Close Menu
    What's Hot

    ಕುಂಪಲ ಬೈಪಾಸ್‌ನಲ್ಲಿ ಭೀಕರ ಅಪಘಾತ; ಎರಡು ಕಾರುಗಳ ನಡುವೆ ಸಿಲುಕಿ 68 ವರ್ಷದ ವ್ಯಕ್ತಿ ಸಾವು

    September 30, 2026

    ವಿಮಾನದಲ್ಲೇ ಪೈಲಟ್‌ಗಳ ನಡುವೆ ಗಲಾಟೆ; ತುರ್ತು ಸಂಕೇತದ ಬಳಿಕ ದುಬೈ-ಇಸ್ರೇಲ್ ವಿಮಾನ ಸೌದಿಯಲ್ಲಿ ಲ್ಯಾಂಡ್

    September 30, 2026

    ಜೋಕಟ್ಟೆ ಎಂಆರ್‌ಪಿಎಲ್‌ ಘಟಕದಲ್ಲಿ ಸ್ಫೋಟ; ಗುತ್ತಿಗೆ ಕಾರ್ಮಿಕ ಸಾವು, ತನಿಖೆಗೆ ಆದೇಶ

    September 30, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಂತರಾಷ್ಟ್ರೀಯ»ವಿಮಾನದಲ್ಲೇ ಪೈಲಟ್‌ಗಳ ನಡುವೆ ಗಲಾಟೆ; ತುರ್ತು ಸಂಕೇತದ ಬಳಿಕ ದುಬೈ-ಇಸ್ರೇಲ್ ವಿಮಾನ ಸೌದಿಯಲ್ಲಿ ಲ್ಯಾಂಡ್
    ಅಂತರಾಷ್ಟ್ರೀಯ

    ವಿಮಾನದಲ್ಲೇ ಪೈಲಟ್‌ಗಳ ನಡುವೆ ಗಲಾಟೆ; ತುರ್ತು ಸಂಕೇತದ ಬಳಿಕ ದುಬೈ-ಇಸ್ರೇಲ್ ವಿಮಾನ ಸೌದಿಯಲ್ಲಿ ಲ್ಯಾಂಡ್

    adminBy adminSeptember 30, 2026No Comments1 Min Read

    ಟೆಲ್ ಅವಿವ್: ಯುನೈಟೆಡ್ ಅರಬ್ ಎಮಿರೇಟ್ಸ್‌ನ (UAE) ದುಬೈನಿಂದ ಇಸ್ರೇಲ್‌ಗೆ ಹೊರಟಿದ್ದ ಫ್ಲೈ ದುಬೈ  ವಾಣಿಜ್ಯ ವಿಮಾನ ಬುಧವಾರ ಸೌದಿ ಅರೇಬಿಯಾದಲ್ಲಿ ತುರ್ತು ಭೂಸ್ಪರ್ಶ ನಡೆಸಿದೆ. ಕಾಕ್‌ಪಿಟ್‌ನಲ್ಲಿ ಪೈಲಟ್‌ಗಳ ನಡುವೆ ನಡೆದ ಜಗಳದಿಂದಾಗಿ ‘ಹೈಜಾಕ್’ ಎಚ್ಚರಿಕೆ ರವಾನೆಯಾಗಿದ್ದು, ಇಸ್ರೇಲಿ ಯುದ್ಧವಿಮಾನಗಳನ್ನು ಆಗಸಕ್ಕೇರಿಸುವಂತೆ ಮಾಡಿದ್ದಲ್ಲದೆ ಭಾರೀ ಆತಂಕ ಸೃಷ್ಟಿಸಿತ್ತು.
    ವಿಮಾನದಲ್ಲಿದ್ದ ಎಲ್ಲಾ 180 ಪ್ರಯಾಣಿಕರು ಹಾಗೂ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಭದ್ರತಾ ಅಧಿಕಾರಿಗಳನ್ನು ಉಲ್ಲೇಖಿಸಿ ಇಸ್ರೇಲ್ ಮಾಧ್ಯಮಗಳು ವರದಿ ಮಾಡಿವೆ.

