Close Menu
    What's Hot

    ವೆಲೆನ್ಸಿಯಾ ಚರ್ಚ್ ಪಾದ್ರಿಯ ವಿರುದ್ಧ ಪೋಕ್ಸೊ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    October 18, 2026

    ಕೋಲ್ಕತ್ತಾ ದುರ್ಗಾ ಪೂಜಾ ಸಂಭ್ರಮದಲ್ಲಿ ಕಾಲ್ತುಳಿತ: 19 ಸಾವು, ಘಟನೆಗೆ ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ

    October 18, 2026

    ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣ : ಜಾಮೀನು ಪ್ರಶ್ನಿಸಿ ಸರ್ಕಾರದ ಅರ್ಜಿ, ಹೈಕೋರ್ಟ್‌ನಿಂದ ತಡೆ

    October 18, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ದಸರಾ ಸಂಭ್ರಮದ ನಡುವೆ ಪರೀಕ್ಷೆ ವಿವಾದ; ಸೈಂಟ್ ಆಗ್ನೆಸ್ ಕಾಲೇಜು ವಿದ್ಯಾರ್ಥಿನಿಯರಿಂದ ಪ್ರತಿಭಟನೆ
    ಕರಾವಳಿ ಸುದ್ದಿ

    ದಸರಾ ಸಂಭ್ರಮದ ನಡುವೆ ಪರೀಕ್ಷೆ ವಿವಾದ; ಸೈಂಟ್ ಆಗ್ನೆಸ್ ಕಾಲೇಜು ವಿದ್ಯಾರ್ಥಿನಿಯರಿಂದ ಪ್ರತಿಭಟನೆ

    adminBy adminOctober 12, 2026Updated:October 12, 2026No Comments1 Min Read

    ಮಂಗಳೂರು: ದಸರಾ ಸಂಭ್ರಮದ ನಡುವೆಯೇ ಕಾಲೇಜು ಆಡಳಿತ ಮಂಡಳಿಯು ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಿರುವುದನ್ನು ವಿರೋಧಿಸಿ, ನಗರದ ಖ್ಯಾತ ಸೈಂಟ್ ಆಗ್ನೆಸ್  ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಕಾಲೇಜು ಗೇಟ್ ಎದುರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

    ಮಂಗಳೂರಿನ ಬೆಂದೂರ್‌ವೆಲ್ ಬಳಿಯಿರುವ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಇಂದಿನಿಂದ ಅಕ್ಟೋಬರ್ 28ರವರೆಗೆ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆಗಳನ್ನು ಆಯೋಜಿಸಲಾಗಿದೆ.ಮಂಗಳೂರು ದಸರಾ ಕರಾವಳಿಯ ಪ್ರಮುಖ ಹಬ್ಬವಾಗಿದ್ದು, ಎಲ್ಲೆಡೆ ಸಂಭ್ರಮ ಮನೆಮಾಡಿದೆ. ಆದರೆ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ದಸರಾ ರಜೆಯನ್ನೇ ನೀಡದೆ ಪರೀಕ್ಷೆ ನಡೆಸಲು ಮುಂದಾಗಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

    ಕಾಲೇಜಿನ ನಡೆಯನ್ನು ಖಂಡಿಸಿ ಕಾಲೇಜಿನ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಾಥ್ ನೀಡಿದೆ.

    ಕಾಲೇಜು ಆಡಳಿತ ಮಂಡಳಿಯ ಈ ಕ್ರಮದಿಂದಾಗಿ ದಸರಾ ಆಚರಣೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಆಕ್ಷೇಪಿಸಿರುವ ನೂರಾರು ವಿದ್ಯಾರ್ಥಿಗಳು, ಪರೀಕ್ಷೆಯನ್ನು ಬಹಿಷ್ಕರಿಸಿ ಕಾಲೇಜು ಮುಂಭಾಗ ಧರಣಿ ಕುಳಿತಿದ್ದಾರೆ.

