Close Menu
    What's Hot

    ಕೆಪಿಎಸ್‌ಸಿ ನೇಮಕಾತಿ ಹಗರಣ ತನಿಖೆಗೆ ಟ್ವಿಸ್ಟ್; ಹೈಕೋರ್ಟ್ ಎಸ್‌ಐಟಿ ಆದೇಶಕ್ಕೆ ಸುಪ್ರೀಂ ತಡೆ

    October 1, 2026

    MRPL ಸ್ಫೋಟದ ಬೆನ್ನಲ್ಲೇ ‘ಕಾಂತೇರಿ ಜುಮಾದಿ’ ದೈವದ ಎಚ್ಚರಿಕೆ ವಿವಾದ; ಕಾರಣಿಕದ ಬಗ್ಗೆ ಕರಾವಳಿಯಲ್ಲಿ ಚರ್ಚೆ

    October 1, 2026

    ಸೌಜನ್ಯಾ ಪ್ರಕರಣದ ಮರುತನಿಖೆ ಆರಂಭ; ಮಂಗಳೂರಿಗೆ ಎಸ್‌ಐಟಿ ಅಧಿಕಾರಿಗಳ ಆಗಮನ

    October 1, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಕೆಪಿಎಸ್‌ಸಿ ನೇಮಕಾತಿ ಹಗರಣ ತನಿಖೆಗೆ ಟ್ವಿಸ್ಟ್; ಹೈಕೋರ್ಟ್ ಎಸ್‌ಐಟಿ ಆದೇಶಕ್ಕೆ ಸುಪ್ರೀಂ ತಡೆ
    ಅಪರಾಧ

    ಕೆಪಿಎಸ್‌ಸಿ ನೇಮಕಾತಿ ಹಗರಣ ತನಿಖೆಗೆ ಟ್ವಿಸ್ಟ್; ಹೈಕೋರ್ಟ್ ಎಸ್‌ಐಟಿ ಆದೇಶಕ್ಕೆ ಸುಪ್ರೀಂ ತಡೆ

    adminBy adminOctober 1, 2026No Comments2 Mins Read

    ನವದೆಹಲಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ  ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಮಹತ್ವದ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ.

    ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಇಂದು ನಡೆಸಿತು.ರಾಜ್ಯ ಸರ್ಕಾರದ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿ, ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಾದ ದಿನದಿಂದಲೂ ಸಿಐಡಿ  ಅಧಿಕಾರಿಗಳು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸುತ್ತಿದ್ದಾರೆ. ಕೆಲವು ಅಭ್ಯರ್ಥಿಗಳು ಸಿಬಿಐ ತನಿಖೆಗೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಅನಿರೀಕ್ಷಿತವಾಗಿ ಎಸ್‌ಐಟಿ ರಚನೆಗೆ ಆದೇಶಿಸಿದೆ. ಹೈಕೋರ್ಟ್ ಸೂಚಿಸಿರುವ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಈ ಹಿಂದೆ ಫೋನ್ ಟ್ಯಾಪಿಂಗ್ ಪ್ರಕರಣದಲ್ಲಿ ಸಿಬಿಐ ವಿಚಾರಣೆ ಎದುರಿಸಿದ್ದರು ಎಂದು ಆಕ್ಷೇಪ ವ್ಯಕ್ತಪಡಿಸಿ, ಅಧಿಕಾರಿಯ ಮೇಲಿರುವ ಆರೋಪಗಳ ಕುರಿತ ದಾಖಲೆಗಳನ್ನು ನ್ಯಾಯಪೀಠದ ಗಮನಕ್ಕೆ ತಂದರು.

    ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಅಭ್ಯರ್ಥಿಗಳ ಪರ ವಕೀಲರು, “ಹೈಕೋರ್ಟ್ ಇಡೀ ರಾಜ್ಯದ ಅರ್ಹ ಅಧಿಕಾರಿಗಳನ್ನು ಪರಿಶೀಲಿಸಿ ಸಮರ್ಥ ತನಿಖೆಗಾಗಿ ಎಸ್‌ಐಟಿ ರಚನೆ ಮಾಡಿದೆ. ಹೀಗಿರುವಾಗ ಸರ್ಕಾರಕ್ಕೆ ಈ ತನಿಖೆಗೆ ಹಿಂಜರಿಕೆ ಏಕೆ? ಸರ್ಕಾರಕ್ಕೆ ತಮಗೆ ಬೇಕಾದ ಅಧಿಕಾರಿಗಳನ್ನೇ ನೇಮಿಸಬೇಕೆಂಬ ಉದ್ದೇಶವಿದೆಯೇ? ಅಧಿಕಾರಿಗಳ ಮೇಲೆ ಆಕ್ಷೇಪವಿದ್ದರೆ ಹೈಕೋರ್ಟ್‌ಗೆ ಹೋಗಬೇಕಿತ್ತು” ಎಂದು ಬಲವಾಗಿ ವಾದಿಸಿದರು.

    ಉಭಯ ಕಡೆಯ ವಾದ ಆಲಿಸಿದ ಸುಪ್ರೀಂ ಕೋರ್ಟ್‌ನ ವಿಭಾಗೀಯ ಪೀಠ, “ನಿರ್ದಿಷ್ಟ ಅಧಿಕಾರಿಯ ನೇಮಕದ ಬಗ್ಗೆ ಆಕ್ಷೇಪಗಳಿದ್ದರೆ ಹೈಕೋರ್ಟ್(High Court) ಮೊರೆ ಹೋಗಬಹುದಿತ್ತು, ನಾವು ಇಂತಹ ಆಡಳಿತಾತ್ಮಕ ಆಯ್ಕೆಗಳಲ್ಲಿ ಸುಲಭವಾಗಿ ಮಧ್ಯಪ್ರವೇಶಿಸುವುದಿಲ್ಲ” ಎಂದು ಅಭಿಪ್ರಾಯಪಟ್ಟಿತು.

    ಕೊನೆಗೆ ಸರ್ಕಾರದ ಆಕ್ಷೇಪವನ್ನು ಪರಿಗಣಿಸಿದ ನ್ಯಾಯಪೀಠ, ಅಧಿಕಾರಿಯ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಮುಂದಿನ ವಿಚಾರಣೆ ವೇಳೆ ಮುಚ್ಚಿದ ಲಕೋಟೆಯಲ್ಲಿ  ಸಲ್ಲಿಸುವಂತೆ ಸೂಚಿಸಿತು.ಎಸ್‌ಐಟಿ ರಚನೆಗೆ ಸರ್ಕಾರಕ್ಕೆ ಸಮ್ಮತವಿರುವ ಇತರ ಸಮರ್ಥ ಅಧಿಕಾರಿಗಳ ಪಟ್ಟಿಯನ್ನು ಒದಗಿಸಲು ರಾಜ್ಯ ಸರ್ಕಾರಕ್ಕೆ ಅವಕಾಶ ನೀಡಿತು.ಅಂತಿಮವಾಗಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಮಧ್ಯಂತರ ತಡೆ ನೀಡಿ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 12ಕ್ಕೆ ಮುಂದೂಡಿತು.

    ಕಳೆದ ಹತ್ತು ದಿನಗಳಿಂದಲೂ ಸಿಐಡಿ ಪೊಲೀಸರು ತನಿಖೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರು. ಇದೀಗ ಸುಪ್ರೀಂ ಕೋರ್ಟ್ ಎಸ್‌ಐಟಿ ರಚನೆಗೆ ತಡೆ ನೀಡಿರುವುದರಿಂದ, ಅಂತಿಮವಾಗಿ ಪ್ರಕರಣದ ತನಿಖೆಯನ್ನು ಸಿಐಡಿಯೇ ಮುಂದುವರಿಸಲಿದೆಯೇ ಅಥವಾ ಹೊಸ ಅಧಿಕಾರಿಗಳನ್ನೊಳಗೊಂಡ ಎಸ್‌ಐಟಿ ರಚನೆಯಾಗಲಿದೆಯೇ ಎಂಬ ಕುತೂಹಲ ಮುಂದುವರಿದಿದೆ.

