Close Menu
    What's Hot

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026

    ಉಡುಪಿಯಲ್ಲಿ ನಾಪತ್ತೆಯಾದ ಖಾಸಗಿ ಬಸ್ ಕೆಲವೇ ಗಂಟೆಗಳಲ್ಲಿ ಪತ್ತೆ; ಕಳ್ಳರಿಗಾಗಿ ಪೊಲೀಸರ ಶೋಧ

    September 30, 2026

    ಕರಂಗಲ್ಪಾಡಿ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಗೂಡ್ಸ್ ಆಟೋ ಚಾಲಕ ಸಾವು

    September 30, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ
    ಅಪರಾಧ

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    adminBy adminSeptember 30, 2026No Comments1 Min Read

    ಕೊಲ್ಲೂರು : ಪತ್ನಿಗೆ ಇಂಜೆಕ್ಷನ್‌ ಮೂಲಕ ವಿಷ ನೀಡಿ ಕೊಲ್ಲಲು ಯತ್ನಿಸಿದ ಪ್ರಕರಣದ ಆರೋಪಿಗಳಾದ ಪತಿ ಹಾಗೂ ಆತನೊಂದಿಗೆ ಸಂಬಂಧ ಹೊಂದಿದ್ದ ಮಹಿಳೆ ಸೌಪರ್ಣಿಕಾ ನದಿ ಸಮೀಪ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೋಳಿಹೊಳೆ ಗ್ರಾಮದ ಚಾರ್ಸಾಲಿನಲ್ಲಿ ಮಂಗಳವಾರ ಬೆಳಕಿಗೆ ಬಂದಿದೆ. ಮೃತರನ್ನು ಗೋಳಿಹೊಳೆ ಚಾರ್ಸಾಲಿನ ನಿವಾಸಿ, ಆಟೋ ರಿಕ್ಷಾ ಚಾಲಕ ವಿಠ್ಠಲ ನಾಯ್ಕ (35) ಹಾಗೂ ಜಡ್ಕಲ್‌ನ ನಿವಾಸಿ ಭವ್ಯಾ ನಾಯ್ಕ ಅಲಿಯಾಸ್‌ ನಿಶ್ಮಿತಾ (33) ಎಂದು ಗುರುತಿಸಲಾಗಿದೆ.

    ಸುಮಾರು 20 ದಿನಗಳ ಹಿಂದೆ ವಿಠ್ಠಲ ನಾಯ್ಕ ತನ್ನ ಪತ್ನಿ ಶ್ಯಾಮಲಾ ಅವರಿಗೆ ಇಂಜೆಕ್ಷನ್ ಮೂಲಕ ವಿಷ ನೀಡಿ ಕೊಲೆ ಮಾಡಲು ಯತ್ನಿಸಿದ್ದನು. ಈ ಕೃತ್ಯಕ್ಕೆ ಭವ್ಯಾ ನಾಯ್ಕ ಸಾಥ್ ನೀಡಿದ್ದರೆನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಠ್ಠಲ ನಾಯ್ಕ ಮೊದಲ ಆರೋಪಿ (A1) ಹಾಗೂ ಭವ್ಯಾ ಎರಡನೇ ಆರೋಪಿಯಾಗಿದ್ದರು (A2). ವಿಷ ಪ್ರಾಶನದಿಂದ ತೀವ್ರ ಅಸ್ವಸ್ಥಗೊಂಡಿದ್ದ ಶ್ಯಾಮಲಾ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆದ ಅವರು ವಾರದ ಹಿಂದೆಯಷ್ಟೇ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ವಿಠ್ಠಲ್‌ ನಾಯ್ಕ ಮತ್ತು ಶ್ಯಾಮಲಾ ದಂಪತಿಗೆ 10 ವರ್ಷದ ಪುತ್ರ ಹಾಗೂ 2 ತಿಂಗಳ ಹಸುಗೂಸಿದೆ. ಭವ್ಯಾ ಅವರ ಪತಿ ಈ ಹಿಂದೆಯೇ ಮೃತಪಟ್ಟಿದ್ದರು ಎನ್ನಲಾಗಿದೆ.

