ರಾಹೀಜ್ ಉಚ್ಚಿಲ ಅವರೊಂದಿಗೆ ಬಸ್ಸನ್ನು ಚಿತ್ಪಾಡಿಯ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದ ಗ್ಯಾರೇಜ್ ಬಳಿ ನಿಲ್ಲಿಸಿ, ರಾತ್ರಿ 10 ಗಂಟೆಗೆ ಇಬ್ಬರೂ ಮನೆಗೆ ತೆರಳಿದ್ದರು. ಮರುದಿನ ಬೆಳಿಗ್ಗೆ (ಸೆಪ್ಟೆಂಬರ್ 29) ಕರ್ತವ್ಯಕ್ಕೆ ಹಾಜರಾಗಲು ಸ್ಥಳಕ್ಕೆ ಬಂದಾಗ ಅಲ್ಲಿ ನಿಲ್ಲಿಸಲಾಗಿದ್ದ ಬಸ್ ಕಾಣೆಯಾಗಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಬಸ್ ನಿರ್ವಾಹಕ ಕೃಷ್ಣ ನೀಡಿದ ದೂರಿನನ್ವಯ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 303(2) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

    ಪ್ರಕರಣ ದಾಖಲಿಸಿಕೊಂಡ ನಗರ ಠಾಣೆಯ ಪೊಲೀಸರು ತಕ್ಷಣವೇ ತನಿಖೆ ಚುರುಕುಗೊಳಿಸಿದರು. ತನಿಖೆಯ ವೇಳೆ ಸೆಪ್ಟೆಂಬರ್ 29ರ ಮುಂಜಾನೆ ಸುಮಾರು 2 ಗಂಟೆಯ ಸುಮಾರಿಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ಬಂದು ಬಸ್ಸನ್ನು ಕದ್ದೊಯ್ದಿರುವುದು ಪತ್ತೆಯಾಗಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಬಸ್ ತೆರಳಿದ ಮಾರ್ಗವನ್ನು ಬೆನ್ನಟ್ಟಿ, ಮುದರಂಗಡಿ ಸಮೀಪದ ಮುದ್ದಾಡಿ ಎಂಬ ಹಾಡಿಯಲ್ಲಿ ನಿಲ್ಲಿಸಲಾಗಿದ್ದ ಬಸ್ಸನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ. ಕೃತ್ಯ ಎಸಗಿ ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳ ಪತ್ತೆಗಾಗಿ ಉಡುಪಿ ನಗರ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

    #crime #udupi
    Previous Articleಕರಂಗಲ್ಪಾಡಿ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಗೂಡ್ಸ್ ಆಟೋ ಚಾಲಕ ಸಾವು
    Next Article ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    Related Posts

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026

    ಕರಂಗಲ್ಪಾಡಿ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಗೂಡ್ಸ್ ಆಟೋ ಚಾಲಕ ಸಾವು

    September 30, 2026

    ಪ್ರತಿಭಟನಾ ಸಭೆಯಲ್ಲಿ ನ್ಯಾಯಾಲಯದ ಪ್ರಕ್ರಿಯೆ ಬಗ್ಗೆ ತಪ್ಪು ಮಾಹಿತಿ ಆರೋಪ; ವಕೀಲರ ವಿರುದ್ಧ ಪ್ರಕರಣ ದಾಖಲು

    September 30, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026

    ಉಡುಪಿಯಲ್ಲಿ ನಾಪತ್ತೆಯಾದ ಖಾಸಗಿ ಬಸ್ ಕೆಲವೇ ಗಂಟೆಗಳಲ್ಲಿ ಪತ್ತೆ; ಕಳ್ಳರಿಗಾಗಿ ಪೊಲೀಸರ ಶೋಧ

    September 30, 2026

    ಕರಂಗಲ್ಪಾಡಿ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಗೂಡ್ಸ್ ಆಟೋ ಚಾಲಕ ಸಾವು

    September 30, 2026

    ಪ್ರತಿಭಟನಾ ಸಭೆಯಲ್ಲಿ ನ್ಯಾಯಾಲಯದ ಪ್ರಕ್ರಿಯೆ ಬಗ್ಗೆ ತಪ್ಪು ಮಾಹಿತಿ ಆರೋಪ; ವಕೀಲರ ವಿರುದ್ಧ ಪ್ರಕರಣ ದಾಖಲು

    September 30, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026

    ಕುಂದಾಪುರ: “ಸ್ವಲ್ಪ ನಿಧಾನವಾಗಿ ಮಾತನಾಡಿ” ಎಂದಿದ್ದಕ್ಕೆ ಸೋಡಾ ಬಾಟಲಿಯಿಂದ ಹಲ್ಲೆ; ನಾಲ್ವರ ವಿರುದ್ಧ ಕೇಸ್

    September 29, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.