Close Menu
    What's Hot

    ಎಂಆರ್‌ಪಿಎಲ್‌ ಸ್ಫೋಟದಲ್ಲಿ ಗಾಯಗೊಂಡಿದ್ದ ಕಾರ್ಮಿಕ ಸಾವು : ₹1.2 ಕೋಟಿ ಪರಿಹಾರ ಘೋಷಣೆ

    October 17, 2026

    ಮಂಗಳೂರಿನ ಎಂಆರ್‌ಪಿಎಲ್‌ ಘಟಕದಲ್ಲಿ ಬೆಂಕಿ ಅವಘಡ : ನಷ್ಟ ಮೊತ್ತದ ವರದಿ ಬಹಿರಂಗ

    October 17, 2026

    ಅಜಯ್ ದೇವಗನ್ ಬಂಗಲೆಯಲ್ಲಿ ಅಕ್ರಮ ನಿರ್ಮಾಣ ಆರೋಪ : ಬಿಎಂಸಿ ಬುಲ್ಡೋಜರ್ ಕಾರ್ಯಾಚರಣೆ‌ಗೆ ಸಿದ್ಧತೆ

    October 17, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಸಿಐಡಿ ವಶದಲ್ಲಿರುವ ಗಿಳಿಗಾಗಿ ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರಿನ ವ್ಯಕ್ತಿ
    ಕರ್ನಾಟಕ

    ಸಿಐಡಿ ವಶದಲ್ಲಿರುವ ಗಿಳಿಗಾಗಿ ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರಿನ ವ್ಯಕ್ತಿ

    adminBy adminOctober 14, 2026Updated:October 14, 2026No Comments2 Mins Read

    ಬೆಂಗಳೂರು: ಸಿಐಡಿ ಅರಣ್ಯ ಸಂಚಾರಿ ದಳ ವಶಕ್ಕೆ ಪಡೆದಿರುವ ಅಪರೂಪದ ‘ಆಫ್ರಿಕನ್ ಗ್ರೇ ಗಿಳಿ’ಯನ್ನು ಮರಳಿ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.

    ರಾಜಾಜಿನಗರದ ನಿವಾಸಿ ಆರ್. ಮಹೇಶ್ ಕುಮಾರ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ಏಕಸದಸ್ಯ ಪೀಠವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಸಿಐಡಿ ಅರಣ್ಯ ಸಂಚಾರಿ ದಳಕ್ಕೆ ನೋಟಿಸ್ ಜಾರಿ ಮಾಡಿದೆ. ಅರ್ಜಿಗೆ ಸಂಬಂಧಿಸಿದಂತೆ ಅಗತ್ಯ ಮಾಹಿತಿ ಪಡೆದು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸರ್ಕಾರಿ ವಕೀಲರಿಗೂ ನಿರ್ದೇಶನ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ನವೆಂಬರ್ 3ಕ್ಕೆ ಮುಂದೂಡಲಾಗಿದೆ.

    ಏನಿದು ಪ್ರಕರಣ? : ಅರ್ಜಿದಾರ ಮಹೇಶ್ ಕುಮಾರ್ ಅವರ ಪ್ರಕಾರ, ಅವರು ಹಕ್ಕಿ ಪ್ರೇಮಿಯಾಗಿದ್ದು, 2018ರಲ್ಲಿ ಸ್ನೇಹಿತರೊಬ್ಬರು ಅಂಗವೈಕಲ್ಯ ಹೊಂದಿದ್ದ ಆಫ್ರಿಕನ್ ಗ್ರೇ ಗಿಳಿಯನ್ನು ಅವರಿಗೆ ನೀಡಿದ್ದರು. ಒಂದು ರೆಕ್ಕೆಯಲ್ಲಿ ಚಲನೆ ಇಲ್ಲದ ಕಾರಣ ಗಿಳಿಗೆ ಹಾರಲು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಮಾನವೀಯ ದೃಷ್ಟಿಯಿಂದ ಅದಕ್ಕೆ ವೈದ್ಯಕೀಯ ಚಿಕಿತ್ಸೆ ಕೊಡಿಸಿ, ಪ್ರೀತಿಯಿಂದ ಆರೈಕೆ ಮಾಡುತ್ತಿದ್ದರು ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ. ಆದರೆ, 2026ರ ಜುಲೈ 27ರಂದು ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ತಮ್ಮ ನಿವಾಸದಲ್ಲಿದ್ದ ಗಿಳಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

    ಗಿಳಿಯನ್ನು ವಶಕ್ಕೆ ಪಡೆದ ಬಳಿಕ ಜುಲೈ 31ರಂದು ಅಧಿಕಾರಿಗಳು ನೋಟಿಸ್ ಜಾರಿ ಮಾಡಿ, ತನಿಖೆಗೆ ಸಹಕರಿಸುವಂತೆ ಹಾಗೂ ಸಂಬಂಧಿತ ದಾಖಲೆಗಳನ್ನು ಹಾಜರುಪಡಿಸುವಂತೆ ಸೂಚಿಸಿದ್ದರು. ಸೂಚನೆ ಪಾಲಿಸದಿದ್ದರೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, 2023ರ ಸೆಕ್ಷನ್ 35(3)ರ ಅಡಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

