Close Menu
    What's Hot

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026

    ಎಂಆರ್‌ಪಿಎಲ್‌ ಸ್ಫೋಟದಲ್ಲಿ ಗಾಯಗೊಂಡಿದ್ದ ಕಾರ್ಮಿಕ ಸಾವು : ₹1.2 ಕೋಟಿ ಪರಿಹಾರ ಘೋಷಣೆ

    October 17, 2026

    ಮಂಗಳೂರಿನ ಎಂಆರ್‌ಪಿಎಲ್‌ ಘಟಕದಲ್ಲಿ ಬೆಂಕಿ ಅವಘಡ : ನಷ್ಟ ಮೊತ್ತದ ವರದಿ ಬಹಿರಂಗ

    October 17, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ನಿವೃತ್ತಿಗೂ ಮುನ್ನವೇ ಸೇವೆಗೆ ವಿದಾಯ ಹೇಳಿದ ಹಿರಿಯ ಐಪಿಎಸ್ ಅಧಿಕಾರಿ ಎಸ್. ರವಿ
    ಕರ್ನಾಟಕ

    ನಿವೃತ್ತಿಗೂ ಮುನ್ನವೇ ಸೇವೆಗೆ ವಿದಾಯ ಹೇಳಿದ ಹಿರಿಯ ಐಪಿಎಸ್ ಅಧಿಕಾರಿ ಎಸ್. ರವಿ

    adminBy adminOctober 13, 2026No Comments1 Min Read

    ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಹಿರಿಯ ಐಪಿಎಸ್ ಅಧಿಕಾರಿ, ಹಾಲಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ  ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ  ಎಸ್. ರವಿ ಅವರು ಮಂಗಳವಾರ ದಿಢೀರನೆ ಸ್ವಯಂ ನಿವೃತ್ತಿ ಘೋಷಿಸಿ ರಾಜೀನಾಮೆ ಸಲ್ಲಿಸಿದ್ದಾರೆ.

    ಸೇವಾವಧಿಯ ನಿವೃತ್ತಿಗೆ ಕೇವಲ ಆರು ತಿಂಗಳು ಬಾಕಿ ಇರುವಾಗಲೇ ಅವರು ಈ ನಿರ್ಧಾರ ಕೈಗೊಂಡಿರುವುದು ಇಲಾಖೆ ಹಾಗೂ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಮತ್ತು ಕುತೂಹಲಕ್ಕೆ ಕಾರಣವಾಗಿದೆ.

    1998ರ ಬ್ಯಾಚ್‌ನ ದಕ್ಷ ಐಪಿಎಸ್ ಅಧಿಕಾರಿಯಾಗಿರುವ ಎಸ್. ರವಿ ಅವರು ಡಿಜಿ-ಐಜಿಪಿ ಕಚೇರಿಗೆ ತಮ್ಮ ಸ್ವಯಂ ನಿವೃತ್ತಿಯ ಅರ್ಜಿಯನ್ನು ಸಲ್ಲಿಸಿದ್ದು, ಡಿಜಿ-ಐಜಿಪಿ ಎಂ.ಎ. ಸಲೀಂ ಅವರು ಈ ಮಾಹಿತಿಯನ್ನು ದೃಢಪಡಿಸಿದ್ದಾರೆ. ನಿಯಮಾವಳಿಗಳ ಪ್ರಕಾರ ಮೂರು ತಿಂಗಳ ನೋಟಿಸ್ ಅವಧಿಯಲ್ಲಿ ಮುಂದುವರಿಯುವಂತೆ ಅವರಿಗೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

    ತಮ್ಮ ರಾಜೀನಾಮೆ ಪತ್ರದಲ್ಲಿ ಎಸ್. ರವಿ ಅವರು ‘ವೈಯಕ್ತಿಕ ಕಾರಣ’ಗಳನ್ನು ಉಲ್ಲೇಖಿಸಿದ್ದಾರೆ. ಆದರೆ ಇಲಾಖೆಯ ಉನ್ನತ ಮೂಲಗಳ ಪ್ರಕಾರ, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗಿನ ಆಂತರಿಕ ಮನಸ್ತಾಪ ಹಾಗೂ ಇತ್ತೀಚಿನ ಬೆಳವಣಿಗೆಗಳಿಂದ ಅಸಮಾಧಾನಗೊಂಡಿದ್ದೇ ಅವರ ಈ ದಿಢೀರ್ ನಿರ್ಧಾರಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.