    #crime #karnataka
    Previous ArticleMRPL ಸ್ಫೋಟದ ಬೆನ್ನಲ್ಲೇ ‘ಕಾಂತೇರಿ ಜುಮಾದಿ’ ದೈವದ ಎಚ್ಚರಿಕೆ ವಿವಾದ; ಕಾರಣಿಕದ ಬಗ್ಗೆ ಕರಾವಳಿಯಲ್ಲಿ ಚರ್ಚೆ

    Related Posts

    MRPL ಸ್ಫೋಟದ ಬೆನ್ನಲ್ಲೇ ‘ಕಾಂತೇರಿ ಜುಮಾದಿ’ ದೈವದ ಎಚ್ಚರಿಕೆ ವಿವಾದ; ಕಾರಣಿಕದ ಬಗ್ಗೆ ಕರಾವಳಿಯಲ್ಲಿ ಚರ್ಚೆ

    October 1, 2026

    ಸೌಜನ್ಯಾ ಪ್ರಕರಣದ ಮರುತನಿಖೆ ಆರಂಭ; ಮಂಗಳೂರಿಗೆ ಎಸ್‌ಐಟಿ ಅಧಿಕಾರಿಗಳ ಆಗಮನ

    October 1, 2026

    ಎಂಆರ್‌ಪಿಎಲ್ ಸ್ಫೋಟದಲ್ಲಿ ಮೃತಪಟ್ಟ ಮನೀಶ್ ಕರ್ಕೇರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

    October 1, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕೆಪಿಎಸ್‌ಸಿ ನೇಮಕಾತಿ ಹಗರಣ ತನಿಖೆಗೆ ಟ್ವಿಸ್ಟ್; ಹೈಕೋರ್ಟ್ ಎಸ್‌ಐಟಿ ಆದೇಶಕ್ಕೆ ಸುಪ್ರೀಂ ತಡೆ

    October 1, 2026

    MRPL ಸ್ಫೋಟದ ಬೆನ್ನಲ್ಲೇ ‘ಕಾಂತೇರಿ ಜುಮಾದಿ’ ದೈವದ ಎಚ್ಚರಿಕೆ ವಿವಾದ; ಕಾರಣಿಕದ ಬಗ್ಗೆ ಕರಾವಳಿಯಲ್ಲಿ ಚರ್ಚೆ

    October 1, 2026

    ಸೌಜನ್ಯಾ ಪ್ರಕರಣದ ಮರುತನಿಖೆ ಆರಂಭ; ಮಂಗಳೂರಿಗೆ ಎಸ್‌ಐಟಿ ಅಧಿಕಾರಿಗಳ ಆಗಮನ

    October 1, 2026

    ಎಂಆರ್‌ಪಿಎಲ್ ಸ್ಫೋಟದಲ್ಲಿ ಮೃತಪಟ್ಟ ಮನೀಶ್ ಕರ್ಕೇರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

    October 1, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕೆಪಿಎಸ್‌ಸಿ ನೇಮಕಾತಿ ಹಗರಣ ತನಿಖೆಗೆ ಟ್ವಿಸ್ಟ್; ಹೈಕೋರ್ಟ್ ಎಸ್‌ಐಟಿ ಆದೇಶಕ್ಕೆ ಸುಪ್ರೀಂ ತಡೆ

    October 1, 2026

    ಎಂಆರ್‌ಪಿಎಲ್ ಸ್ಫೋಟದಲ್ಲಿ ಮೃತಪಟ್ಟ ಮನೀಶ್ ಕರ್ಕೇರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

    October 1, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.