    ವಿಮಾನವು ದುಬೈನಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲೇ ಕಾಕ್‌ಪಿಟ್‌ನಲ್ಲಿ ಇಬ್ಬರು ಪೈಲಟ್‌ಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಪ್ರಾರಂಭವಾಗಿದೆ. ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ಹೋದಾಗ, ಓರ್ವ ಪೈಲಟ್ ವಿಮಾನ ಹಾರಾಟದ ಸಂದರ್ಭದಲ್ಲೇ ‘7500’ ಎಮರ್ಜೆನ್ಸಿ ಕೋಡ್‌ ಬಟನ್ ಒತ್ತಿದ್ದಾರೆ. ಅಂತರರಾಷ್ಟ್ರೀಯ ವಿಮಾನಯಾನ ನಿಯಮಾವಳಿಗಳ ಪ್ರಕಾರ, ‘7500’ ಎಮರ್ಜೆನ್ಸಿ ಕೋಡ್ ಎಂಬುದು ವಿಮಾನ ಹೈಜಾಕ್ ಆಗಿದೆ ಎಂಬುದನ್ನು ಸೂಚಿಸುವ ಸಂಕೇತವಾಗಿದೆ. ಈ ಎಚ್ಚರಿಕೆ ರವಾನೆಯಾಗುತ್ತಿದ್ದಂತೆ ಇಸ್ರೇಲಿ ಸೇನೆ ಹಾಗೂ ಭದ್ರತಾ ಸಂಸ್ಥೆಗಳು ತಕ್ಷಣವೇ ಜಾಗೃತಗೊಂಡು, ಇಸ್ರೇಲಿ ಯುದ್ಧ ವಿಮಾನಗಳನ್ನು ಮುನ್ನೆಚ್ಚರಿಕೆಯಾಗಿ ನಿಯೋಜಿಸಿದವು.

    ಬಳಿಕ ವಿಮಾನವನ್ನು ಸೌದಿ ಅರೇಬಿಯಾದ ವಾಯುಪ್ರದೇಶಕ್ಕೆ ಮಾರ್ಗಬದಲಾವಣೆ  ಮಾಡಲಾಗಿದ್ದು, ಸೌದಿ ರಾಜ್ಯದ ನಾಗರಿಕ ಮತ್ತು ಮಿಲಿಟರಿ ನೆಲೆಯಾಗಿರುವ ‘ತಬುಕ್’ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಯಿತು. ಪೈಲಟ್‌ಗಳ ಜಗಳಕ್ಕೆ ನಿಜವಾದ ಕಾರಣವೇನೆಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ವಿಮಾನವು ನಿಗದಿತ ಮಾರ್ಗದಿಂದ ಬೇರೆಡೆಗೆ ತಿರುಗುತ್ತಿದ್ದಂತೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಹಿರಿಯ ಭದ್ರತಾ ಅಧಿಕಾರಿಗಳೊಂದಿಗೆ ತುರ್ತು ಸಮಾಲೋಚನೆ ನಡೆಸಿದರು.

    ಪ್ರಸ್ತುತ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಸೌದಿಯಲ್ಲಿ ಸುರಕ್ಷಿತವಾಗಿರುವ ಎಲ್ಲಾ 180 ಪ್ರಯಾಣಿಕರನ್ನು ಇಸ್ರೇಲ್‌ಗೆ ವಾಪಸ್ ಕರೆತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪ್ರಧಾನಿ ನೆತನ್ಯಾಹು ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.