    ಈ ಹಿಂದೆ ಮಹತ್ವದ ಗುಪ್ತಚರ ಇಲಾಖೆಯ ಎಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ರವಿ ಅವರನ್ನು ಕೆಲ ತಿಂಗಳುಗಳ ಹಿಂದಷ್ಟೇ ಯಾವುದೇ ಪೂರ್ವಸೂಚನೆಯಿಲ್ಲದೆ ಏಕಾಏಕಿ ಕೆಎಸ್‌ಆರ್‌ಪಿ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿತ್ತು. ಪ್ರಮುಖ ಹುದ್ದೆಯಿಂದ ಕೆಎಸ್‌ಆರ್‌ಪಿಗೆ ವರ್ಗಾಯಿಸಿದ್ದರಿಂದ ಅವರು ಬೇಸರಗೊಂಡಿದ್ದರು ಎನ್ನಲಾಗಿದ್ದು, ನಿವೃತ್ತಿ ಹತ್ತಿರವಿರುವಾಗಲೇ ಸೇವೆಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

     

     




    #karnataka
    Previous Articleಸೌಜನ್ಯ ಪ್ರಕರಣದಲ್ಲಿ ಹಣದ ವ್ಯವಹಾರದ ಆರೋಪ; ತಂದೆ-ತಾಯಿಯ ವಿರುದ್ಧ ವಕೀಲ ಅಮೃತೇಶ್ ಹೇಳಿಕೆ
    Next Article ಯೂತ್ ಕಾಂಗ್ರೆಸ್ ನಾಯಕನಿಗೆ ಬೆದರಿಕೆ ಹಾಕಿದ ಆರೋಪ; ವ್ಯಕ್ತಿ ಪೊಲೀಸ್ ವಶಕ್ಕೆ

    Related Posts

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026

    ರಾಜ್ಯಾದ್ಯಂತ ಸ್ವೀಟ್ ಅಂಗಡಿಗಳ ತಪಾಸಣೆ ಚುರುಕು: 145 ಮಾದರಿ ಸಂಗ್ರಹ, 15 ಘಟಕಗಳಿಗೆ ನೋಟಿಸ್

    October 17, 2026

    ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ; ಏಕರೂಪದ ದರ ನಿಗದಿಗೆ ಆರೋಗ್ಯ ಇಲಾಖೆ ಸಿದ್ಧತೆ

    October 17, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026

    ಎಂಆರ್‌ಪಿಎಲ್‌ ಸ್ಫೋಟದಲ್ಲಿ ಗಾಯಗೊಂಡಿದ್ದ ಕಾರ್ಮಿಕ ಸಾವು : ₹1.2 ಕೋಟಿ ಪರಿಹಾರ ಘೋಷಣೆ

    October 17, 2026

    ಮಂಗಳೂರಿನ ಎಂಆರ್‌ಪಿಎಲ್‌ ಘಟಕದಲ್ಲಿ ಬೆಂಕಿ ಅವಘಡ : ನಷ್ಟ ಮೊತ್ತದ ವರದಿ ಬಹಿರಂಗ

    October 17, 2026

    ಅಜಯ್ ದೇವಗನ್ ಬಂಗಲೆಯಲ್ಲಿ ಅಕ್ರಮ ನಿರ್ಮಾಣ ಆರೋಪ : ಬಿಎಂಸಿ ಬುಲ್ಡೋಜರ್ ಕಾರ್ಯಾಚರಣೆ‌ಗೆ ಸಿದ್ಧತೆ

    October 17, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ

    October 17, 2026

    ರಾಜ್ಯಾದ್ಯಂತ ಸ್ವೀಟ್ ಅಂಗಡಿಗಳ ತಪಾಸಣೆ ಚುರುಕು: 145 ಮಾದರಿ ಸಂಗ್ರಹ, 15 ಘಟಕಗಳಿಗೆ ನೋಟಿಸ್

    October 17, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.