Close Menu
    What's Hot

    ವೆಲೆನ್ಸಿಯಾ ಚರ್ಚ್ ಪಾದ್ರಿಯ ವಿರುದ್ಧ ಪೋಕ್ಸೊ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    October 18, 2026

    ಕೋಲ್ಕತ್ತಾ ದುರ್ಗಾ ಪೂಜಾ ಸಂಭ್ರಮದಲ್ಲಿ ಕಾಲ್ತುಳಿತ: 19 ಸಾವು, ಘಟನೆಗೆ ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ

    October 18, 2026

    ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣ : ಜಾಮೀನು ಪ್ರಶ್ನಿಸಿ ಸರ್ಕಾರದ ಅರ್ಜಿ, ಹೈಕೋರ್ಟ್‌ನಿಂದ ತಡೆ

    October 18, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಜನಗಣತಿ ಹೆಸರಿನಲ್ಲಿ ಮನೆಗೆ ಎಂಟ್ರಿ; ವೃದ್ಧೆಯ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ ಇಬ್ಬರು ಸೆರೆ
    ಅಪರಾಧ

    ಜನಗಣತಿ ಹೆಸರಿನಲ್ಲಿ ಮನೆಗೆ ಎಂಟ್ರಿ; ವೃದ್ಧೆಯ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ ಇಬ್ಬರು ಸೆರೆ

    adminBy adminOctober 11, 2026No Comments2 Mins Read

    ಜನಗಣತಿ ಕುರಿತು ಮಾಹಿತಿ ಕೇಳುವ ನೆಪದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧೆಯ ಮನೆಗೆ ನುಗ್ಗಿ, ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 5.53 ಲಕ್ಷ ಮೌಲ್ಯದ ಚಿನ್ನದ ಸರ, ಸ್ಕೂಟರ್ ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಬಂಧಿತರನ್ನು ನಿಟ್ಟೂರಿನ ವಾದಿರಾಜ್ ಗಾಣಿಗ (44) ಹಾಗೂ ಕಾಪು ತಾಲೂಕಿನ ಪಡು ಗ್ರಾಮದ ಸಚಿನ್ (30) ಎಂದು ಗುರುತಿಸಲಾಗಿದೆ.
    ಉಡುಪಿಯ ಪುತ್ತೂರು ಗ್ರಾಮದ ನಿಟ್ಟೂರಿನ ನಿವಾಸಿ ಶಾಂತ ಕಾರಂತ್ (74) ಎಂಬವರು ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು. ಅ.7ರಂದು ಸಂಜೆ ಸುಮಾರು 3.47ರ ವೇಳೆಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಜನಗಣತಿ ಕುರಿತು ಮಾಹಿತಿ ಕೇಳುವ ನೆಪದಲ್ಲಿ ಅವರ ಮನೆಗೆ ಬಂದಿದ್ದರು. ಈ ವೇಳೆ ಶಾಂತ ಕಾರಂತ್ ಅವರು ತಮ್ಮ ಮಗನನ್ನು ವಿಚಾರಿಸಿ, ಅವರು ತಂದಿದ್ದ ಕಾಗದಕ್ಕೆ ಸಹಿ ಮಾಡುವುದಾಗಿ ಹೇಳಿ ಮನೆಯೊಳಗೆ ತೆರಳಿದ್ದರು. ಇದನ್ನೇ ಅವಕಾಶವನ್ನಾಗಿ ಬಳಸಿಕೊಂಡ ಆರೋಪಿಗಳು ಮನೆಯೊಳಗೆ ನುಗ್ಗಿ ವೃದ್ಧೆಯನ್ನು ಕೆಳಕ್ಕೆ ತಳ್ಳಿ, ಅವರ ಕುತ್ತಿಗೆಯಲ್ಲಿದ್ದ ಸುಮಾರು 30 ಗ್ರಾಂ ತೂಕದ ಚಿನ್ನದ ಸರವನ್ನು ಬಲವಂತವಾಗಿ ಕಿತ್ತುಕೊಂಡು ಪರಾರಿಯಾಗಿದ್ದರು. ಕಳವಾದ ಸರದ ಅಂದಾಜು ಮೌಲ್ಯ 4 ಲಕ್ಷ ಎಂದು ದೂರಿನಲ್ಲಿ ತಿಳಿಸಲಾಗಿತ್ತು.

    ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದರು. ಅ.10ರಂದು ಸ್ಥಳೀಯ ಮಾಹಿತಿ ಆಧರಿಸಿ ಮಣಿಪಾಲದ ಮಣ್ಣಪಳ್ಳದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
    ವಿಚಾರಣೆ ವೇಳೆ ಆರೋಪಿಗಳು ಕೃತ್ಯದಲ್ಲಿ ಭಾಗಿಯಾಗಿರುವುದನ್ನು ಒಪ್ಪಿಕೊಂಡಿದ್ದು, ಸುಲಿಗೆ ಮಾಡಿದ ಚಿನ್ನದ ಸರವನ್ನು ಮಣಿಪಾಲದ ಇಂಡಸ್ಟ್ರಿಯಲ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಅಡವಿಟ್ಟಿರುವುದಾಗಿ ತಿಳಿಸಿದ್ದರು.