    ತಾನು ಗಿಳಿಯನ್ನು ವ್ಯಾಪಾರದ ಉದ್ದೇಶಕ್ಕಾಗಿ ಖರೀದಿಸಿಲ್ಲ ಅಥವಾ ಮಾರಾಟ ಮಾಡಲು ಪ್ರಯತ್ನಿಸಿಲ್ಲ. ಹಾರಲು ಸಾಧ್ಯವಾಗದ ಅಂಗವಿಕಲ ಹಕ್ಕಿಗೆ ಆಶ್ರಯ ನೀಡಿ ಆರೈಕೆ ಮಾಡುತ್ತಿದ್ದೆ ಎಂದು ಮಹೇಶ್ ಕುಮಾರ್ ವಾದಿಸಿದ್ದಾರೆ. ಹೀಗಾಗಿ ಸಿಐಡಿ ನೀಡಿರುವ ಷೋಕಾಸ್ ನೋಟಿಸ್ ರದ್ದುಪಡಿಸಬೇಕು ಹಾಗೂ ವಶಪಡಿಸಿಕೊಂಡಿರುವ ಗಿಳಿಯನ್ನು ಮರಳಿ ತಮ್ಮ ಸುಪರ್ದಿಗೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಅವರು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠವು ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದ್ದು, ಪ್ರಕರಣದ ಮುಂದಿನ ಬೆಳವಣಿಗೆಗಳು ನ್ಯಾಯಾಲಯದ ವಿಚಾರಣೆಯ ಬಳಿಕ ಸ್ಪಷ್ಟವಾಗಲಿವೆ.




    #karnataka
    Previous Articleಕೊಚ್ಚಿ ಮಿನಿ ಕೂಪರ್ ಅಪಘಾತ ಪ್ರಕರಣ; ಪೊಲೀಸ್ ನಿರ್ಲಕ್ಷ್ಯದ ಆರೋಪ ತಳ್ಳಿಹಾಕಿದ ಇಲಾಖೆ
    Next Article ಕೊಲ್ಲೂರು ಕ್ಷೇತ್ರದಲ್ಲಿ ದುರಂತ; ಲೈಟ್ ಸೆಟ್ ಬಿದ್ದು ವೃದ್ಧ ಭಕ್ತನಿಗೆ ಗಂಭೀರ ಗಾಯ

    Related Posts

    ರಾಜ್ಯಾದ್ಯಂತ ಸ್ವೀಟ್ ಅಂಗಡಿಗಳ ತಪಾಸಣೆ ಚುರುಕು: 145 ಮಾದರಿ ಸಂಗ್ರಹ, 15 ಘಟಕಗಳಿಗೆ ನೋಟಿಸ್

    October 17, 2026

    ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ; ಏಕರೂಪದ ದರ ನಿಗದಿಗೆ ಆರೋಗ್ಯ ಇಲಾಖೆ ಸಿದ್ಧತೆ

    October 17, 2026

    ಗೂಗಲ್ ಮ್ಯಾಪ್ ಎಡವಟ್ಟು: ದಟ್ಟ ಕಾಡಿನಲ್ಲಿ ಸಿಲುಕಿದ 9 ಟೆಕ್ಕಿಗಳು; ಬೆಳಗ್ಗೆ ಪೊಲೀಸರಿಂದ ರಕ್ಷಣೆ

    October 17, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಎಂಆರ್‌ಪಿಎಲ್‌ ಸ್ಫೋಟದಲ್ಲಿ ಗಾಯಗೊಂಡಿದ್ದ ಕಾರ್ಮಿಕ ಸಾವು : ₹1.2 ಕೋಟಿ ಪರಿಹಾರ ಘೋಷಣೆ

    October 17, 2026

    ಮಂಗಳೂರಿನ ಎಂಆರ್‌ಪಿಎಲ್‌ ಘಟಕದಲ್ಲಿ ಬೆಂಕಿ ಅವಘಡ : ನಷ್ಟ ಮೊತ್ತದ ವರದಿ ಬಹಿರಂಗ

    October 17, 2026

    ಅಜಯ್ ದೇವಗನ್ ಬಂಗಲೆಯಲ್ಲಿ ಅಕ್ರಮ ನಿರ್ಮಾಣ ಆರೋಪ : ಬಿಎಂಸಿ ಬುಲ್ಡೋಜರ್ ಕಾರ್ಯಾಚರಣೆ‌ಗೆ ಸಿದ್ಧತೆ

    October 17, 2026

    ರಾಜ್ಯಾದ್ಯಂತ ಸ್ವೀಟ್ ಅಂಗಡಿಗಳ ತಪಾಸಣೆ ಚುರುಕು: 145 ಮಾದರಿ ಸಂಗ್ರಹ, 15 ಘಟಕಗಳಿಗೆ ನೋಟಿಸ್

    October 17, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ರಾಜ್ಯಾದ್ಯಂತ ಸ್ವೀಟ್ ಅಂಗಡಿಗಳ ತಪಾಸಣೆ ಚುರುಕು: 145 ಮಾದರಿ ಸಂಗ್ರಹ, 15 ಘಟಕಗಳಿಗೆ ನೋಟಿಸ್

    October 17, 2026

    ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ; ಏಕರೂಪದ ದರ ನಿಗದಿಗೆ ಆರೋಗ್ಯ ಇಲಾಖೆ ಸಿದ್ಧತೆ

    October 17, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.