    International
    Previous Articleಜೋಕಟ್ಟೆ ಎಂಆರ್‌ಪಿಎಲ್‌ ಘಟಕದಲ್ಲಿ ಸ್ಫೋಟ; ಗುತ್ತಿಗೆ ಕಾರ್ಮಿಕ ಸಾವು, ತನಿಖೆಗೆ ಆದೇಶ
    Next Article ಕುಂಪಲ ಬೈಪಾಸ್‌ನಲ್ಲಿ ಭೀಕರ ಅಪಘಾತ; ಎರಡು ಕಾರುಗಳ ನಡುವೆ ಸಿಲುಕಿ 68 ವರ್ಷದ ವ್ಯಕ್ತಿ ಸಾವು

    Related Posts

    ಸ್ನೇಹಿತನ ಮಾತು ನಂಬಿ ಸೌದಿ ಅರೇಬಿಯಾದಲ್ಲಿ ‘ಡೆತ್ ಟ್ರ್ಯಾಪ್’ಗೆ ಸಿಲುಕಿದ ಕೇರಳ ಮೂಲದ ವ್ಯಕ್ತಿ

    September 29, 2026

    ಓಮನ್ ಕರಾವಳಿ ಬಳಿ ಭಾರತೀಯ ವಾಣಿಜ್ಯ ಹಡಗಿನ ಮೇಲೆ ದಾಳಿ; ಓರ್ವ ಭಾರತೀಯ ನಾವಿಕ ಸಾವು,19 ಮಂದಿ ಸುರಕ್ಷಿತ

    September 25, 2026

    ಮಕ್ಕಾದಲ್ಲಿ ಮೊದಲ ಬಾರಿಗೆ ವಾಯುದಾಳಿ ಎಚ್ಚರಿಕೆ: ಹೌತಿ ಕ್ಷಿಪಣಿ, ಡ್ರೋನ್ ದಾಳಿ ಬೆನ್ನಲ್ಲೇ ಸೈರನ್

    September 16, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕುಂಪಲ ಬೈಪಾಸ್‌ನಲ್ಲಿ ಭೀಕರ ಅಪಘಾತ; ಎರಡು ಕಾರುಗಳ ನಡುವೆ ಸಿಲುಕಿ 68 ವರ್ಷದ ವ್ಯಕ್ತಿ ಸಾವು

    September 30, 2026

    ವಿಮಾನದಲ್ಲೇ ಪೈಲಟ್‌ಗಳ ನಡುವೆ ಗಲಾಟೆ; ತುರ್ತು ಸಂಕೇತದ ಬಳಿಕ ದುಬೈ-ಇಸ್ರೇಲ್ ವಿಮಾನ ಸೌದಿಯಲ್ಲಿ ಲ್ಯಾಂಡ್

    September 30, 2026

    ಜೋಕಟ್ಟೆ ಎಂಆರ್‌ಪಿಎಲ್‌ ಘಟಕದಲ್ಲಿ ಸ್ಫೋಟ; ಗುತ್ತಿಗೆ ಕಾರ್ಮಿಕ ಸಾವು, ತನಿಖೆಗೆ ಆದೇಶ

    September 30, 2026

    ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ; ಎಂಟು ಮಂದಿಗೆ ಗಾಯ, ಬೆಂಕಿ ನಂದಿಸುವಲ್ಲಿ ಯಶಸ್ಸು

    September 30, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    25ಕ್ಕೂ ಹೆಚ್ಚು ದೂರುಗಳ ಬೆನ್ನಲ್ಲೇ ನಕಲಿ ಲೇಡಿ PSI ಅರೆಸ್ಟ್; ಚಿನ್ನ, ಕಾರು, ಹಣ ವಂಚನೆ ಆರೋಪ

    September 30, 2026

    ಕೊಲೆಯತ್ನ ಕೇಸ್‌ನಲ್ಲಿ A1, A2 ಆರೋಪಿಗಳಾಗಿದ್ದ ಪತಿ–ಮಹಿಳೆ ಇಬ್ಬರ ಮೃತದೇಹ ಸೌಪರ್ಣಿಕಾ ನದಿ ಬಳಿ ಪತ್ತೆ

    September 30, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.