Close Menu
    What's Hot

    ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಸಾಧ್ಯತೆ; ಮುಖ್ಯ ನ್ಯಾಯಮೂರ್ತಿಯಿಂದ ಸಮಿತಿ ರಚನೆ

    September 30, 2026

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ
    ಅಪರಾಧ

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    adminBy adminSeptember 30, 2026No Comments2 Mins Read

    ಚಿಕ್ಕಮಗಳೂರು: ತಾನು ಬೆಂಗಳೂರಿನ ಪೊಲೀಸ್ ಸಬ್ ಇನ್‌‌ಸ್ಪೆಕ್ಟರ್  ಎಂದು ಸುಳ್ಳು ಹೇಳಿ, ಸಾರ್ವಜನಿಕರಿಂದ ಕೋಟ್ಯಾಂತರ ರೂಪಾಯಿ ಹಣ, ಚಿನ್ನ ಹಾಗೂ ಐಷಾರಾಮಿ ಕಾರುಗಳನ್ನು ಪಡೆದು ಭಾರಿ ವಂಚನೆ ಎಸಗುತ್ತಿದ್ದ ಖತರ್ನಾಕ್ ನಕಲಿ ಲೇಡಿ ಪಿಎಸ್‌ಐ ಪ್ರಮುಖ ಆರೋಪಿಯನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ. ರಾಮನಗರ ಮೂಲದ ನಿವೇದಿತಾ ಗೌಡ ಬಂಧಿತ ಆರೋಪಿಯಾಗಿದ್ದು, ಈಕೆಯಿಂದ ವಂಚನೆಗೊಳಗಾದ 25ಕ್ಕೂ ಹೆಚ್ಚು ಸಂತ್ರಸ್ತರು ದೂರು ನೀಡಿದ ಹಿನ್ನೆಲೆಯಲ್ಲಿ ಬಸವನಹಳ್ಳಿ ಹಾಗೂ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

    ಖಾಕಿ ಡ್ರೆಸ್, ಪೊಲೀಸ್ ಕಟಿಂಗ್: ನೈಜ ಪಿಎಸ್‌ಐ ರೀತಿ ಪೋಸ್:

    ಆರೋಪಿ ನಿವೇದಿತಾ ಗೌಡ ಮೂಲತಃ ರಾಮನಗರದವಳಾಗಿದ್ದು, ಕಳೆದ ಒಂದು ವರ್ಷದಿಂದ ಚಿಕ್ಕಮಗಳೂರಿನ ಪ್ರಮುಖ ವಾಣಿಜ್ಯ ಪ್ರದೇಶವಾದ ಐ.ಜಿ. ರಸ್ತೆಯಲ್ಲಿ ಕೆಫೆಯೊಂದನ್ನು ನಡೆಸುತ್ತಿದ್ದಳು. ಸಾರ್ವಜನಿಕರಿಗೆ ಅನುಮಾನ ಬಾರದಂತೆ ತಾನು ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣೆಯ ಪಿಎಸ್‌ಐ ಎಂದು ಪರಿಚಯಿಸಿಕೊಳ್ಳುತ್ತಿದ್ದಳು. ಜನರು ನಂಬಲಿ ಎನ್ನುವ ಕಾರಣಕ್ಕೆ ಪೊಲೀಸರ ರೀತಿಯೇ ಶಾರ್ಟ್ ಕಟಿಂಗ್ ಮಾಡಿಸಿಕೊಂಡು, ಖಾಕಿ ಯೂನಿಫಾರ್ಮ್ ಮಾದರಿಯ ಉಡುಪು ಧರಿಸುತ್ತಿದ್ದಳು. ಕೆಫೆಗೆ ಬರುವ ಗ್ರಾಹಕರು, ಮಹಿಳೆಯರು ಹಾಗೂ ಯುವಕರನ್ನೇ ಪ್ರಮುಖ ಟಾರ್ಗೆಟ್ ಮಾಡುತ್ತಿದ್ದ ಈಕೆ, “ತಾನು ಪ್ರಸ್ತುತ ಕರ್ತವ್ಯಕ್ಕೆ ರಜೆ ಹಾಕಿ ಚಿಕ್ಕಮಗಳೂರಿಗೆ ಬಂದಿದ್ದೇನೆ” ಎಂದು ಕಥೆ ಕಟ್ಟಿ ನಂಬಿಸುತ್ತಿದ್ದಳು.

