Close Menu
    What's Hot

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026

    ದಸರಾ ಆಚರಣೆಗೆ ಮಾನವೀಯತೆಯ ಸ್ಪರ್ಶ : ಬಡ ರೋಗಿಯ ನೆರವಿಗೆ ನಿಂತ ಏಳು ಮಕ್ಕಳು

    October 19, 2026

    ಸಿದ್ದಕಟ್ಟೆಯಲ್ಲಿ ಯುವಕನ ಮೇಲೆ ಚೂರಿಯಿಂದ ದಾಳಿ : ಆರು ಮಂದಿ ವಿರುದ್ಧ ಪ್ರಕರಣ ದಾಖಲು

    October 19, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ನಕಲಿ ಪಾಸ್‌ಪೋರ್ಟ್ ಪ್ರಕರಣ; ಶಿಕ್ಷೆ ಬಳಿಕ 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್
    ಅಪರಾಧ

    ನಕಲಿ ಪಾಸ್‌ಪೋರ್ಟ್ ಪ್ರಕರಣ; ಶಿಕ್ಷೆ ಬಳಿಕ 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    adminBy adminOctober 8, 2026No Comments1 Min Read

    ಮಂಗಳೂರು : ನಕಲಿ ಪಾಸ್‌ಪೋರ್ಟ್ ಬಳಸಿ ವಿದೇಶಕ್ಕೆ ತೆರಳಲು ಯತ್ನಿಸಿ, ಬಳಿಕ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.

    2010ರ ಜೂನ್ 22ರಂದು ವೇಲಾಯುಧನ್ ನಕಲಿ ಪಾಸ್‌ಪೋರ್ಟ್ ಪಡೆದು ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸಿದ್ದ. ಈ ವೇಳೆ ವಿಮಾನ ನಿಲ್ದಾಣದ ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಬಜಪೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು. ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 141/2010ರಂತೆ ಐಪಿಸಿ ಕಲಂ 419, 420, 468 ಹಾಗೂ 34 ಮತ್ತು ಪಾಸ್‌ಪೋರ್ಟ್ ಕಾಯ್ದೆ-1967ರ ಕಲಂ 12(1)(b), (d), (e) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

    ಪ್ರಕರಣದ ತನಿಖೆ ಪೂರ್ಣಗೊಳಿಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮಾನ್ಯ ಸೆಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ವೇಲಾಯುಧನ್‌ಗೆ 1 ವರ್ಷ 6 ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು. ನ್ಯಾಯಾಲಯದ ತೀರ್ಪಿನ ವಿರುದ್ಧ ವೇಲಾಯುಧನ್ ಕರ್ನಾಟಕ ಹೈಕೋರ್ಟ್‌ಗೆ ಕ್ರಿಮಿನಲ್ ರಿವಿಷನ್ ಪಿಟಿಷನ್ ನಂ. 104/2021 ಸಲ್ಲಿಸಿದ್ದ. ಆದರೆ ಹೈಕೋರ್ಟ್ ಆತನ ಮನವಿಯನ್ನು ತಿರಸ್ಕರಿಸಿತ್ತು.

    ಇದಾದ ಬಳಿಕ ಬಂಧನದಿಂದ ತಪ್ಪಿಸಿಕೊಂಡು 2020ರಿಂದ ತಲೆಮರೆಸಿಕೊಂಡಿದ್ದ ವೇಲಾಯುಧನ್‌ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದರು. ಇದೀಗ ಅಕ್ಟೋಬರ್ 8, 2026ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದೆ. ಬಂಧಿತ ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.




    #crime #dakshinakannada
    Previous Articleಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಸ್ಲೀಪರ್ ಬಸ್; ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ
    Next Article ರಿಕ್ಷಾದಲ್ಲಿ ಮರೆತುಹೋದ 48 ಗ್ರಾಂ ಚಿನ್ನದ ಸರ ವಾಪಸ್; ಚಾಲಕ ಬಸವರಾಜ್‌ ಪ್ರಾಮಾಣಿಕತೆಗೆ ಮೆಚ್ಚುಗೆ

    Related Posts

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026

    ದಸರಾ ಆಚರಣೆಗೆ ಮಾನವೀಯತೆಯ ಸ್ಪರ್ಶ : ಬಡ ರೋಗಿಯ ನೆರವಿಗೆ ನಿಂತ ಏಳು ಮಕ್ಕಳು

    October 19, 2026

    ಸಿದ್ದಕಟ್ಟೆಯಲ್ಲಿ ಯುವಕನ ಮೇಲೆ ಚೂರಿಯಿಂದ ದಾಳಿ : ಆರು ಮಂದಿ ವಿರುದ್ಧ ಪ್ರಕರಣ ದಾಖಲು

    October 19, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026

    ದಸರಾ ಆಚರಣೆಗೆ ಮಾನವೀಯತೆಯ ಸ್ಪರ್ಶ : ಬಡ ರೋಗಿಯ ನೆರವಿಗೆ ನಿಂತ ಏಳು ಮಕ್ಕಳು

    October 19, 2026

    ಸಿದ್ದಕಟ್ಟೆಯಲ್ಲಿ ಯುವಕನ ಮೇಲೆ ಚೂರಿಯಿಂದ ದಾಳಿ : ಆರು ಮಂದಿ ವಿರುದ್ಧ ಪ್ರಕರಣ ದಾಖಲು

    October 19, 2026

    ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ : ರೈಲಿನಲ್ಲಿ ಪರಾರಿಯಾಗುತ್ತಿದ್ದ ಮೂವರ ಬಂಧನ

    October 19, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026

    ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆ ; ಜನಸಾಮಾನ್ಯರಿಗೆ ನೆರವಾಗುವ ಕ್ರಮ ಎಂದ ಸಚಿವ ಖಾದರ್

    October 19, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.