    ಪರೀಕ್ಷೆಯನ್ನು ಮುಂದೂಡುವಂತೆ ಆಡಳಿತ ಮಂಡಳಿಗೆ ಮೊದಲೇ ಮನವಿ ಸಲ್ಲಿಸಲಾಗಿತ್ತು. ಆದರೂ ವಿದ್ಯಾರ್ಥಿಗಳ ಹಿತಾಸಕ್ತಿ ಕಡೆಗಣಿಸಿ, ಯಾವುದೇ ಸ್ಪಂದನೆ ನೀಡದೆ ಉದ್ದಟತನ ಪ್ರದರ್ಶಿಸಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

    ದಸರಾ ಹಬ್ಬದ ವೇಳೆ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ಸರಿಪಡಿಸಲು ಹಾಗೂ ಪರೀಕ್ಷೆಗಳನ್ನು ತಕ್ಷಣವೇ ಮುಂದೂಡುವಂತೆ ಆಗ್ರಹಿಸಿ ವಿದ್ಯಾರ್ಥಿ ಸಂಘಟನೆಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೂ ದೂರು ನೀಡಿವೆ. ಸದ್ಯ ಕಾಲೇಜು ಗೇಟ್ ಎದುರು ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರಿದಿದ್ದು, ಆಡಳಿತ ಮಂಡಳಿಯ ನಿರ್ಧಾರದ ವಿರುದ್ಧ ಘೋಷಣೆಗಳನ್ನು ಕೂಗಲಾಗುತ್ತಿದೆ.




    #dakshinakannada
    Previous Articleಸೋಮೇಶ್ವರ ಬೀಚ್‌ನಲ್ಲಿ ಸಮುದ್ರಪಾಲಾಗಿದ್ದ ಉಜಿರೆ SDM ಕಾಲೇಜು ವಿದ್ಯಾರ್ಥಿಯ ಮೃತದೇಹ ಪತ್ತೆ
    Next Article ಮಂಗಳೂರು: ಅಕ್ರಮ ಸಂಬಂಧದ ಶಂಕೆ ಹಿನ್ನೆಲೆ ಪತ್ನಿಯ ಕೊಲೆ ಆರೋಪ; ಪತಿ ಪೊಲೀಸ್ ವಶಕ್ಕೆ

    Related Posts

    ವೆಲೆನ್ಸಿಯಾ ಚರ್ಚ್ ಪಾದ್ರಿಯ ವಿರುದ್ಧ ಪೋಕ್ಸೊ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    October 18, 2026

    ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣ : ಜಾಮೀನು ಪ್ರಶ್ನಿಸಿ ಸರ್ಕಾರದ ಅರ್ಜಿ, ಹೈಕೋರ್ಟ್‌ನಿಂದ ತಡೆ

    October 18, 2026

    ಎಂಆರ್‌ಪಿಎಲ್‌ ಸ್ಫೋಟದಲ್ಲಿ ಗಾಯಗೊಂಡಿದ್ದ ಕಾರ್ಮಿಕ ಸಾವು : ₹1.2 ಕೋಟಿ ಪರಿಹಾರ ಘೋಷಣೆ

    October 17, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ವೆಲೆನ್ಸಿಯಾ ಚರ್ಚ್ ಪಾದ್ರಿಯ ವಿರುದ್ಧ ಪೋಕ್ಸೊ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    October 18, 2026

    ಕೋಲ್ಕತ್ತಾ ದುರ್ಗಾ ಪೂಜಾ ಸಂಭ್ರಮದಲ್ಲಿ ಕಾಲ್ತುಳಿತ: 19 ಸಾವು, ಘಟನೆಗೆ ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ

    October 18, 2026

    ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣ : ಜಾಮೀನು ಪ್ರಶ್ನಿಸಿ ಸರ್ಕಾರದ ಅರ್ಜಿ, ಹೈಕೋರ್ಟ್‌ನಿಂದ ತಡೆ

    October 18, 2026

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026

    ರಾಜ್ಯಾದ್ಯಂತ ಸ್ವೀಟ್ ಅಂಗಡಿಗಳ ತಪಾಸಣೆ ಚುರುಕು: 145 ಮಾದರಿ ಸಂಗ್ರಹ, 15 ಘಟಕಗಳಿಗೆ ನೋಟಿಸ್

    October 17, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.