    ಐಷಾರಾಮಿ ಕಾರುಗಳ ಮಾರಾಟ, ಕೋಟ್ಯಾಂತರ ರೂ. ವಂಚನೆ:

    ಖಾಕಿ ಗತ್ತನ್ನು ತೋರಿಸಿ ಪರಿಚಯ ಮಾಡಿಕೊಳ್ಳುತ್ತಿದ್ದ ಈ ಖತರ್ನಾಕ್ ಲೇಡಿ, ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ನಗದು ಹಾಗೂ ಕೆಜಿಗಟ್ಟಲೆ ಚಿನ್ನಾಭರಣಗಳನ್ನು ಪಡೆದು ವಂಚಿಸಿದ್ದಾಳೆ. ಅಷ್ಟೇ ಅಲ್ಲದೆ, ಪರಿಚಯಸ್ಥರಿಂದ ಓಡಾಟದ ನೆಪದಲ್ಲಿ ಐಷಾರಾಮಿ ಕಾರುಗಳನ್ನು ಪಡೆದುಕೊಂಡು, ಅವುಗಳನ್ನು ಇತರರಿಗೆ ಅಕ್ರಮವಾಗಿ ಮಾರಾಟ ಮಾಡಿ ಹಣ ಮಾಡಿಕೊಳ್ಳುತ್ತಿದ್ದ ಕೃತ್ಯ ಬೆಳಕಿಗೆ ಬಂದಿದೆ. ಆರೋಪಿಯ ಮೊಬೈಲ್ ಫೋನ್ ಪರಿಶೀಲಿಸಿದ ವೇಳೆ ಬೇರೆ ಬೇರೆ ಹೆಸರುಗಳಲ್ಲಿದ್ದ ಹಲವು ನಕಲಿ ಆಧಾರ್ ಕಾರ್ಡ್‌ಗಳು ಪತ್ತೆಯಾಗಿವೆ. ಚಿಕ್ಕಮಗಳೂರು ಮಾತ್ರವಲ್ಲದೆ ರಾಜ್ಯದ ಹಲವು ಜಿಲ್ಲೆಗಳಲ್ಲಿಯೂ ಈಕೆ ಇದೇ ರೀತಿ ವಂಚನೆ ಎಸಗಿರುವುದು ಪೊಲೀಸ್ ವಿಚಾರಣೆಯಲ್ಲಿ ತಿಳಿದುಬಂದಿದೆ.

    ಪ್ರಿಯಕರನಿಗೆ ಹಣ-ಚಿನ್ನ ನೀಡಿರುವುದಾಗಿ ಹೇಳಿಕೆ: ಲವರ್‌ಗೆ ಬಲೆ ಬೀಸಿದ ಪೊಲೀಸರು

    ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಆರೋಪಿ ನಿವೇದಿತಾ ಗೌಡಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ, ತಾನು ಸಾರ್ವಜನಿಕರಿಗೆ ವಂಚಿಸಿ ಸಂಪಾದಿಸಿದ್ದ ಕೋಟ್ಯಂತರ ರೂಪಾಯಿ ಹಣ ಹಾಗೂ ಬಂಗಾರವನ್ನು ತನ್ನ ಪ್ರಿಯಕರನಿಗೆ ನೀಡಿರುವುದಾಗಿ ಬಾಯಿಬಿಟ್ಟಿದ್ದಾಳೆ. ನಿವೇದಿತಾ ಪ್ರಿಯಕರ ದೇವು ಎಂಬಾತ ಚಿಕ್ಕಮಗಳೂರು ನಗರದ ನಿವಾಸಿಯಾಗಿದ್ದು, ಸದ್ಯ ತಲೆಮರೆಸಿಕೊಂಡಿದ್ದಾನೆ. ಪೊಲೀಸರು ಆತನ ಬಂಧನಕ್ಕಾಗಿ ಬಲೆ ಬೀಸಿದ್ದು, ತನಿಖೆಯನ್ನು ತೀವ್ರಗೊಳಿಸಿದ್ದಾರೆ.




    #crime #karnataka
    Previous Articleಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ
    Next Article ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಸಾಧ್ಯತೆ; ಮುಖ್ಯ ನ್ಯಾಯಮೂರ್ತಿಯಿಂದ ಸಮಿತಿ ರಚನೆ

    Related Posts

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026

    ಉಡುಪಿಯಲ್ಲಿ ನಾಪತ್ತೆಯಾದ ಖಾಸಗಿ ಬಸ್ ಕೆಲವೇ ಗಂಟೆಗಳಲ್ಲಿ ಪತ್ತೆ; ಕಳ್ಳರಿಗಾಗಿ ಪೊಲೀಸರ ಶೋಧ

    September 30, 2026

    ಪ್ರತಿಭಟನಾ ಸಭೆಯಲ್ಲಿ ನ್ಯಾಯಾಲಯದ ಪ್ರಕ್ರಿಯೆ ಬಗ್ಗೆ ತಪ್ಪು ಮಾಹಿತಿ ಆರೋಪ; ವಕೀಲರ ವಿರುದ್ಧ ಪ್ರಕರಣ ದಾಖಲು

    September 30, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಸಾಧ್ಯತೆ; ಮುಖ್ಯ ನ್ಯಾಯಮೂರ್ತಿಯಿಂದ ಸಮಿತಿ ರಚನೆ

    September 30, 2026

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026

    ಉಡುಪಿಯಲ್ಲಿ ನಾಪತ್ತೆಯಾದ ಖಾಸಗಿ ಬಸ್ ಕೆಲವೇ ಗಂಟೆಗಳಲ್ಲಿ ಪತ್ತೆ; ಕಳ್ಳರಿಗಾಗಿ ಪೊಲೀಸರ ಶೋಧ

    September 30, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.