    ಕೊಲೆಯತ್ನ ಪ್ರಕರಣ ದಾಖಲಾದ ಬಳಿಕ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದರು. ಆದರೆ ಇಬ್ಬರೂ ತಲೆಮರೆಸಿಕೊಂಡಿದ್ದರು. ಮಂಗಳವಾರ ಸೌಪರ್ಣಿಕಾ ನದಿ ಸಮೀಪದ ಗೋಳಿಹೊಳೆ ಚಾರ್ಸಾಲಿನ ಸುಸಜ್ಜಿತವಲ್ಲದ ಪ್ರದೇಶದಲ್ಲಿ ಇಬ್ಬರ ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದೆ. ಮೃತದೇಹಗಳ ಸ್ಥಿತಿಯನ್ನು ಗಮನಿಸಿದರೆ ಇಬ್ಬರೂ ಕೆಲವು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬೈಂದೂರು ಪೊಲೀಸರು, ಅಪರಾಧ ಸ್ಥಳ ತನಿಖಾ (SOCO) ತಂಡ ಹಾಗೂ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.




    #crime #karnataka
    Previous Articleಉಡುಪಿಯಲ್ಲಿ ನಾಪತ್ತೆಯಾದ ಖಾಸಗಿ ಬಸ್ ಕೆಲವೇ ಗಂಟೆಗಳಲ್ಲಿ ಪತ್ತೆ; ಕಳ್ಳರಿಗಾಗಿ ಪೊಲೀಸರ ಶೋಧ

    Related Posts

    ಉಡುಪಿಯಲ್ಲಿ ನಾಪತ್ತೆಯಾದ ಖಾಸಗಿ ಬಸ್ ಕೆಲವೇ ಗಂಟೆಗಳಲ್ಲಿ ಪತ್ತೆ; ಕಳ್ಳರಿಗಾಗಿ ಪೊಲೀಸರ ಶೋಧ

    September 30, 2026

    ಪ್ರತಿಭಟನಾ ಸಭೆಯಲ್ಲಿ ನ್ಯಾಯಾಲಯದ ಪ್ರಕ್ರಿಯೆ ಬಗ್ಗೆ ತಪ್ಪು ಮಾಹಿತಿ ಆರೋಪ; ವಕೀಲರ ವಿರುದ್ಧ ಪ್ರಕರಣ ದಾಖಲು

    September 30, 2026

    ‘ಏಕಪಕ್ಷೀಯ ನಿರ್ಧಾರ’ ಆರೋಪ; ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಸಮ್ಮತಿ

    September 29, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026

    ಉಡುಪಿಯಲ್ಲಿ ನಾಪತ್ತೆಯಾದ ಖಾಸಗಿ ಬಸ್ ಕೆಲವೇ ಗಂಟೆಗಳಲ್ಲಿ ಪತ್ತೆ; ಕಳ್ಳರಿಗಾಗಿ ಪೊಲೀಸರ ಶೋಧ

    September 30, 2026

    ಕರಂಗಲ್ಪಾಡಿ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಗೂಡ್ಸ್ ಆಟೋ ಚಾಲಕ ಸಾವು

    September 30, 2026

    ಪ್ರತಿಭಟನಾ ಸಭೆಯಲ್ಲಿ ನ್ಯಾಯಾಲಯದ ಪ್ರಕ್ರಿಯೆ ಬಗ್ಗೆ ತಪ್ಪು ಮಾಹಿತಿ ಆರೋಪ; ವಕೀಲರ ವಿರುದ್ಧ ಪ್ರಕರಣ ದಾಖಲು

    September 30, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026

    ಕುಂದಾಪುರ: “ಸ್ವಲ್ಪ ನಿಧಾನವಾಗಿ ಮಾತನಾಡಿ” ಎಂದಿದ್ದಕ್ಕೆ ಸೋಡಾ ಬಾಟಲಿಯಿಂದ ಹಲ್ಲೆ; ನಾಲ್ವರ ವಿರುದ್ಧ ಕೇಸ್

    September 29, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.