    ಆರೋಪಿಗಳಿಂದ 34 ಗ್ರಾಂ ತೂಕದ ಚಿನ್ನದ ಸರ (ಅಂದಾಜು ಮೌಲ್ಯ ₹4.50 ಲಕ್ಷ), ಕೃತ್ಯಕ್ಕೆ ಬಳಸಿದ KA20HG4761 ನೋಂದಣಿ ಸಂಖ್ಯೆಯ ಓಲಾ ಎಲೆಕ್ನಿಕ್ ಸ್ಕೂಟರ್ (₹90 ಸಾವಿರ) ಹಾಗೂ ಎರಡು ಮೊಬೈಲ್ ಫೋನ್‌ ಗಳನ್ನು (₹13 ಸಾವಿರ) ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 5.53 ಲಕ್ಷ ಎಂದು ಅಂದಾಜಿಸಲಾಗಿದೆ.

    ಪ್ರಕರಣದ ಮೊದಲ ಆರೋಪಿ ಶಾಂತ ಅವರ ನೆರೆಹೊರೆಯವನಾಗಿದ್ದು, ಶಾಂತ ಸೇರಿದಂತೆ ಇತರರಿಂದ ಸಾಲ ಪಡೆದಿದ್ದ ಎನ್ನಲಾಗಿದೆ. ಎರಡನೇ ಆರೋಪಿಯೂ ಸಾಲ ಮಾಡಿಕೊಂಡಿದ್ದ ಹಿನ್ನೆಲೆ, ಸಾಲ ತೀರಿಸುವ ಹಾಗೂ ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಈ ಕೃತ್ಯ ಎಸಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
    ಬಂಧಿತ ಆರೋಪಿಗಳನ್ನು ಅ.10ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
    ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರ ನಿರ್ದೇಶನದಂತೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ ಹಾಗೂ ಉಡುಪಿ ಉಪವಿಭಾಗದ ಡಿವೈಎಸ್‌ಪಿ ಬೆಳ್ಳಿಯಪ್ಪ ಅವರ ಮಾರ್ಗದರ್ಶನದಲ್ಲಿ, ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಪಿ. ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

    ಪಿಎಸ್‌ಐಗಳಾದ ಭರತೇಶ್ ಕಂಕಣವಾಡಿ ಹಾಗೂ ರತ್ನಾಕರ್ ಕೆ., ಠಾಣಾ ಸಿಬ್ಬಂದಿಗಳಾದ ಪ್ರಸನ್ನ ಸಿ., ಜೀವನ್ ಕುಮಾರ್, ಅಬ್ದುಲ್ ಬಶೀರ್, ಆನಂದ ಎಸ್., ಮಣಿಪಾಲ ಠಾಣೆಯ ಮಲ್ಲಯ್ಯ ಹಿರೇಮರ್ ಹಾಗೂ ಹೇಮಂತ್ ಮತ್ತು ತನಿಖಾ ಸಹಾಯಕರಾದ ನೇತ್ರಾವತಿ ಹಾಗೂ ಸುರೇಂದ್ರ ಡಿ. ಕಾರ್ಯಾಚರಣೆಯಲ್ಲಿ ಸಹಕರಿಸಿದರು.




    #crime #udupi
    Previous Articleಮಂಗಳೂರು ದಸರಾ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ; ಅ. 11ರಿಂದ 21ರವರೆಗೆ ವಾಹನ ಸವಾರರಿಗೆ ಪೊಲೀಸ್ ಸಲಹೆ
    Next Article ಕಡೆಯ ಕ್ಷಣದಲ್ಲಿ ಸಿಎಂ ಡಿಕೆಶಿ ಕರಾವಳಿ ಪ್ರವಾಸ ರದ್ದು; ಉಚ್ಚಿಲ, ಮಂಗಳೂರು ದಸರಾ ಕಾರ್ಯಕ್ರಮಗಳಿಗೆ ಗೈರು

    Related Posts

    ವೆಲೆನ್ಸಿಯಾ ಚರ್ಚ್ ಪಾದ್ರಿಯ ವಿರುದ್ಧ ಪೋಕ್ಸೊ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    October 18, 2026

    ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣ : ಜಾಮೀನು ಪ್ರಶ್ನಿಸಿ ಸರ್ಕಾರದ ಅರ್ಜಿ, ಹೈಕೋರ್ಟ್‌ನಿಂದ ತಡೆ

    October 18, 2026

    ಎಂಆರ್‌ಪಿಎಲ್‌ ಸ್ಫೋಟದಲ್ಲಿ ಗಾಯಗೊಂಡಿದ್ದ ಕಾರ್ಮಿಕ ಸಾವು : ₹1.2 ಕೋಟಿ ಪರಿಹಾರ ಘೋಷಣೆ

    October 17, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ವೆಲೆನ್ಸಿಯಾ ಚರ್ಚ್ ಪಾದ್ರಿಯ ವಿರುದ್ಧ ಪೋಕ್ಸೊ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    October 18, 2026

    ಕೋಲ್ಕತ್ತಾ ದುರ್ಗಾ ಪೂಜಾ ಸಂಭ್ರಮದಲ್ಲಿ ಕಾಲ್ತುಳಿತ: 19 ಸಾವು, ಘಟನೆಗೆ ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ

    October 18, 2026

    ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣ : ಜಾಮೀನು ಪ್ರಶ್ನಿಸಿ ಸರ್ಕಾರದ ಅರ್ಜಿ, ಹೈಕೋರ್ಟ್‌ನಿಂದ ತಡೆ

    October 18, 2026

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026

    ರಾಜ್ಯಾದ್ಯಂತ ಸ್ವೀಟ್ ಅಂಗಡಿಗಳ ತಪಾಸಣೆ ಚುರುಕು: 145 ಮಾದರಿ ಸಂಗ್ರಹ, 15 ಘಟಕಗಳಿಗೆ ನೋಟಿಸ್

    October 17, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.